ತಿಪಟೂರು: ನಗರದ ಹಳೇಪಾಳ್ಯ–ಕಲ್ಕೆರೆ ರಸ್ತೆಯಲ್ಲಿರುವ ಮಹದೇವ ಆಗ್ರೋ ಇಂಡಸ್ಟ್ರೀಯಲ್ ತೆಂಗಿನ ಕಾಯಿ ಕಾರ್ಖಾನೆಯ ಮೇಲೆ ದಾಳಿ ನಡೆಸಿರುವ ಕಾರ್ಮಿಕ ಇಲಾಖೆ ಹಾಗೂ ಪೊಲೀಸರು ಅಲ್ಲಿ ಕೆಲಸ ಮಾಡುತ್ತಿದ್ದ 7 ಬಾಲ ಕಾರ್ಮಿಕರ ರಕ್ಷಣೆ ಮಾಡಿದ್ದಾರೆ.
ಸದರಿ ಕಾರ್ಖಾನೆಯಲ್ಲಿ ತೆಂಗಿನ ಕಾಯಿ ಒಡೆಯುವುದು, ಚಿಪ್ಪು ತೆಗೆಯುವುದು, ಸೌದೆ ಸಾಗಿಸುವುದು ಸೇರಿದಂತೆ ವಿವಿಧ ಕೆಲಸ ಕಾರ್ಯಗಳಿಗೆ ಮಕ್ಕಳನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆದಿದೆ.
ಐದು ಬಾಲಕಿಯರು ಹಾಗೂ ಇಬ್ಬರು ಬಾಲಕರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಎಲ್ಲರೂ 9 ರಿಂದ 14 ವರ್ಷದ ಒಳಗಿನವರು ಎಂದು ತಿಳಿದು ಬಂದಿದ್ದು, ಇವರೆಲ್ಲರೂ ಬಿಹಾರದವರು ಎಂದು ಹೇಳಲಾಗಿದೆ.
ಮಕ್ಕಳಿಂದ ಮಾಹಿತಿ ಸಂಗ್ರಹಿಸಿದ ಬಳಿಕ ಪುನರ್ವಸತಿ ಕ್ರಮಕ್ಕಾಗಿ ಅವರನ್ನು ತುಮಕೂರಿನ ಬಾಲ ಮಂದಿರಕ್ಕೆ ಕಳುಹಿಸಲಾಗಿದೆ. ಕಾರ್ಖಾನೆ ಮಾಲೀಕರ ವಿರುದ್ಧ ಬಾಲ ಮತ್ತು ಕಿಶೋರ ಕಾರ್ಮಿಕ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಇಲಾಖಾಧಿಕಾರಿಗಳು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


