ತುಮಕೂರು: ತಾಲೂಕಿನ ಗ್ರಾಮವೊಂದರಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಪ್ರಕರಣ ಬೆಳಕಿಗೆ ಬಂದಿದ್ದು, ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಆರೋಪಿಯನ್ನು ಕಂಬಕ್ಕೆ ಕಟ್ಟಿ ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಶುಕ್ರವಾರ ನಡೆದಿದೆ.
ಬಾಲಕಿಯ ಸಂಬಂಧಿ ಸಾಹಿಲ್ ಎಂಬಾತನಿಂದ ಅತ್ಯಾಚಾರದ ಕೃತ್ಯ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಆರೋಪಿಗೆ ಇಬ್ಬರು ಪತ್ನಿಯರಿದ್ದು, ಎರಡನೇ ಪತ್ನಿಯ ಮಗಳೇ ಸಂತ್ರಸ್ತ ಬಾಲಕಿ ಎಂದು ತಿಳಿದುಬಂದಿದೆ.
ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಆಕ್ರೋಶಗೊಂಡು ಆರೋಪಿಯನ್ನು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿ ಆರೋಪಿಯನ್ನು ಅವರ ವಶಕ್ಕೆ ಒಪ್ಪಿಸಿದ್ದಾರೆ.
ಆರೋಪಿಯನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
