nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026
    Facebook Twitter Instagram
    ಟ್ರೆಂಡಿಂಗ್
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!
    • ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
    • RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
    • ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಸ್ಪತ್ರೆಯಲ್ಲಿ ಅಮಾನವೀಯವಾಗಿ ವರ್ತಿಸಿದರೆ ಕೆಲಸದಿಂದ ವಜಾ: ಸಚಿವ ಸುಧಾಕರ್ ಎಚ್ಚರಿಕೆ
    ರಾಜ್ಯ ಸುದ್ದಿ November 5, 2022

    ಆಸ್ಪತ್ರೆಯಲ್ಲಿ ಅಮಾನವೀಯವಾಗಿ ವರ್ತಿಸಿದರೆ ಕೆಲಸದಿಂದ ವಜಾ: ಸಚಿವ ಸುಧಾಕರ್ ಎಚ್ಚರಿಕೆ

    By adminNovember 5, 2022No Comments2 Mins Read
    sudhakar

    ಆಸ್ಪತ್ರೆಗಳಲ್ಲಿ ವೈದ್ಯರು, ವೈದ್ಯಾಧಿಕಾರಿಗಳು ಅಮಾನವೀಯವಾಗಿ ನಡೆದುಕೊಂಡರೆ ಕೇವಲ ಅಮಾನತಲ್ಲ, ಕೆಲಸದಿಂದಲೇ ವಜಾ ಮಾಡಲಾಗುವುದು. ಈ ಕುರಿತು ವಜಾ ಮಾಡಲು ಕಾನೂನಿನಲ್ಲಿ ಬದಲಾವಣೆ ತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

    ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ತಾಯಿ ಹಾಗೂ ನವಜಾತ ಶಿಶುಗಳ ಮರಣದ ದುರ್ಘಟನೆ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಅಧಿವೇಶನದಲ್ಲೇ ಕಾನೂನು ತಿದ್ದುಪಡಿ ತರಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

    ನತದೃಷ್ಟ ಹೆಣ್ಣುಮಗಳನ್ನು ಬಾಲಕಿಯರ ಮಂದಿರಕ್ಕೆ ದಾಖಲಿಸಲಾಗಿದೆ. ಆಕೆಗೆ ಸರ್ಕಾರದಿಂದಲೇ 5 ಲಕ್ಷ ರೂ. ಎಫ್‌ಡಿ ಇರಿಸಲು ಕ್ರಮ ವಹಿಸಲಾಗಿದೆ. ಹಾಗೆಯೇ ಆಕೆಯ ಶೈಕ್ಷಣಿಕ ಭವಿಷ್ಯವನ್ನೂ ರೂಪಿಸಲಾಗುವುದು. ಈ ಘಟನೆಯಲ್ಲಿ ಅಮಾನವೀಯವಾಗಿ ನಡೆದುಕೊಂಡ ವೈದ್ಯರು, ಸಿಬ್ಬಂದಿಗೆ ಹಾಗೂ ಜಿಲ್ಲಾ ಸರ್ಜನ್‌ ಗೆ, ಆಡಳಿತ ವೈಫಲ್ಯ ಎಂದು ಪರಿಗಣಿಸಿ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ. ಕರ್ತವ್ಯದಲ್ಲಿರುವ ವೈದ್ಯರಿಗೆ ಕೂಡ ಪ್ರಕರಣದ ಗಂಭೀರತೆ ಬಗ್ಗೆಯೂ ತಿಳಿಸಲಾಗಿದೆ. ಹಾಗೆಯೇ ಅವರಿಗೂ ಶೋಕಾಸ್‌ ನೋಟಿಸ್‌ ನೀಡಿ 24 ಗಂಟೆಯೊಳಗೆ ಉತ್ತರ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದರು.

    ಈ ರೀತಿಯ ಘಟನೆ ಎಂದೂ ಮರುಕಳಿಸಬಾರದು. ಅದಕ್ಕಾಗಿ ಎಲ್ಲಾ ಕ್ರಮಗಳನ್ನು ವಹಿಸಲಾಗಿದೆ. ಯಾವುದೇ ರೋಗಿ ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದಾಗ ಯಾವ ದಾಖಲೆಗಳೂ ಮುಖ್ಯವಲ್ಲ. ತಾಯಿ ಕಾರ್ಡ್‌, ಆಧಾರ್‌ ಕಾರ್ಡ್‌ಗಳನ್ನು ಚಿಕಿತ್ಸೆ ನೀಡಿದ ಬಳಿಕವೂ ಕೇಳಬಹುದು. ಈ ಬಗ್ಗೆ ಹಿಂದಿನಿಂದಲೂ ಸೂಚನೆ ಇದೆ. ಖಾಸಗಿ ಆಸ್ಪತ್ರೆಗಳಲ್ಲಿ 76 ತುರ್ತು ಸೇವೆಗಳನ್ನು ಜೋಡಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಈ ಸೇವೆಗಳು ಇಲ್ಲವಾದರೆ, ಖಾಸಗಿ ಆಸ್ಪತ್ರೆಯಲ್ಲಿ ಆ ಸೇವೆ ಪಡೆಯಬಹುದು. ಆಗ ಸರ್ಕಾರವೇ ವೆಚ್ಚ ಭರಿಸುತ್ತದೆ ಎಂದರು.

    ಕರಾಳ ಘಟನೆ

    ಎಲ್ಲಾ ಸೌಲಭ್ಯಗಳು ಇದ್ದರೂ, ಆರೋಗ್ಯ ಸಿಬ್ಬಂದಿ ಮಾಡಿದ ಕೆಲಸದಿಂದ ಸರ್ಕಾರಕ್ಕೆ ಮುಜುಗರವಾಗಿದೆ. ಇದು ಇಡೀ ಮಾನವ ಸಂಕುಲಕ್ಕೆ ಕರಾಳ ದಿನವಾಗಿದೆ. ಇದಕ್ಕಾಗಿ ನಾನು ಬಹಳ ವಿಷಾದ, ಸಹಾನುಭೂತಿ ವ್ಯಕ್ತಪಡಿಸುತ್ತೇನೆ ಎಂದರು.

    ಈ ಕುಟುಂಬದ ಸಂಬಂಧಿಕರನ್ನು ಪತ್ತೆ ಮಾಡಲು 36 ಗಂಟೆಗಳಿಂದ ಪೊಲೀಸರು ಶ್ರಮಿಸುತ್ತಿದ್ದಾರೆ. ಆದರೆ ಯಾರೂ ಇನ್ನೂ ಮುಂದೆ ಬಂದಿಲ್ಲ. ಇಂತಹ ಪರಿಸ್ಥಿತಿ ಇದ್ದರೂ, ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಲಿದೆ ಎಂದರು.

    ಗರ್ಭಿಣಿ ಯಾವುದೇ ರಾಜ್ಯದವರಾಗಿದ್ದರೂ, ದಾಖಲೆ ಇಲ್ಲದಿದ್ದರೂ ಆಸ್ಪತ್ರೆಗೆ ಬಂದಾಗ ಚಿಕಿತ್ಸೆ ನೀಡಿ ಹೆರಿಗೆ ಮಾಡಿಸಬೇಕಿತ್ತು. ಮಾನವೀಯತೆಯಿಂದ ಅವರೊಂದಿಗೆ ನಡೆದುಕೊಳ್ಳಬೇಕಿತ್ತು.ಇಲ್ಲಿ ದಾಖಲೆ ಮುಖ್ಯವಲ್ಲ, ಜೀವ ಮುಖ್ಯ. ಕೆಲವರಿಂದ ಆದ ಈ ಘಟನೆಯಿಂದ ಇಡೀ ವ್ಯವಸ್ಥೆಗೆ ಕೆಟ್ಟ ಹೆಸರು ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ಸಿದ್ದರಾಮಯ್ಯಗೆ ಬಹಿರಂಗ ಸವಾಲು

    ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಮೈಸೂರು ಜಿಲ್ಲೆಯಲ್ಲಿ ಎಷ್ಟು ಶಿಶುಗಳು ಸತ್ತಿವೆ ಎಂದು ದಾಖಲೆ ನೀಡುತ್ತೇನೆ. ಆಗ ಸಿದ್ದರಾಮಯ್ಯನವರು ಅಥವಾ ಆಗಿನ ಆರೋಗ್ಯ ಸಚಿವರು ರಾಜೀನಾಮೆ ನೀಡಲಿಲ್ಲ. ಇಂತಹ ವಿಚಾರದಲ್ಲೂ ರಾಜಕೀಯ ಮಾಡುತ್ತಾರೆಂದರೆ ಇವರು ರಾಜಕೀಯ ನಾಯಕರು ಮಾತ್ರವಲ್ಲ, ಒಬ್ಬ ಉತ್ತಮ ಮಾನವನಾಗಲೂ ಸಾಧ್ಯವಿಲ್ಲ. ಇಷ್ಟು ಕೆಳ ಹಂತಕ್ಕೆ ಹೋಗಿ ಅವರು ತೀರ್ಮಾನ ಮಾಡಬಾರದು. ಇದರಲ್ಲೂ ರಾಜಕೀಯ ಮಾಡಬಾರದು ಎಂದರು.

    ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ, ಎಷ್ಟು ಆಸ್ಪತ್ರೆಗಳಲ್ಲಿ ಎಷ್ಟು ಸಾವುಗಳಾಗಿವೆ ಎಂಬ ದಾಖಲೆಗಳನ್ನು ನೀಡುತ್ತೇನೆ. ಅವರು ಕೂಡ ವಿರೋಧ ಪಕ್ಷದ ನಾಯಕರ ಸ್ಥಾನಕ್ಕೆ ರಾಜೀನಾಮೆ ನೀಡುವುದಾದರೆ, ನಾನು ಕೂಡ ಆರೋಗ್ಯ ಸಚಿವನ ಸ್ಥಾನಕ್ಕೆ ನೀಡುತ್ತೇನೆ. ಇದು ಬಹಿರಂಗ ಸವಾಲು ಎಂದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಭಾರೀ ಕಾನೂನು…

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.