ತುಮಕೂರು: ನಿಷೇಧಿತ ಪ್ಲಾಸ್ಟಿಕ್ ಕವರ್ ಮಾರಾಟ ಮಳಿಗೆಗಳ ಮೇಲೆ ತುಮಕೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದರು.
ಪ್ಲಾಸ್ಟಿಕ್ ಕವರ್ ಮಾರಾಟ ಮಾಡುತ್ತಿದ್ದ ಅಂಗಡಿ ಹಾಗೂ ಗೋಡೌನ್ ಗಳ ಮೇಲೆ ಪಾಲಿಕೆ ಕಮಿಷನರ್ ಹೆಚ್.ವಿ ದರ್ಶನ್ ನೇತೃತ್ವದಲ್ಲಿ ಪಾಲಿಕೆ ಆರೋಗ್ಯಾಧಿಕಾರಿ ಡಾ.ಮದಕರಿ ನಾಯಕ್ ಹಾಗೂ ಸಿಬ್ಬಂದಿಯಿಂದ ದಾಳಿ ನಡೆಸಲಾಯಿತು.
ದಾಳಿ ವೇಳೆ ಸುಮಾರು 70 ಸಾವಿರಕ್ಕೂ ಅಧಿಕ ದಂಡ ವಸೂಲಿ ಮಾಡಲಾಗಿದ್ದು, 1 ಟನ್ ಗೂ ಅಧಿಕ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳು ವಶಪಡಿಸಿಕೊಳ್ಳಲಾಗಿದೆ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನ ಬಳಸದಂತೆ ಅಂಗಡಿ ಮಾಲೀಕರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA