ಗೋಕಾಕ್: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿಯವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಶೋಕ್ ಪೂಜಾರಿ ಮನೆಗೆ ಭೇಟಿ ನೀಡಿ, ಮನವೊಲೀಸಿದರು.
ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಅಶೋಕ್ ಪೂಜಾರಿ ಅಸಮಾಧಾನ ಆಗಿದ್ದರು. ಇಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಅಶೋಕ್ ಪೂಜಾರಿ ಅವರು ನಿರ್ಧರಿಸಿದ್ದರು. ಕಾರಣ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಾಜಿ ಶಾಸಕ ಅಶೋಕ ಪಟ್ಟಣ, ಲಕ್ಷ್ಮಣ ಸವದಿ, ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ ಕಡಾಡಿ ಸೇರಿದಂತೆ ಅನೇಕ ನಾಯಕರು ಅಶೋಕ್ ಪೂಜಾರಿ ಅವರನ್ನು ಮನವೋಲಿಸಿದರು.
ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಹೈಕಮಾಂಡ್ ನಿರ್ದೇಶನದಂತೆ ಜಿಲ್ಲೆಯಲ್ಲಿ ಬಂಡಾಯ ಎದ್ದ ಅಭ್ಯರ್ಥಿಗಳನ್ನು ಮನವೊಲಿಸುವ ಪ್ರಯತ್ನ ಮಾಡಿದ್ದು, ಒಟ್ಟಾರೇ ಕಾಂಗ್ರೆಸ್ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


