ತುಮಕೂರು: ಆಟೋ ಮತ್ತು ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಅಪಾಘತದಲ್ಲಿ ಬಾಲಕಿಯೋರ್ವಳು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಹೊಸಹಳ್ಳಿ ಬಳಿ ನಡೆದಿದೆ.
ಮೃತ ಬಾಲಕಿ ಯನ್ನು 12 ವರ್ಷದ ಪ್ರತಿಭಾ ಎಂದು ಗುರುತಿಸಲಾಗಿದೆ. ಕೊರಟಗೆರೆಯಿಂದ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್, ಎದುರಿನಿಂದ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದು ಅಪಾಘತದ ತ್ರೀವತೆಗೆ ಬಾಲಕಿಯು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನಾ ಸ್ಧಳಕ್ಕೆ ಆಗಮಿಸಿದ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದು ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy