ಹಾಸನ: ಸಾಕಷ್ಟು ಜನರ ಮೇಲೆ ದಾಳಿ ಮಾಡಿದ್ದ ನರ ಹಂತಕ ಕಾಡಾನೆ ಕರಡಿ ಕಡೆಗೂ ಸೆರೆ ಆಗಿದೆ. ಬೇಲೂರು ತಾಲ್ಲೂಕಿನ ವಾಟೇಹಳ್ಳಿಯ ಐಬಿಸಿ ಕಾಫಿ ತೋಟದಲ್ಲಿ ಅಭಿಮನ್ಯು ನೇತೃತ್ವದಲ್ಲಿ ಅರಣ್ಯ ಇಲಾಖೆ ತಂಡ ಹಂತಕ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಅಭಿಮನ್ಯು, ಪ್ರಶಾಂತ, ಸುಗ್ರೀವ, ಕರ್ನಾಟಕ ಭೀಮ, ಅಶ್ವತ್ಥಾಮ, ಮಹೇಂದ್ರ ಸೇರಿ ಎಂಟು ಆನೆಗಳಿಂದ ಭರ್ಜರಿ ಕಾರ್ಯಾಚರಣೆ ಮೂಲಕ ಕಾಡಾನೆ ಕರಡಿಯನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ.
ಬೇಲೂರು ತಾಲ್ಲೂಕಿನ ಮತ್ತಾವರ ಬಳಿ, ಜನವರಿ 4 ರಂದು ಕಾರ್ಮಿಕ ವಸಂತ್ ನನ್ನು ಕರಡಿ ಕಾಡಾನೆ ದಾಳಿ ಮಾಡಿ ಕೊಂದಿದ್ದು, ಬಳಿಕ ಬೇಲೂರು ಸಕಲೇಶಪುರ ಭಾಗದಲ್ಲಿ ಹಲವರ ಮೇಲೆ ದಾಳಿ ಮಾಡಿ ಈ ಒಂಟಿಸಲಗ ಆತಂಕ ಸೃಷ್ಟಿ ಮಾಡಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


