ಬೆಂಗಳೂರು: ಯುವ ವಿಜ್ಞಾನಿ ಅಶುತೋಷ್ ಸಿಂಗ್ ಅವರ ಕಾರು ಅಡ್ಡಗಟ್ಟಿ ಸುಲಿಗೆಗೆ ಯತ್ನಿಸಿದ್ದ ಮೂವರು ಆರೋಪಿಗಳನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಗೊಲ್ಲರಹಟ್ಟಿ ನಿವಾಸಿ ಆರ್. ಮೈಲಾರಿ, ನವೀನ್ ಕುಮಾರ್, ಶಿವರಾಜ ಬಂಧಿತ ಆರೋಪಿಗಳು.
ಸೋಮಶೇಖರ್ ಮತ್ತು ಕೀರ್ತಿರಾಜ್ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು. ಆರೋಪಿಗಳು 24ರಂದು ರಾತ್ರಿ ಅಶುತೋಷ್ ಸಿಂಗ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದರು.


