ತಿಪಟೂರು: ಸರ್ಕಾರ ಈ ಕೂಡಲೇ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಬೇಕೆಂದು ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಮಾಜ ಸೇವಕ ಕೆ ಟಿ ಶಾಂತಕುಮಾರ್ ಒತ್ತಾಯಿಸಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಂಭಾಗದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಥಮ ದರ್ಜೆ ಕಾಲೇಜಿನಲ್ಲಿ 160ಕ್ಕೂ ಹೆಚ್ಚು ಉಪನ್ಯಾಸಕರಿದ್ದು, ಅವರಿಗೆ ಸರಿಯಾದ ರೀತಿಯಲ್ಲಿ ಸಂಬಳ ಸಿಗದ ಕಾರಣ ವಿದ್ಯಾರ್ಥಿಗಳಿಗೆ ಪಾಠ ನಡೆದಂತೆ ಆಗಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಬಹಳ ತೊಂದರೆಯಾಗುತ್ತಿದೆ. ಸುಮಾರು 3,600 ಹೆಚ್ಚಿನ ಮಕ್ಕಳು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುತ್ತಾರೆ. ಆದರೆ ಕಳೆದ 20ದಿನಗಳಿಂದ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸಿದೆ ಇರುವುದರಿಂದ ವಿದ್ಯಾರ್ಥಿಗಳಿಗಂತೂ ಸಾಕಷ್ಟು ತೊಂದರೆ ಆಗುತ್ತಿದೆ ಎಂದರು.
ಸರಕಾರ ಅತಿಥಿ ಉಪನ್ಯಾಸಕರನ್ನು ಸೇವಾ ಭದ್ರತೆ ಮತ್ತು ಸರಕಾರಿ ನೌಕರನಾಗಿ ಪರಿಗಣಿಸಬೇಕು. ಕಳೆದ 20 ವರ್ಷಗಳಿಂದ ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಆದರೆ ಸರ್ಕಾರ ಸರಿಯಾದ ಸಂಬಳ ಮತ್ತು ಕಾಯಂ ಮಾಡದೇ ಇರುವುದರಿಂದ ಅತಿಥಿ ಉಪನ್ಯಾಸಕರಿಗೆ ಜೀವನ ನಡೆಸುವುದು ಕಷ್ಟಕರವಾಗಿದೆ. ಇದಲ್ಲದೆ ಅತಿಥಿ ಉಪನ್ಯಾಸಕರು ಜೀವನ ಸಾಗಿಸಲು ಆಗದೆ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು ಈ ದೇಶದ ಬೆನ್ನೆಲುಬು ಇದ್ದಾಗೆ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಬಗ್ಗೆ ಗಮನ ಹರಿಸಬೇಕಾಗಿದೆ ಎಂದು ಈ ಕೂಡಲೇ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಶಾಂತಕುಮಾರ್ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲಿಕಿತಾ ಗೌಡ, ಜನವರಿ 7ನೇ ತಾರೀಖಿನಿಂದ ಶಿವಮೊಗ್ಗದಿಂದ ಬೆಂಗಳೂರಿಗೆ ಅತಿಥಿ ಉಪನ್ಯಾಸಕರು ಸರ್ಕಾರದ ಗಮನಸೆಳೆಯಲು ಪಾದ ಯಾತ್ರೆ ಕೈಗೊಂಡಿತ್ತು. ತಾಲೂಕಿನ ಕೆ.ಬಿ. ಕ್ರಾಸ್ ವರೆಗೂ ವಿದ್ಯಾರ್ಥಿಗಳು ಪಾದಯಾತ್ರೆ ಕೈಗೊಂಡಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಶಾಂತಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷ ದಿನೇಶ್ ಗೊರಗೋಡನಹಳ್ಳಿ ಸುದರ್ಶನ್ ಶಂಕರ್ ಚೇತನ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ವರದಿ: ಮಂಜು ಗುರುಗದಹಳ್ಳಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy