ಔರಾದ್: ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರಾದ ವಿನೋದಕುಮಾರ ಅಪ್ಪೆ ಅವರು ಕಮಲನಗರ ಮತ್ತು ಔರಾದ್ ತಾಲ್ಲೂಕಿನ ವಿವಿಧ ಗ್ರಾಮಗಳ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿ ಪಕ್ಷದ ಸಂಘಟನೆ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಈಗಿನಿಂದಲೇ ಸಂಘಟಿತರಾಗಿ ಕೆಲಸ ಮಾಡಬೇಕು. ಪಕ್ಷದ ಯೋಜನೆಗಳು ಹಾಗೂ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಮೂಲಕ ಪಕ್ಷವನ್ನು ತಳಮಟ್ಟದಿಂದ ಬಲಪಡಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕರ್ತರು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
