ನವದೆಹಲಿ: ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಬಾಲಿವುಡ್ ನಟ ಶಾರೂಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ನಿರ್ದೋಷಿ ಎಂದು ಕ್ಲೀನ್ ಚಿಟ್ ನೀಡಲಾಗಿದೆ.
ಸುದೀರ್ಘ ವಿಚಾರಣೆ ನಡೆಸಿದ ರಾಷ್ಟ್ರೀಯ ಮಾದಕ ವಸ್ತು ನಿಗ್ರಹ ದಳ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದು, ಅದರಲ್ಲಿ ಆರ್ಯನ್ಖಾನ್ ವಿರುದ್ಧ ಆರೋಪ ಸಾಬೀತು ಪಡಿಸಲು ಸೂಕ್ತ ಸಾಕ್ಷ್ಯಾಧಾರಗಳು ಇಲ್ಲ ಎಂದು ಹೇಳಲಾಗಿದೆ.
ಆರ್ಯನ್ ಖಾನ್ ಜತೆಗಿದ್ದ ಇತರ ನಾಲ್ವರ ವಿರುದ್ಧವೂ ಪ್ರಕರಣವನ್ನು ಕೈ ಬಿಡಲಾಗಿದೆ. ಕಳೆದ ಅಕ್ಟೋಬರ್ 2ರಂದು ಮುಂಬೈನಿಂದ ಗೋವಾಕ್ಕೆ ಹೊರಟ್ಟಿದ್ದ ಐಷಾರಾಮಿ ಹಡಗಿನಲ್ಲಿ ಪಾರ್ಟಿ ನಡೆಯುತ್ತಿದ್ದು, ಅದರಲ್ಲಿ ಮಾದಕ ವಸ್ತು ಬಳಕೆಯಾಗುತ್ತಿದೆ ಎಂಬ ಸುಳಿವು ಆಧರಿಸಿ ದಾಳಿ ನಡೆಸಿದ ಎನ್ಸಿಬಿ ಆರ್ಯನ್ಖಾನ್ ಸೇರಿದಂತೆ 8 ಮಂದಿಯನ್ನು ಬಂಧಿಸಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5