ತುಮಕೂರು: 15 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ ಅಪರಾಧಿಗೆ ತುಮಕೂರಿನ ಪೋಕ್ಸೋ ನ್ಯಾಯಾಲಯವು 10 ವರ್ಷ ಜೈಲು ಹಾಗೂ 40 ಸಾವಿರ ದಂಡ ಹಾಕಿದ್ದು, ಅತ್ಯಾಚಾರ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿದೆ.
2019ರಲ್ಲಿ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. 28 ವರ್ಷದ ಮಂಜುನಾಥ್ ಎಂಬುವವನು 15 ವರ್ಷದ ಬಾಲಕಿಯನ್ನ ಅಪಹರಿಸಿ ಅತ್ಯಾಚಾರ ಮಾಡಿದ್ದ. ಈ ಬಗ್ಗೆ ಪೋಕ್ಸೋ ಪ್ರಕರಣ ದಾಖಲಾಗಿತ್ತು.
ವಿಚಾರಣೆ ನಡೆಸಿದ ತುಮಕೂರು ಪೋಕ್ಸೋ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದೆ. ನ್ಯಾಯಾಧೀಶ ಕೃಷ್ಣಯ್ಯ ಅವರು ಆದೇಶ ನೀಡಿದ್ದು, ಸರ್ಕಾರಿ ವಕೀಲೆ ಬಿ.ವಿ. ಗಾಯತ್ರಿ ರಾಜು ವಾದ ಮಂಡಿಸಿದ್ದರು. ಸದ್ಯ ಅತ್ಯಾಚಾರ ಆರೋಪಿಗೆ ಹತ್ತು ವರ್ಷ ಜೈಲು ಹಾಗೂ 40 ಸಾವಿರ ರೂ. ದಂಡ ವಿಧಿಸಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700