ತುಮಕೂರು: ಆಟವಾಡುತ್ತಿದ್ದ ಇಬ್ಬರು ಮಕ್ಕಳಿಗೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನಪ್ಪಿರುವ ದಾರುಣ ಘಟನೆ ತುಮಕೂರಿನ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ.
ಯತೀಶ್ (14) ಹಾಗೂ ಪ್ರಜ್ವಲ್(14) ಸ್ಥಳದಲ್ಲೇ ಮೃತಪಟ್ಟ ಬಾಲಕರಾಗಿದ್ದಾರೆ. ಮನೆ ಮೇಲೆ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಇಂದು ಮನೆಗೆ ಹೊಂದಿಕೊಂಡಂತೆ ಇದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಮುಟ್ಟಿದ ಪರಿಣಾಮ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಾಲಕರ ಸಾವಿಗೆ ಬೆಸ್ಕಾಂ ಇಲಾಖೆಯ ನಿರ್ಲಕ್ಷವೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


