ತುಮಕೂರು: ಅತಿಥಿ ಉಪನ್ಯಾಸಕರ ಹೋರಾಟದ ಅಂಗವಾಗಿ ಹರ್ಷ ಶಾನಭೋಗರವರ ಮನೆಯಿಂದ ಬೆಂಗಳೂರಿನ ವಿಧಾನ ಸೌಧಕ್ಕೆ ಪಾದಯಾತ್ರೆ ನಡೆಯುತ್ತಿದ್ದು, ಈ ಪಾದಯಾತ್ರೆ ಕಡೂರಿನಿಂದ ಬಾಣವಾರಕ್ಕೆ ಆಗಮಿಸಿತು.
ಈ ವೇಳೆ ಹರ್ಷ ಶಾನಭೋಗರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಾರ್ವಜನಿಕರು ಪ್ರಾರ್ಥಿಸಿ, ಕ್ಯಾಂಡಲ್ ಹಿಡಿದು ರಸ್ತೆಯಲ್ಲಿ ಮೆರವಣಿಗೆ ನಡೆಸಿದರು.
ಪಾದಯಾತ್ರೆಯನ್ನುದ್ದೇಶಿಸಿ ಮಾತನಾಡಿದ ಸಂಚಾಲಕ ಲೋಕೇಶ್ ಬಿ.ಸಿ., ಉಪನ್ಯಾಸಕರಿಗೆ ಬಾಕಿ ಇರುವ 12 ತಿಂಗಳುಗಳ ವೇತನ ನೀಡಬೇಕು. ಅತಿಥಿ ಶಿಕ್ಷಕರನ್ನು 60 ವರ್ಷದವರೆಗೂ ಕೆಲಸದಲ್ಲಿ ಮುಂದುವರಿಸಲು ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪಾದಯಾತ್ರೆಯಲ್ಲಿ ಚಿಕ್ಕಮಗಳೂರು, ಹಾಸನ, ಹಾವೇರಿ, ಶಿವಮೊಗ್ಗ, ತುಮಕೂರು, ಬೆಂಗಳೂರು ನಗರ ಹಾಗೂ ಗದಗ ಅತಿಥಿ ಉಪನ್ಯಾಸಕರು ಭಾಗವಹಿಸಿದ್ದರು.
ವರದಿ: ಸೌಮ್ಯ ಎಸ್.ಬಿ. ಸಿರಾ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy