ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲಿನ ದಾಳಿಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಕಾನೂನು ಕೈಗೆತ್ತಿಕೊಂಡ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ತಕ್ಕ ಶಿಕ್ಷೆಯಾಗುವಂತೆ ಕ್ರಮ ವಹಿಸಿ ಎಂದು ಸಿಎಂ ಸಿದ್ದರಾಮಯ್ಯ ಪೊಲೀಸರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.
ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಜೊತೆ ಚರ್ಚಿಸಿದ ಅವರು, ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಅದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು, ಇದರ ಜೊತೆಗೆ ತಪ್ಪು ಮಾಡದವರಿಗೆ ಕೂಡ ತೊಂದರೆ ಆಗಬಾರದು. ಮುಂದೆ ಇಂಥಾ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4