ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌಧರಿ ಗ್ರಾಮದಲ್ಲಿ ನವರಾತ್ರಿ ಅಂಗವಾಗಿ ಭವಾನಿ ದೇವಿಮೂತಿ೯ ಪ್ರತಿಷ್ಠಾಪಿಸಿ ಒಂಬತ್ತು ದಿನಗಳ ಕಾಲ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು.
ಪೂಜೆಯ ಕೊನೆಯ ದಿನ ಗ್ರಾಮದ ಕೊಲಾಟಾ ಮಾದಿಗ ಓಣಿಯಿಂದ ಬಸವೇಶ್ವರ ವೃತ್ತ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ದೇವಿಯ ಭವ್ಯ ಮೆರವಣಿಗೆ ನಡೆಸಲಾಯಿತು.
ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಚಿಕ್ಕ ಮಕ್ಕಳ ಕೋಲಾಟಾ ನೃತ್ಯ ಅದ್ದೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಪಂಚಾಯತ್ ಅಧ್ಯಕ್ಷರಾದ ದೇವಿದಾಸ ಧೆೋಳೆ ಹಾಗೂ ಮಾಜಿ ಉಪಾಧ್ಯಕ್ಷರಾದ ಬಂಡೆಪ್ಪಾ ಮತ್ತಿತರರಿದ್ದರು.
ವರದಿ: ಅರವಿಂದ ಮಲ್ಲಿಗೆ


