nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026
    Facebook Twitter Instagram
    ಟ್ರೆಂಡಿಂಗ್
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    • ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ
    • ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ
    • ತಿಪಟೂರಿನ ಟೈಮ್ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ: ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ರಶ್ಮಿಗೆ 1 ಲಕ್ಷ ರೂ. ಬಹುಮಾನ ಘೋಷಣೆ
    • ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ
    • ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ
    • ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ಧಾವಿಸಬೇಕು: ಡಾ.ರಫೀಕ್ ಅಹಮದ್ ಒತ್ತಾಯ
    ತುಮಕೂರು January 25, 2022

    ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ಧಾವಿಸಬೇಕು: ಡಾ.ರಫೀಕ್ ಅಹಮದ್ ಒತ್ತಾಯ

    By adminJanuary 25, 2022No Comments1 Min Read
    upanyasaka

    ತುಮಕೂರು: ಸುಮಾರು 30 ದಿನಗಳಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿರುವ ಅತಿಥಿ ಉಪನ್ಯಾಸಕರ ನೆರವಿಗೆ ಕೂಡಲೇ ಸರ್ಕಾರ ಧಾವಿಸಬೇಕು ಎಂದು ನಗರದ ಮಾಜಿ ಶಾಸಕ ರಫೀಕ್ ಅಹಮದ್ ಸರ್ಕಾರವನ್ನು ಆಗ್ರಹಿಸಿದರು.

    ನಗರದ ಜಿಲ್ಲಾಧಿಕಾರಿಗಳ ಎದುರು ಕಚೇರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನಾಕಾರರಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿ ಮಾತನಾಡಿ, ಅತಿಥಿ ಉಪನ್ಯಾಸಕರು ಅತ್ಯಂತ ಕಷ್ಟದ ಪರಿಸ್ಥಿತಿಯಲ್ಲಿದ್ದು, ಕನಿಷ್ಠ ಮಟ್ಟದ ಜೀವನ ಕಟ್ಟಿಕೊಳ್ಳಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ. ಸರ್ಕಾರಕ್ಕೆ ಅತಿಥಿ ಉಪನ್ಯಾಸಕರು ಸೇವಾ ಭದ್ರತೆ ಹಾಗೂ ಸೇವಾ ವಿಲೀನಿಕರಣಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಿದರೂ, ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳದೆ, ಅವರ ಒಗ್ಗಟ್ಟನ್ನು ಒಡೆಯುವ ಪ್ರಯತ್ನ ನಡೆಸುತ್ತಿದ್ದು, ಏಳೂವರೆ ಸಾವಿರ ಜನ ಅತಿಥಿ ಉಪನ್ಯಾಸಕರನ್ನು ಬೀದಿಗೆ ತಳ್ಳುವ ಪ್ರಯತ್ನ ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by

    ಹಾವು ಸಾಯಬಾರದು, ಕೋಲು ಮುರಿಯಬಾರದು ಎಂಬ ಗಾದೆಯಂತೆ ಸರಕಾರ ಅತಿಥಿ ಉಪನ್ಯಾಸಕರ ಹಿತರಕ್ಷಣೆಯಲ್ಲಿ ದ್ವಂದ್ವ ನೀತಿ ಅನುಸರಿಸುತ್ತಿದ್ದು, ಕೂಡಲೇ ಸರ್ಕಾರ ಇವರಿಗೆ ಸೇವಾ ಭದ್ರತೆ ಒದಗಿಸಿ ಖಾಯಂ ಉಪನ್ಯಾಸಕರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

    ಈಗಾಗಲೇ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಗಮನಕ್ಕೆ ಈ ವಿಷಯವನ್ನು ತಂದಿದ್ದು ಅವರು ಸಹ ಇದರ ಬಗ್ಗೆ ಧ್ವನಿ ಎತ್ತಿದ್ದಾರೆ. ತಾವು ಮುಖ್ಯಮಂತ್ರಿಗಳಿಗೆ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆಯಲಿದ್ದು, ತಕ್ಷಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುವುದಾಗಿ ತಿಳಿಸಿದರು.

    ಈಗಾಗಲೇ ಅನೇಕ ಮಂದಿ ಅತಿಥಿ ಉಪನ್ಯಾಸಕರು ಜೀವನ ನಿರ್ವಹಣೆ ಕಷ್ಟಕರವಾದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿ ಸೇವೆಯನ್ನು ವಿಲೀನಿಕರಣಗೊಳಿಸಿ ಅವರ ಜೀವನ ನಿರ್ವಹಣೆಗೆ ನೆರವಾಗಬೇಕೆಂದು ಆಗ್ರಹಿಸಿದರು.

    ಈ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯ ಜಿ.ಕೆ.ನಾಗಣ್ಣ ಸುನಿಲ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

    ವರದಿ: ರಾಜೇಶ್ ರಂಗನಾಥ , ತುಮಕೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026

    ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮಕ್ಕೆ ಸಿಪಿಎಂ ಆಗ್ರಹ

    April 12, 2026

    ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ

    April 11, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ನವದೆಹಲಿ: ಭಾರತದಲ್ಲಿ ಸಮಾನತೆಯನ್ನು ಹೋಗಲಾಡಿಸಿ, ಸಂವಿಧಾನವನ್ನು ನಾಶಪಡಿಸುವುದೇ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್…

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.