ಪಾವಗಡ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯವನ್ನು ಖಂಡಿಸಿ, ತಾಲ್ಲೂಕಿನ ವೈ.ಎನ್ ಹೊಸಕೋಟೆ ಹೋಬಳಿ ಕೇಂದ್ರದಲ್ಲಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಪಾವಗಡ ತಾಲ್ಲೂಕು ಬಿಜೆಪಿ ಅಧ್ಯಕ್ಷ ದೊಡ್ಡಹಳ್ಳಿ ಅಶೋಕ್, ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆಗಳು ಅತ್ಯಂತ ಖಂಡನೀಯ. ಅಲ್ಲಿನ ಹಿಂದೂಗಳ ರಕ್ಷಣೆ ನಮ್ಮ ಜವಾಬ್ದಾರಿಯಾಗಿದೆ ಎಂದು ಎಚ್ಚರಿಸಿದರು.
ಈಶಾನ್ಯ ರಾಜ್ಯಗಳನ್ನು ವಶಪಡಿಸಿಕೊಳ್ಳುವ ಬಾಂಗ್ಲಾದ ಬೆದರಿಕೆಗೆ ಉತ್ತರಿಸಿದ ಅವರು, “ಇದೇ ರೀತಿ ದೌರ್ಜನ್ಯ ಮುಂದುವರೆದರೆ ಇಡೀ ಬಾಂಗ್ಲಾದೇಶವನ್ನೇ ವಶಪಡಿಸಿಕೊಳ್ಳುವ ತಾಕತ್ತು ಮೋದಿ ಸರ್ಕಾರಕ್ಕಿದೆ” ಎಂದು ಕಿಡಿಕಾರಿದರು.
ವರದಿ: ನಂದೀಶ್ ನಾಯ್ಕ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


