ಬೆಂಗಳೂರು: ಡ್ರೋನ್ ಮೂಲಕ ಭೂ ಸರ್ವೆ ನಡೆಸಿ ಆಸ್ತಿ ವಿವರಗಳನ್ನು ಸಂಪೂರ್ಣ ಡಿಜಿಟಲ್ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.
ಈ ಕುರಿತು ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವರ್ಷದಲ್ಲಿ ಡ್ರೋನ್ ಮೂಲಕ ಸರ್ವೆ ಕಾರ್ಯ ಪೂರ್ಣಗೊಳಿಸಲಿದ್ದು, ಆಸ್ತಿ ವಿವರ ಸಂಪೂರ್ಣ ಡಿಜಿಟಲೀಕರಣ ಮಾಡಲಾಗುವುದು.
ಈ ಕಾರ್ಯ ಪೂರ್ಣಗೊಂಡ ನಂತರ ಭೂ ವಿವಾದಗಳು, ನಕಲಿ ದಾಖಲೆಗಳ ಸೃಷ್ಠಿ, ಕಂದಾಯ ಕಚೇರಿಗಳಿಗೆ ಅಲೆದಾಡುವುದು ತಪ್ಪುತ್ತದೆ ಎಂದು ಹೇಳಿದ್ದಾರೆ.ಇನ್ನು ಸರ್ವೆ ಕಾರ್ಯಕ್ಕಾಗಿ 258 ಕೋಟಿ ನೀಡಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


