ಸಂತಪುರ: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸಂತಪುರದ ಅನುಭವ ಮಂಟಪ ಗುರುಕುಲ್ ಪಬ್ಲಿಕ್ ಸ್ಕೂಲ್ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ‘ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ’ (NOHP) ವನ್ನು ಹಮ್ಮಿಕೊಳ್ಳಲಾಗಿತ್ತು.
ಸಂತಪುರ ಸಮುದಾಯ ಆರೋಗ್ಯ ಕೇಂದ್ರದ ದಂತ ವೈದ್ಯಾಧಿಕಾರಿಗಳಾದ ಡಾ.ರೇಣುಕಾ ಅವರು ಎಲ್.ಕೆ.ಜಿ. ಮತ್ತು ಯು.ಕೆ.ಜಿ. ಮಕ್ಕಳಿಗೆ ಸ್ವಯಂ ಪ್ರೇರಿತವಾಗಿ ಉಚಿತ ಬ್ರಷ್ಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ಡಾ. ರೇಣುಕಾ ಅವರು, ಸಣ್ಣ ವಯಸ್ಸಿನಲ್ಲೇ ಹಲ್ಲಿನ ಆರೋಗ್ಯ ಕಾಪಾಡಿಕೊಳ್ಳುವುದು ಎಷ್ಟು ಮುಖ್ಯ ಎಂಬುದರ ಕುರಿತು ಜಾಗೃತಿ ಮೂಡಿಸಿದರು. “ಮಕ್ಕಳು ದಿನಕ್ಕೆ ಎರಡು ಬಾರಿ ಕಡ್ಡಾಯವಾಗಿ ಹಲ್ಲು ಉಜ್ಜಬೇಕು. ಅತಿಯಾದ ಚಾಕೊಲೇಟ್ ಮತ್ತು ಎಣ್ಣೆ ಪದಾರ್ಥಗಳ ಸೇವನೆಯಿಂದ ಹಲ್ಲುಗಳು ಬೇಗನೆ ಹಾಳಾಗುತ್ತವೆ” ಎಂದು ಎಚ್ಚರಿಕೆ ನೀಡಿದರು.
ತಪಾಸಣೆಯ ಸಮಯದಲ್ಲಿ ಹಲ್ಲು ಹುಳುಕಿರುವ ಮಕ್ಕಳ ಬಗ್ಗೆ ಶಾಲಾ ಶಿಕ್ಷಕರಿಗೆ ಮಾಹಿತಿ ನೀಡಿದ ವೈದ್ಯರು, ತಕ್ಷಣವೇ ಅವರ ಪೋಷಕರಿಗೆ ತಿಳಿಸಿ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಸಂಗಮೇಶ್, ಶಾಲೆಯ ಪ್ರಾಂಶುಪಾಲರಾದ ಗುರುಪ್ರೀತ್ , ವಿಜಯ್ ಕುಮಾರ್ ಪಾಟೀಲ್, ವಾಣಿಶ್ರೀ ಪಾಟೀಲ್, ಗೀತಾ, ಸರಸ್ವತಿ, ಜ್ಯೋತಿ, ಬಸವ ಪ್ರಸಾದ್ ಸ್ವಾಮಿ ಸೇರಿದಂತೆ ಶಾಲೆಯ ಇತರ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


