ಔರಾದ್: ಭಾರತದ ಮಾಜಿ ಪ್ರಧಾನಮಂತ್ರಿಗಳಾದ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚನ್ನಮ್ಮ ಅವರ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಕಚೇರಿಯಲ್ಲಿ ಇಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಜೆ.ಡಿ.ಎಸ್. ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂತಾಪ ಸೂಚಕ ಸಭೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮೃತರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಅಗಲಿದ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಜೆ.ಡಿ.ಎಸ್. ತಾಲೂಕು ಅಧ್ಯಕ್ಷರಾದ ತಾಣಜಿ ತೋರಿನೇ, ಮುಖಂಡರಾದ ಮಾರುತಿ ಪೂಜಾರಿ, ಚೇತನ್ ಫುಲರಿ, ವರದಿಗಾರರಾದ ಕಿರಣ್ ಚಿಂತಾಕಿ, ಸೋಪಾನ ಜೈವಂತ್ ಸೇರಿದಂತೆ ಹಲವು ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಭಗವಂತನು ಮೃತರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಹಾಗೆಯೇ ಅವರ ಅಗಲಿಕೆಯ ತೀವ್ರ ದುಃಖವನ್ನು ಭರಿಸುವ ಶಕ್ತಿಯನ್ನು ಹೆಚ್.ಡಿ. ದೇವೇಗೌಡರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಈ ವೇಳೆ ಜಂಟಿಯಾಗಿ ಪ್ರಾರ್ಥಿಸಲಾಯಿತು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


