ನವದೆಹಲಿ: ಅನಾರೋಗ್ಯಕ್ಕೆ ತುತ್ತಾಗಿದ್ದ ತಾಯಿಗೆ ಸಹಾಯಕ್ಕಾಗಿ ಕೋರಿದ ಬಾಲಕಿಯ ಮೇಲೆ ನೆರೆಮನೆಯಾತ ಅತ್ಯಾಚಾರವೆಸಗಿರುವ ಹೇಯ ಘಟನೆ ದೆಹಲಿಯಲ್ಲಿ ಬೆಳಕಿಗೆ ಬಂದಿದೆ.
ಈ ಘಟನೆ ಜನವರಿ 22ರಂದು ಸಂಭವಿಸಿದ್ದು, ಮರುದಿನ ದೆಹಲಿಯ ಪಾಂಡವ್ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಬಾಲಕಿ ದೂರು ದಾಖಲಿಸಿದ್ದಾಳೆ. ಗ್ರಾಮಕ್ಕೆ ಹೋಗಿದ್ದ ಬಾಲಕಿ ತನ್ನ ಅಸ್ವಸ್ಥ ತಾಯಿಯೊಂದಿಗೆ ಮನೆಯಲ್ಲಿ ಒಬ್ಬಳೆ ಇದ್ದಳು. ತಾಯಿಯ ಆರೋಗ್ಯ ಹದಗೆಟ್ಟ ಹಿನ್ನೆಲೆ ಬಾಲಕಿ ನೆರೆಹೊರೆಯವರ ಬಳಿ ಸಹಾಯ ಕೇಳಿದ್ದಾಳೆ.
ಈ ವೇಳೆ ಔಷಧಿ ಕೊಡಿಸಿ ಸಹಾಯ ಮಾಡುವ ನೆಪದಲ್ಲಿ ಆರೋಪಿ ಬಾಲಕಿಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಅಲ್ಲದೇ ಆಕೆಗೆ ಜೀವ ಬೆದರಿಕೆಯನ್ನೂ ಹಾಕಿದ್ದಾನೆ ಎಂದು ಬಾಲಿಕಯು ದೂರಿನಲ್ಲಿ ಉಲ್ಲೇಖಿಸಿದ್ದಾಳೆ.. ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ತಲೆ ಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ವರದಿ :ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy