ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ನಾಗಮಾರಪಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ನಡೆಯುತ್ತಿರುವ ನಾಲಾ ಹೂಳೆತ್ತುವ ಕಾಮಗಾರಿಯನ್ನು ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ (ಗ್ರಾಮೀಣ ಉದ್ಯೋಗ) ಶಿವಕುಮಾರ ಘಾಟೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾಮಗಾರಿ ಸ್ಥಳಕ್ಕೆ ಆಗಮಿಸಿದ ಅವರು, ಪ್ರಮುಖವಾಗಿ ಕೂಲಿಕಾರ್ಮಿಕರ ಹಾಜರಾತಿಯನ್ನು ಪರಿಶೀಲಿಸಿದರು. ನಂತರ ಕಾಮಗಾರಿಯ ಪ್ರಗತಿ ಹಾಗೂ ಸ್ಥಳದಲ್ಲಿ ನಡೆಯುತ್ತಿರುವ ವಿವಿಧ ಕಾರ್ಯಚಟುವಟಿಕೆಗಳ ಕುರಿತು ಪಂಚಾಯಿತಿ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು. ಇದೇ ವೇಳೆ ವಿಬಿ-ಜಿ ರಾಮ್ ಜಿ ಯೋಜನೆಯಡಿ ದೊರೆಯುವ ಉದ್ಯೋಗಾವಕಾಶಗಳು ಹಾಗೂ ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳ ಕುರಿತು ಸ್ಥಳದಲ್ಲಿದ್ದ ಕಾರ್ಮಿಕರಿಗೆ ಜಾಗೃತಿ ಮೂಡಿಸಲಾಯಿತು.
ಈ ಪರಿಶೀಲನೆಯ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಗೀತಾ ದೇಶಮುಖ, ತಾಲೂಕು ಪಂಚಾಯಿತಿ ತಾಂತ್ರಿಕ ಸಂಯೋಜಕ ಆನಂದ ಕಾಳಗಾಪೂರೆ, ತಾಂತ್ರಿಕ ಸಹಾಯಕ ಸಂದೀಪ, ಐಇಸಿ ಸಂಯೋಜಕ ಅಂಬಾದಾಸ ಪಾಟೀಲ್, ಡಿಇಒ ಭೀಮಾ ರಾಠೋಡ, ಮೇಟಿ ಶಾಮರಾವ, ಕಾಶಿನಾಥ, ಗ್ರಾಮ ಕಾಯಕ ಮಿತ್ರ ಸಪ್ನಾ ರಮೇಶ್ ಹಾಗೂ ಸ್ಥಳೀಯ ಕೂಲಿಕಾರ್ಮಿಕರು ಹಾಜರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
