ಗುಡ್ಡಗಾಡು ರಾಜ್ಯ ಅಸ್ಶಾಂನಲ್ಲಿ ಪ್ರವಾಹ ಪರಿಸ್ಥಿತಿ ಉಲ್ಬಣಗೊಂಡಿದೆ. ರಾಜ್ಯದ ಏಳು ಜಿಲ್ಲೆಗಳಲ್ಲಿ ಪರಿಸ್ಥಿತಿ ಅಯೋಮಯವಾಗಿದ್ದು, ೫೭,೦೦೦ ಜನರು ತೀವ್ರ ತೊಂದರೆಗೊಳಗಾಗಿದ್ದಾರೆ. ಸಾವಿರಾರು ಎಕರೆ ಪ್ರದೇಶಗಳಲ್ಲಿ ಬೆಳೆ ನೀರು ಪಾಲಾಗಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕಂದಾಯ ವ್ಯಾಪ್ತಿಗೆ ಬರುವ ಸುಮಾರು ೨೨೨ ಗ್ರಾಮಗಳು ಜಲಾವೃತಗೊಂಡು ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆಗಳು ನೀರುಪಾಲಾಗಿವೆ.ಪ್ರವಾಹಕ್ಕೆ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ಪ್ರವಾಹದ ಬಿಸಿ ಕೇವಲ ಮನಷ್ಯರಿಗಷ್ಟೇ ಅಲ್ಲ. ಪ್ರಾಣಿಗಳಿಗೆ ತಟ್ಟಿವೆ. ೧೪೩೪ ಪ್ರಾಣಿಗಳು ಪ್ರವಾಠಹದ ಹೊಡೆತಕ್ಕೆ ಕೊಚ್ಚಿ ಹೋಗಿವೆ. ೨೦೨ ಮನೆಗಳು ಮನೆಗಳು ನೀರುಪಾಲಾಗಿವೆ. ಮನೆ-ಮಠ ಕಳೆದುಕೊಂಡು ಸಾವಿರಾರು ಜನರು ನಿರ್ಗತಿಕರಾಗಿದ್ದಾರೆ.
ಸಂಕಷ್ಟಕ್ಸೆ ಸಿಲುಕಿವವರನ್ನು ರಕ್ಷಿಸಲು ರಾಜ್ಯ ಸರ್ಕಾರ ಅರೆ ಸೇನಾ ಪಡೆ, ಸೇನೆ,ತುರ್ತು ಸೇವೆಗಳನ್ನು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸಲಾಗಿದೆ. ಭಾರೀ ಮಳೆ,ಪ್ರವಾಹದಿಂದಾಗಿ ಅನೇಕ ರಸ್ತೆಗಳು, ಸೇತುವೆಗಳು ಹಾಗೂ ನೀರಾವರಿ ನಾಲೆಗಳಿಗೆ ಅಪಾರ ಹಾನಿ ಸಂಭವಿಸಿದೆ.
ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ೧೨ ಗ್ರಾಮಗಳಲ್ಲಿ ಭೂ ಕುಸಿತ ಉಂಟಾಗಿದೆ. ಭಾರೀ ಮಳೆ ಮತ್ತು ಭೂಕುಸಿತದಿಂದಾಗಿ ರೈಲು ಸಂಚಾರದ ಮಾರ್ಗಗಳನ್ನು ಬದಲಿಸಲಾಗಿದೆ. ಡಿಟೋಕಚೀರಿ ರೈಲು ನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ೧೨೪೫ ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಇನ್ನೂ ೧೧೯ ಪ್ರಯಾಣಿಕರನ್ನು ಭಾರತೀಯ ವಾಯುಪಡೆಯ ಮೂಲಕ ಸುರಕ್ಷಿತವಾಗಿ ಪಾರುಮಾಡಲಾಗಿದೆ.
ಸಂಕಷ್ಟಕ್ಕೆ ಸಿಲುಕಿರುವ ಪ್ರಯಾಣಿಕರನ್ನು ಪಾರು ಮಾಡಲು ರೈಲ್ವೆ ಇಲಾಖೆ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸಲಾಗಿದೆ. ಪ್ರಯಾಣಿಕರಿಗೆ ಆಹಾರ ಮತ್ತು ನೀರು ಪೂರೈಕೆ ಮಾಡಲಾಗಿದೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB