ತಿರುವನಂತಪುರ: ಕೇರಳದ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಅವರ ಚಾಲಕ 48 ವರ್ಷ ವಯಸ್ಸಿನ ಚೇರ್ತಾಲ ಮೂಲದ ತೇಜಸ್ ಅವರ ಮೃತದೇಹ ಭಾನುವಾರ ಬೆಳಿಗ್ಗೆ ರಾಜಭವನದ ತನ್ನ ಕ್ವಾರ್ಟರ್ಸ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ತೇಜಸ್ ಶನಿವಾರ ರಾತ್ರಿ ಕರ್ತವ್ಯ ನಿರತರಾ್ಗಿದ್ದು, ಅವರು ವಿಮಾನ ನಿಲ್ದಾಣಕ್ಕೆ ವಾಹನ ಚಲಾಯಿಸಿದ್ದರು. ಹಾಗೂ ರಾತ್ರಿ 9 ಗಂಟೆಯ ಹೊತ್ತಿಗೆ ಕ್ವಾರ್ಟರ್ಸ್ ಗೆ ಮರಳಿದ್ದರು.
ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಡೆತ್ ನೋಟ್ ದೊರಕಿದ್ದು ಇವರು ವೈಯಕ್ತಿಕ ಸಮಸ್ಯೆಯಿಂದ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ತೇಜಸ್ ಕೆಲವು ವರ್ಷಗಳಿಂದ ರಾಜಭವನದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
.