ಎಎಸ್ ಐ ನಾರಾಯಣಸ್ವಾಮಿ ಅವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಅವರ ಪುತ್ರನ ಮೇಲೆ ಗುಂಡು ಹಾರಿಸಿ ದರೋಡೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಪೇರೇಸಂದ್ರ ಗ್ರಾಮದಲ್ಲಿನ ಎಎಸ್ ಐ ನಾರಾಯಣ ಸ್ವಾಮಿ ಮನೆಯಲ್ಲಿ ಈ ಘಟನೆ ನಡೆದಿದೆ. ನಾರಾಯಣ ಸ್ವಾಮಿ ಅವರ ಪುತ್ರ ಶರತ್ ಗೆ ಮೂರು ಗುಂಡು ತಗುಲಿದ್ದು, ಚಿಕ್ಕಬಳ್ಳಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರ ನಾಲ್ವರು ದುಷ್ಕರ್ಮಿಗಳು ಮನೆಗೆ ನುಗ್ಗಿ ಶರತ್ ಮೇಲೆ ಗುಂಡು ಹಾರಿಸಿ ಪತ್ನಿ ಹಾಗೂ ಸೊಸೆ ಮೈಮೇಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


