ಬೆಂಗಳೂರು ಅಸಾನಿ ಚಂಡಮಾರುತ ಹಿನ್ನೆಲೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಕರಾವಳಿಯಲ್ಲಿ ಯೆಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಸಾದ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ .
ಅಸಾನಿ ಚಂಡಮಾರುತ ಹಿನ್ನೆಲೆ ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಆಂಧ್ರದ ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜನರಿಗೆ ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದ್ದು, ಮೀನುಗಾರರು ಸಮುದ್ರ ಇಳಿಯದಂತೆ ತಿಳಿಸಲಾಗಿದೆ.
ಇದೇ ವೇಳೆ ಆಂಧ್ರಪ್ರದೇಶ ತೀರಕ್ಕೆ ಚಿನ್ನದ ರಥವೊಂದು ಕೊಚ್ಚಿಕೊಂಡು ಬಂದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಇದನ್ನು ಚಂಡಮಾರುತ ಆಸಾನಿ ಎಫೆಕ್ಟ್ ಎನ್ನಲಾಗುತ್ತಿದೆ. ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಸುನ್ನಪಲ್ಲಿ ಕರಾವಳಿಯ ಗ್ರಾಮಗಳ ನಿವಾಸಿಗಳು ಮಂಗಳವಾರ (ಮೇ 10) ಚಿನ್ನದ ಬಣ್ಣದ ರಥವನ್ನು ದಡದಲ್ಲಿ ಕಂಡು ಆಶ್ಚರ್ಯಗೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


