ತೆಲುಗು ದೇಶಂ ಪಕ್ಷದ ಸಂಸದ ಕಿಂಜರಾಪು ರಾಮಮೋಹನ್ ನಾಯ್ಡು 36ರ ವಯಸ್ಸಿನಲ್ಲಿ ಕೇಂದ್ರ ಸಚಿವರಾಗಿ ದಾಖಲೆ ಬರೆದಿದ್ದಾರೆ. ರಾಮಮೋಹನ್ ನಾಯ್ಡು ಅವರಿಗೆ ಈಗ ವಯಸ್ಸು ಕೇವಲ 36 ವರ್ಷ. ಇಷ್ಟು ಕಿರಿಯ ವಯಸ್ಸಿನಲ್ಲಿ ಕೇಂದ್ರ ಮಂತ್ರಿಯಾದ ದಾಖಲೆ ಅವರದ್ದಾಗಿದೆ.
ನರೇಂದ್ರ ಮೋದಿ ಸತತ ಮೂರು ಬಾರಿ ಪ್ರಧಾನಿ ಆದಂತೆ ರಾಮಮೋಹನ್ ನಾಯ್ಡು ಸತತ ಮೂರನೇ ಬಾರಿ ಸಂಸದರಾಗಿದ್ದಾರೆ. 2014ರಲ್ಲಿ ಅವರು 26ನೇ ವಯಸ್ಸಿಗೆ ಸಂಸದರಾಗಿದ್ದರು. ಎರಡನೇ ಅತ್ಯಂತ ಕಿರಿಯ ವಯಸ್ಸಿನ ಸಂಸದರೆಂಬ ದಾಖಲೆಯನ್ನು ಅವರು ಬರೆದಿದ್ದರು. ಈಗ ಅತ್ಯಂತ ಕಿರಿಯ ವಯಸ್ಸಿನ ಕೇಂದ್ರ ಮಂತ್ರಿ ಎಂಬ ದಾಖಲೆ ಅವರದ್ದಾಗಿದೆ.
ಆಂಧ್ರದ ಶ್ರೀಕಾಕುಲಂ ಕ್ಷೇತ್ರದಿಂದ ಟಿಡಿಪಿ ಟಿಕೆಟ್ನಲ್ಲಿ ಸತತವಾಗಿ ಮೂರನೇ ಬಾರಿ ಗೆದ್ದಿರುವ ರಾಮಮೋಹನ್ ರೆಡ್ಡಿ ಅವರು ಮಾಜಿ ಕೇಂದ್ರ ಸಚಿವ ಕೆ ಯರನ್ ನಾಯ್ಡು ಅವರ ಮಗ. ಪಕ್ಷ ಸಂಘಟನೆಯಲ್ಲಿ ಮಾತ್ರವಲ್ಲ, ಸಂಸದರಾಗಿಯೂ ರಾಮಮೋಹನ್ ನಾಯ್ಡು ಮೆಚ್ಚುಗೆ ಪಡೆದಿದ್ದಾರೆ. 2020ರಲ್ಲಿ ಸರ್ಕಾರದಿಂದ ಸಂಸದ ರತ್ನ ಪ್ರಶಸ್ತಿ ಕೂಡ ಲಭಿಸಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


