ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು, ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಬಂಧಿಸಿದ ನಂತರ, ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠವು ಈ ವಿಷಯದ ಅರ್ಹತೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿತು. ಇದು ನ್ಯಾಯಾಂಗ ಹಸ್ತಕ್ಷೇಪದ ವ್ಯಾಪ್ತಿಯಿಂದ ಹೊರಗಿದೆ ಎಂದು ಹೇಳಿದೆ.
“ಕಾನೂನಿಗೆ ಅನುಸಾರವಾಗಿ ಪರಿಶೀಲಿಸುವುದು ಸರ್ಕಾರದ ಇತರ ವಿಭಾಗಗಳಿಗೆ” ಎಂದು ನ್ಯಾಯಮೂರ್ತಿ ಮಲ್ಮೀತ್ ಪಿಎಸ್ ಅರೋರಾ ಅವರನ್ನೊಳಗೊಂಡ ಪೀಠ ಹೇಳಿದೆ.
ವಿಚಾರಣೆಯ ಸಂದರ್ಭದಲ್ಲಿ, ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಲು ಕಾನೂನು ಅಡ್ಡಿಯನ್ನು ತೋರಿಸುವಂತೆ, ನ್ಯಾಯಾಲಯವು ಅರ್ಜಿದಾರರಾದ ಸುರ್ಜಿತ್ ಸಿಂಗ್ ಯಾದವ್ ಅವರ ವಕೀಲರನ್ನು ಕೇಳಿತು. ಪ್ರಾಯೋಗಿಕ ತೊಂದರೆಗಳಿರಬಹುದು, ಆದರೆ ಅದು ಬೇರೆಯದು. ಕಾನೂನು ತಡೆ ಎಲ್ಲಿದೆ?” ಎಂದು ನ್ಯಾಯಾಲಯ ಕೇಳಿದೆ.
ಪ್ರಸ್ತುತ ನ್ಯಾಯಾಲಯವು ಕೇಜ್ರಿವಾಲ್ ಅವರ ಇಡಿ ಕಸ್ಟಡಿಯನ್ನು ಏಪ್ರಿಲ್ ಒಂದರವರೆಗೂ ವಿಸ್ತರಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


