ಮಂಗಳೂರಿನಲ್ಲಿ ಅಟೋದಲ್ಲಿ ಕುಕ್ಕರ್ ಸ್ಫೋಟ ಪ್ರಕರಣ ಉಗ್ರರ ಸಂಚು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ದೃಢಪಡಿಸಿದ್ದಾರೆ.
ಭಾನುವಾರ ಬೆಳಿಗ್ಗೆ ಟ್ವೀಟ್ ಮಾಡಿದ ಅವರು, ಉದ್ದೇಶಪೂರ್ವಕವಾಗಿ ಸಾವು ನೋವು ಹಾನಿ ಉಂಟು ಮಾಡಲು ಮಾಡಿದ್ದ ಸಂಚು ಇದಾಗಿದ್ದು, ಕೇಂದ್ರ ತನಿಖಾ ಸಂಸ್ಥೆಗಳ ಜೊತೆ ಕರ್ನಾಟಕ ಪೊಲೀಸ್ ಸೂಕ್ಷ್ಮವಾಗಿ, ಆಳವಾಗಿ ತನಿಖೆ ನಡೆಸಲಿದೆ ಎಂದು ಹೇಳಿದ್ದಾರೆ.
ಶನಿವಾರ ಸಂಜೆ 5 ಗಂಟೆಯ ವೇಳೆ ಮಂಗಳೂರಿನ ಪಂಪ್‍ವೆಲ್‍ನಿಂದ ನಾಗುರಿ ಕಡೆ ಚಲಿಸುತ್ತಿದ್ದ ಆಟೋ ಕಂಕನಾಡಿ ಪೊಲೀಸ್ ಠಾಣೆ ಬಳಿ ಸ್ಫೋಟಗೊಂಡಿತ್ತು. ದಾರಿ ಮಧ್ಯೆ ವ್ಯಕ್ತಿಯೊಬ್ಬ ಕೈಯಲ್ಲಿ ಕುಕ್ಕರ್ ಹಿಡಿದುಕೊಂಡು ಆಟೋ ಹತ್ತಿದ ಕೆಲವೇ ಕ್ಷಣಗಳಲ್ಲಿ ಸ್ಫೋಟ ಸಂಭವಿಸಿತ್ತು.
ಆಟೋದಲ್ಲಿ ಸ್ಫೋಟಗೊಂಡ ಕುಕ್ಕರ್ ನಲ್ಲಿ ನಟ್, ಬೋಲ್ಟ್, ಬ್ಯಾಟರಿ, ಸರ್ಕಿಟ್ ರೀತಿಯ ವೈರಿಂಗ್ ಇರುವ ವಸ್ತುಗಳು ಪತ್ತೆಯಾಗಿದೆ. ಲಘು ತೀವ್ರತೆ ಇರುವ ಸ್ಪೋಟಕ ಬಳಸಿರುವ ಶಂಕೆ ವ್ಯಕ್ತವಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯ, ಬಾಂಬ್ ನಿಷ್ಕ್ರೀಯ ದಳದಿಂದ ತೀವ್ರ ಪರಿಶೀಲನೆ ನಡೆಯುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


