ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಬೆಳಕುಣಿ (ಚೌದ್ರಿ) ಗ್ರಾಮದ ನಿವಾಸಿ, ಜೈ ಕಿಸಾನ್ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಹಾಗೂ ಬಿ.ಎಲ್.ಓ (BLO) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನ ಸಂಗಪ್ಪಾ ಪಿಟ್ರೆ (59) ಅವರು ನಿಧನರಾಗಿದ್ದಾರೆ.
ಮೃತರು ತಾಯಿ, ಓರ್ವ ಮಗಳು, ಓರ್ವ ಮಗ ಹಾಗೂ ಅಪಾರ ಬಂಧು-ಬಳಗ, ಶಿಷ್ಯವೃಂದವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಶನಿವಾರ ಮಧ್ಯಾಹ್ನ 11:00 ಗಂಟೆಗೆ ಅವರ ಸ್ವಗ್ರಾಮವಾದ ಬೆಳಕುಣಿ (ಚೌದ್ರಿ) ಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಗ್ರಾಮದಲ್ಲಿ ಸಹ ಶಿಕ್ಷಕರಾಗಿ ಅಕ್ಷರ ದಾಸೋಹ ನೀಡುತ್ತಾ, ವಿದ್ಯಾರ್ಥಿಗಳಿಗೆ ಸನ್ಮಾರ್ಗ ತೋರಿದ್ದ ಮಲ್ಲಿಕಾರ್ಜುನ ಪಿಟ್ರೆ ಅವರ ಅಗಲಿಕೆಗೆ ಗ್ರಾಮಸ್ಥರು, ಸಹೋದ್ಯೋಗಿಗಳು ಹಾಗೂ ವಿದ್ಯಾರ್ಥಿಗಳು ತೀವ್ರ ಕಂಬನಿ ಮಿಡಿದಿದ್ದಾರೆ. ಬಿ.ಎಲ್.ಓ ಆಗಿಯೂ ಸಾರ್ವಜನಿಕ ಸೇವೆ ಸಲ್ಲಿಸಿದ್ದ ಅವರ ನಿಧನಕ್ಕೆ ಸ್ಥಳೀಯ ಪ್ರಮುಖರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದು, ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಮತ್ತು ಕುಟುಂಬಸ್ಥರಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
