ಪಾವಗಡ: ಪಾವಗಡ ತಾಲೂಕು ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಸ್ಥೆ (ರಿ.), ಬೆಂಗಳೂರು, ಮ್ಯಾಜಿಕ್ ಬಸ್ ಫೌಂಡೇಶನ್, ಬೆಂಗಳೂರು ಸಹಯೋಗದೊಂದಿಗೆ ಆ.29 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಗರದ ಶ್ರೀ ವೈ.ಇ. ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
ತಾಲೂಕಿನ ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಬಿಎ., ಬಿಸಿಎಸ್ಸಿ, ಬಿಕಾಂ, ಡಿಪ್ಲೋಮಾ, ಇತರೆ ಎಲ್ಲಾ ವಿಭಾಗದ ಪದವಿಗಳು, ಎಂಜಿನಿಯರಿಂಗ್, ಕಾನೂನು ಮತ್ತು ಸ್ನಾತಕೋತ್ತರ ಪದವಿ ಪಡೆದಿರುವ ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರದ 5 ಪ್ರತಿ ಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಲು ಕೋರಿದೆ.
ಈ ಉದ್ಯೋಗ ಮೇಳದಲ್ಲಿ ತುಮಕೂರು ಮತ್ತು ಬೆಂಗಳೂರಿನ 30ಕ್ಕೂ ಹೆಚ್ಚು ಕಂಪನಿಗಳ ಮುಖ್ಯಸ್ಥರು ಹಾಗೂ ವ್ಯವಸ್ಥಾಪಕರು ಭಾಗವಹಿಸುವುದಾಗಿ ಸಮಾಜ ಸೇವಕ ಹಾಗೂ ತಾಲೂಕು ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಸ್ಥೆಯ ಕಾರ್ಯದರ್ಶಿ ಸೇವಾಲಾಲ್ ಪುರದ ಡಾ.ಡಿ.ಪರಮೇಶ್ ನಾಯಕ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಡಾ.ಡಿ.ಗೋವಿಂದಪ್ಪ 96118 85658, ಆರ್.ಟಿ.ಖಾನ್ 99024 90407ಇವರನ್ನು ಸಂಪರ್ಕಿಸಲು ಕೋರಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
