ತುಮಕೂರು: ಭಾರತ್ ಸೈಟ್ಸ್ ಮತ್ತು ಗೈಡ್ಸ್ ರಾಜ್ಯ ಉಪಾಧ್ಯಕ್ಷರು (ಗೈಡ್), ಹಾಗೂ ಜಿಲ್ಲಾ ಮುಖ್ಯ ಆಯುಕ್ತರಾದ ಆಶಾ ಪ್ರಸನ್ನ ಕುಮಾರ್ ರವರು ಸೈಟ್ ಸಂಸ್ಥೆಯಲ್ಲಿ ಸಕ್ರಿಯವಾಗಿ ಸತತ 35 ವರ್ಷಗಳಿಂದ ವಿವಿಧ ಹುದ್ದೆಗಳನ್ನು ಅಲಂಕರಿಸಿ ಸ್ಕೌಟ್ಸ್ ಸಂಸ್ಥೆಯ ಕಾರ್ಯ ಚಟುವಟಿಕೆಗಳು, ಬೆಳವಣಿಗೆಗಳು ಮತ್ತು ರಾಷ್ಟ್ರ, ರಾಜ್ಯ, ಜಿಲ್ಲಾ ಮಟ್ಟದ ಕಾರ್ಯಕ್ರಮಗಳಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಷ್ಟ್ರ ಸಂಸ್ಥೆಯವರು ರಾಷ್ಟ್ರಮಟ್ಟದ ಸಿಲ್ವರ್ ಸ್ಟಾರ್ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆಯುವ 75 ರಾಷ್ಟ್ರೀಯ ಜಾಂಬೂರಿಯಲ್ಲಿ ನ.26ರಂದು ರಾಜ್ಯಭವನದಲ್ಲಿ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ರವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಈ ವೇಳೆ ಆಶಾ ಪ್ರಸನ್ನ ಕುಮಾರ್ ಅವರನ್ನು ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್. ಸಿಂಧ್ಯಾ ಅಭಿನಂದಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


