ಬಿಜೆಪಿಗರು ತಮ್ಮ ಆಡಳಿತಾವಧಿಯಲ್ಲಿ ದಲಿತರ ಬಗ್ಗೆ ಯಾವುದೇ ಯೋಜನೆ ರೂಪಿಸಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಬಿಜೆಪಿಗೆ ದಲಿತರ ಬಗ್ಗೆ ಕಾಳಜಿ ಹೆಚ್ಚಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯದ ಹಣವನ್ನು ಎಲ್ಲೆಲ್ಲಿ ಬಳಕೆ ಮಾಡಬೇಕು ಎಂಬ ಅರಿವು ನಮ್ಮ ಸರ್ಕಾರಕ್ಕೆ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಅವರು ಮಾತನಾಡಿದರು.
ಈ ಎರಡು ಸಮುದಾಯಗಳ ಹಣ ಸದ್ಬಳಕೆ ಬಗ್ಗೆ ಸೂಕ್ತ ಕಾನೂನನ್ನು ತಂದಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರು. ಈ ಬಗ್ಗೆ ಮಾತನಾಡಲು ಬಿಜೆಪಿ ನಾಯಕರಿಗೆ ಯೋಗ್ಯತೆ ಇಲ್ಲ ಎಂದರು.
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಲಿದ್ದಾರೆ ಎಂದು ಭಾವಿಸಿದ್ದೆವು. ಆದರೆ ರಾಜ್ಯಕ್ಕೆ ಬೊಮ್ಮಾಯಿ ಅವರ ಕೊಡುಗೆ ಶೂನ್ಯ, ಪ್ರಮುಖ ವಿಪಕ್ಷವಾಗಿ ಬಿಜೆಪಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಕೇವಲ ಅನಗತ್ಯವಾಗಿ ಟೀಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


