ದೆಹಲಿ: ಬಿಜೆಪಿಯು ಆಪ್ ಶಾಸಕರಿಗೆ 25 ಕೋಟಿ ರೂ. ಆಮಿಷ ಒಡ್ಡಿ ದೆಹಲಿಯಲ್ಲಿ ಆಪರೇಷನ್ ಕಮಲ ನಡೆಸಲು ಮುಂದಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.
ದೆಹಲಿಯ ಎಲ್ಲಾ ಏಳು ಲೋಕಸಭಾ ಕ್ಷೇತ್ರಗಳು ಈಗ ಬಿಜೆಪಿ ಬಳಿ ಇವೆ. 2024ರ ವೇಳೆಗೆ ಇವೆಲ್ಲವನ್ನೂ ತನ್ನ ಖಾತೆಗೆ ಸೇರಿಸುವ ಗುರಿಯನ್ನು ಆಮ್ ಆದ್ಮಿ ಹೊಂದಿದೆ. ಇದಕ್ಕಾಗಿ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಇದನ್ನು ಮನಗಂಡ ಬಿಜೆಪಿ ವಿಧ್ವಂಸಕ ನಡೆಗಳನ್ನು ಆರಂಭಿಸಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರ ಆರೋಪವನ್ನು ತಳ್ಳಿ ಹಾಕಿರುವ ಬಿಜೆಪಿ, ಅರವಿಂದ್ ಕೇಜ್ರಿವಾಲ್ ಅವರ ವಾದಗಳು ಸಂಪೂರ್ಣ ಸುಳ್ಳು. ಇಡಿ ಸಮನ್ಸ್ ಬಗ್ಗೆ ಅರವಿಂದ್ ಕೇಜ್ರಿವಾಲ್ ಅವರು ನೀಡಿರುವ ಪ್ರತಿಕ್ರಿಯೆ ಸಾರ್ವಜನಿಕವಾಗಿ ನಗೆಪಾಟಲಿಗೀಡಾಗಿದೆ ಎಂದಿದೆ.
ಕೇಜ್ರಿವಾಲ್ ಸುಳ್ಳು ಆರೋಪ ಮಾಡುವ ಮೂಲಕ ಭ್ರಷ್ಟಾಚಾರದ ತನಿಖೆಯಿಂದ ತಮ್ಮ ಮುಖವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಅರವಿಂದ್ ಹೇಳಿಕೆಗೆ ಬಿಜೆಪಿ ವಕ್ತಾರ ಕಪಿಲ್ ಮಿಶ್ರಾ ತಿರುಗೇಟು ನೀಡಿದ್ದಾರೆ.


