ಬೆಂಗಳೂರು: ತಹಸೀಲ್ದಾರ್ ಹಾಗೂ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಬೆಂಗಳೂರಿನ ಹಲವು ಕಡೆ ಪಟಾಕಿ ಗೋದಾಮೀನ ಮೇಲೆ ದಾಳಿ ನಡೆಸಿದ್ದು, ಸುಮಾರು 25 ಲಕ್ಷಕ್ಕೂ ಹೆಚ್ಚು ಮೌಲ್ಯದ ಅಕ್ರಮ ಪಟಾಕಿಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ಮೌಲ್ಯದ ಪಟಾಕಿಗಳನ್ನು ಜಪ್ತಿಮಾಡಿಕೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ವಿಜಯಪುರ ಚನ್ನರಾಯಪಟ್ಟಣದಲ್ಲಿ ಅಕ್ರಮ ಪಟಾಕಿಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.


