ಕನ್ನಡದ ನೇತ್ರಾವತಿ ಧಾರಾವಾಹಿ ನಟ ಸನ್ನಿ ಮಹಿಪಾಲ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಗರ್ಭಿಣಿ ಪತ್ನಿ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಕಳೆದ ಕೆಲ ತಿಂಗಳ ಹಿಂದೆ ಮದುವೆಯಾಗಿದ್ದ ಮಹಿಪಾಲ್ ಇದೀಗ ಮತ್ತೊಬ್ಬ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಪತ್ನಿ ನಿನ್ನೆ ಮಹಿಪಾಲ್ ಮನೆಗೆ ಹೋದಾಗ ಎರಡು ತಿಂಗಳ ಗರ್ಭಿಣಿ ಪತ್ನಿ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಗಲಾಟೆ ಬಳಿಕ 112 ಗೆ ಕರೆ ಮಾಡಿದ ಮಹಿಪಾಲ್ ಬಳಿಕ ತಾನೇ ಕಾರು ಚಲಾಯಿಸಿಕೊಂಡು ಖಾಸಗಿ ಆಸ್ಪತ್ರೆಗೆ ಪತ್ನಿಯನ್ನು ಸೇರಿಸಿದ್ದು, ಸದ್ಯ ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಹೆಚ್ ಎಎಲ್ ಪೊಲೀಸ್ ಠಾಣೆಗೆ ನಟ ಮಹಿಪಾಳ್ ವಿರುದ್ಧ ದೂರು ದಾಖಲಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


