ಸರಗೂರು: ಸದಾ ಸಮಾಜದ ಏಳಿಗೆಗಾಗಿ ದುಡಿಯುತ್ತಿರುವ ಆದಿ ಕರ್ನಾಟಕ ಮಹಾಸಭಾ ಸರಗೂರು ತಾಲೂಕು ಘಟಕದಿಂದ ಆಗಸ್ಟ್ 4 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಆದಿ ಕರ್ನಾಟಕ ಮಹಾಸಭಾದ ತಾಲೂಕು ಶಿವಣ್ಣ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವರ್ಷದಂತೆ ಈ ಸಾಲಿನಲ್ಲಿಯೂ ಪ್ರತಿಭಾ ಮಕ್ಕಳನ್ನು ಪ್ರೋತ್ಸಾಹಿಸಿ, ಉನ್ನತ ವಿದ್ಯಾಭ್ಯಾಸಕ್ಕೆ ನೆರವಾಗಲೆಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಎಸ್ ಎಸ್‌ಎಲ್ ಸಿ, ಪಿಯು ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಸಲ್ಲಿಕೆಗೆ ಜು.30 ಕಡೆ ದಿನವಾಗಲಿದೆ. ಹೀಗಾಗಿ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಅಂಬೇಡ್ಕರ್ ಟ್ರಸ್ಟ್ ಸಂಪರ್ಕಿಸಬೇಕು ಎಂದು ಅವರು ಮನವಿ ಮಾಡಿದರು.
ಅಂಬೇಡ್ಕರ್ ಟ್ರಸ್ಟ್, ಆದಿ ಕರ್ನಾಟಕ ಮಹಾಸಭಾ ಜಂಟಿಯಾಗಿ ಪಟ್ಟಣದ ಅಂಬೇಡ್ಕರ ಭವನದಲ್ಲಿ ಆ.4ರಂದು ಬೆಳಗ್ಗೆ 11ಕ್ಕೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಅನಿಲ್ ಚಿಕ್ಕಮಾದು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವರು, ಸಮಾ ಕಲ್ಯಾಣ ಇಲಾಖೆ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟಿಸುವರು. ಸಂಸದರಾದ ಸುನೀಲ್ ಬೋಸ್, ಶಾಸಕರಾದ ದರ್ಶನ್ ಧ್ರುವನಾರಾಯಣ್, ಆದಿ ಕರ್ನಾಟಕ ಮಹಾಸಭಾದ ತಾಲೂಕು ಅಧ್ಯಕ್ಷ ಶಿವಣ್ಣ, ಅಂಬೇಡ್ಕರ್ ಟ್ರಸ್ಟ್ನ ಅಧ್ಯಕ್ಷ ಚೆನ್ನಿಪುರ ನಾಗರಾಜು ಸೇರಿದಂತೆ ಪಟ್ಟಣ ಪಂಚಾಯಿತಿ ಸದಸ್ಯರು, ಜನಪ್ರತಿನಿಧಿಗಳು, ಮುಖಂಡರು ಭಾಗವಹಿಸುವರು ಎಂದರು.
ಅಂಬೇಡ್ಕರ್ ಟ್ರಸ್ಟ್ನ ಅಧ್ಯಕ್ಷ ನಾಗರಾಜು ಮಾತನಾಡಿ, ಕೋಟೆ ತಾಲೂಕಿನ ಆದಿ ಕರ್ನಾಟಕ ಮಹಾಸಭಾದ ಜತೆಗೆ ಸೇರಿಕೊಂಡು ಕಾರ್ಯಕ್ರಮ ಮಾಡಲಾಗುತ್ತಿತ್ತು. ನೂತನವಾಗಿ ಮಹಾಸಭಾವನ್ನು ಸರಗೂರಿನಲ್ಲಿ ರಚಿಸಿದ ಬಳಿಕ ಬಹಳ ವಿಶಿಷ್ಟವಾಗಿ ಕಾರ್ಯಕ್ರಮ ಮಾಡಿಕೊಂಡು ಬರಲಾಗುತ್ತಿದೆ. ಇದಕ್ಕೆ ಸಮಾಜದ ಸಹಕಾರ ಅಗತ್ಯವಾಗಿದೆ ಎಂದರು.
ಲಂಕೆ ರಮೇಶ್ 94804 74048, ಸಣ್ಣಸ್ವಾಮಿ 96863 36266, ಮಹೇಶ್ 98808 21541, ಬಲಗೈ ಸಮಾಜದ ಬಂಧುಗಳು ಇವರನ್ನು ಭೇಟಿ ಮಾಡಿ ಸಂಪರ್ಕಿಸಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಶೇಷವಾಗಿ ಪೌರಕಾರ್ಮಿಕರ ಮಕ್ಕಳನ್ನು ಪ್ರತಿಭಾ ಪುರಸ್ಕಾರ ಮಾಡುತ್ತಿದ್ದೇವೆ ಹೇಳಿದರು. ಸಭೆಯಲ್ಲಿ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಮಲ್ಲೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದರಾಜು, ಅಂಭೇಡ್ಕರ್ ಟ್ರಸ್ಟ್ನ ಟೌನ್ ಅಧ್ಯಕ್ಷ ಸಣ್ಣಸ್ವಾಮಿ, ಗ್ರಾಪಂ ಉಪಾಧ್ಯಕ್ಷ ರಮೇಶ್ ಲಂಕೆ, ಗ್ರಾಮೀಣ ಮಹೇಶ್, ಬಿಲ್ಲಯ್ಯ, ಚೆನ್ನಿಪುರ ಚಲುವರಾಜು, ಭೀಮಯ್ಯ ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC