ಅತ್ಯಾಚಾರ ಮತ್ತು ಜೀವ ಬೆದರಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಜಿ.ಬಿ ಉಮೇಶ್ ರನ್ನ ಅಮಾನತು ಮಾಡಲಾಗಿದೆ.
ಸಿಪಿಐ ಜಿ.ಬಿ ಉಮೇಶ್ ಅಮಾನತುಗೊಳಿಸಿ ದಾವಣಗೆರೆ ಪೂರ್ವವಲಯ ಐಜಿಪಿ ತ್ಯಾಗರಾಜನ್ ಅವರು ಆದೇಶ ಹೊರಡಿಸಿದ್ದಾರೆ. ತನ್ನ ಸೋದರ ಮಾವನ ಮಗ ಜಿ.ಬಿ. ಉಮೇಶ್ ವಿರುದ್ಧ ಅತ್ಯಾಚಾರ, ಜೀವಬೆದರಿಕೆ ಆರೋಪ ಮಾಡಿ ಯುವತಿ ದೂರು ನೀಡಿದ್ದರು.
5 ವರ್ಷಗಳ ಹಿಂದೆ ದಾವಣಗೆರೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ಉಮೇಶ್ ನಿರಂತರವಾಗಿ ಅತ್ಯಾಚಾರ, ಮಾಡಿದ್ದು, ಪರಿಣಾಮವಾಗಿ ಐದು ಬಾರಿ ಗರ್ಭಪಾತ ಮಾಡಲಾಗಿದೆ ಎಂದು ಯುವತಿ ಆರೋಪಿಸಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


