ಬೆಂಗಳೂರು: ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್, ಮತ್ತೊಮ್ಮೆ ಅರ್ಥಹೀನವಾಗಿ ಮಾತನಾಡಿದ್ದಾರೆ. ದೇಶದ ಚಿಲ್ಲರೆ ಹಣದುಬ್ಬರ ದರ 17 ತಿಂಗಳ ಗರಿಷ್ಟ ಮಟ್ಟ ತಲುಪಿದೆ. ಸಗಟು ಹಣದುಬ್ಬರ ದರ 4 ತಿಂಗಳ ಗರಿಷ್ಠ ಮಟ್ಟ ತಲುಪಿದೆ.ಇಷ್ಟಾದರೂ ಹಣದುಬ್ಬರ ಅತಿಯಾಗಿ ಏರಿಕೆಯಾಗಿಲ್ಲ ಎಂದರೆ ಏನರ್ಥ? ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ತರಾಟೆಗೆತ್ತಿಕೊಂಡಿದ್ದಾರೆ.
ಏರುತ್ತಿರುವ ಸಗಟು ಹಣದುಬ್ಬರ ಭವಿಷ್ಯದಲ್ಲಿ ಚಿಲ್ಲರೆ ಹಣದುಬ್ಬರದ ಮೇಲೂ ನೇರ ಪರಿಣಾಮ ಬೀರಲಿದೆ.ಈಗಾಗಲೇ ಬೆಲೆಯೇರಿಕೆಯಿಂದ ಜನಸಾಮಾನ್ಯ ತತ್ತರಿಸಿದ್ದಾನೆ. ಹಣದುಬ್ಬರ ಹೀಗೆ ಏರುತ್ತಿದ್ದರೆ ಜನರ ಬದುಕು ಏನಾಗಬೇಕು? ಎಂದು ಅವರು ಪ್ರಶ್ನಿಸಿದ್ದಾರೆ.
ಹಣದುಬ್ಬರದ ಬಗ್ಗೆ ಆರ್ಥಿಕ ತಜ್ಞರ ಆತಂಕ ಭಾರತದ ಮಟ್ಟಿಗೆ ಎಚ್ಚರಿಕೆಯ ಕರೆಗಂಟೆ.ಅರ್ಥ ಸಚಿವರು ಇದನ್ನು ಅರ್ಥ ಮಾಡಿಕೊಳ್ಳಲಿ ಎಂದು ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


