Author: admin

ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ ಕೊರಟಗೆರೆ : ಇಲ್ಲಿನ ಪಟ್ಟಣ ಪಂಚಾಯಿತಿಯ 2025–26ನೇ ಸಾಲಿಗೆ ಒಟ್ಟು 9.7ಲಕ್ಷ.ರೂ ಉಳಿತಾಯ ಬಜೆಟ್‍ನ್ನು ಪ.ಪಂ. ಅಧ್ಯಕ್ಷೆ ಅನಿತಾ ಮಂಡಿಸಿದರು. ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಆಯವ್ಯಯ ಸಭೆಯಲ್ಲಿ ಅಧ್ಯಕ್ಷೆ ಅನಿತಾ ಮೊದಲ ಬಾರಿಗೆ ಬಜೆಟ್ ಮಂಡಿಸಿದ್ದಾರೆ. 2025–26ನೇ ಸಾಲಿನಲ್ಲಿ 21.43ಕೋಟಿ.ರೂ ಹಣ ಜಮೆ ಆಗಲಿದೆ. ಇದರಲ್ಲಿ 21.34ಕೋಟಿ ರೂ ಖರ್ಚು ತಗಲಿದೆ. ಹೀಗಾಗಿ 9.7ಲಕ್ಷ.ರೂ ಉಳಿತಾಯವಾಗಲಿದೆ. ಪಟ್ಟಣ ಪಂಚಾಯಿತಿ ಆದಾಯ ಹೆಚ್ಚಿಸುವುದರೊಂದಿಗೆ ಅಭಿವೃದ್ಧಿಗೆ ಆಧ್ಯತೆ ನೀಡಿರುವ ಬಜೆಟ್‍ ನಲ್ಲಿ ಪ್ರಸಕ್ತ ಸಾಲಿನಲ್ಲಿ ವಿವಿಧ ಮೂಲಗಳಿಂದ ಹಣ ಸಂಗ್ರಹಿಸಲಾಗಿದೆ. ಆಸ್ತಿ ತೆರಿಗೆ 1.24ಕೋಟಿ.ರೂ, ನೀರಿನ ತೆರಿಗೆ 40 ಲಕ್ಷ.ರೂ, ಹೊಸ ನಲ್ಲಿ ಸಂಪರ್ಕ ಪೀ 3.60ಲಕ್ಷ.ರೂ, ಮಳಿಗೆಗಳ ಬಾಡಿಗೆ 15ಲಕ್ಷ ರೂ., ಕಟ್ಟಡಗಳ ಪರವಾನಿಗೆ ಶುಲ್ಕ 20ಲಕ್ಷ.ರೂ, ಉದ್ದಿಮೆ ಪರವಾನಿಗೆ ಶುಲ್ಕ 6.20ಲಕ್ಷ.ರೂ ಹಾಗೂ ಇನ್ನಿತರ ಮೂಲಗಳಿಂದ 50.72ಲಕ್ಷ ರೂ, ಸಂಗ್ರಹಿಸಲಾಗಿದೆ ಎಂದು ಬಜೆಟ್‍ ನಲ್ಲಿ ತಿಳಿಸಿದ್ದಾರೆ. ಸರ್ಕಾರದ ಅನುದಾನಗಳಾದ 2025–26ನೇ ಸಾಲಿನ ವೇತನ ಅನುದಾನ 19.41ಕೋಟಿ.ರೂ,…

Read More

ಸಿಕಂದರ್ ಸಿನಿಮಾದ ಪ್ರಚಾರದಲ್ಲಿ ತೊಡಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್, ಇದೇ ವೇಳೆ ಲಾರೆನ್ಸ್ ಬಿಷ್ಣೋಯ್ ಬೆದರಿಕೆಯ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬಗ್ಗೆ ಮಾತನಾಡಿದ ಸಲ್ಮಾನ್ ಖಾನ್, ನನಗೆ ಅದಷ್ಟೇ ಭದ್ರತೆ ಇದ್ದರೂ ಕೆಲವೊಂದು ಸಮಯದಲ್ಲಿ ನನ್ನನ್ನು ರಕ್ಷಿಸುವುದು ಸುಲಭದ ಮಾತಲ್ಲ ಎಂದು ಸಲ್ಮಾನ್ ಹೇಳಿಕೊಂಡಿದ್ದಾರೆ. ನನ್ನ ಭವಿಷ್ಯ ದೇವರ ಕೈಯಲ್ಲಿದೆ. ಎಲ್ಲವೂ ದೇವರಿಗೆ ಬಿಟ್ಟಿದ್ದೇನೆ. ಎಲ್ಲಿಯವರೆಗೆ ಜೀವ ಇರುತ್ತದೋ, ಅಲ್ಲಿಯವರೆಗೆ ಮಾತ್ರ ಈ ಬದುಕು ಅಷ್ಟೇ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಘಾಜಿಯಾಬಾದ್: ಪೇಪರ್ ಮಿಲ್ ವೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ‘ನ ಭೋಜ್ಪುರ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದಿದೆ. ಬೆಳಿಗ್ಗೆ 6 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ಇದ್ದಕ್ಕಿದ್ದಂತೆ ಬಾಯ್ಲರ್ ಸ್ಫೋಟಗೊಂಡ ಕಾರಣ ಮೂವರು ಕಾರ್ಮಿಕರು 50 ಅಡಿ ಮೇಲೆ ಎಸೆಯಲ್ಪಟ್ಟು, ಕೆಳಗೆ ಬಿದ್ದಿದ್ದಾರೆಂದು ತಿಳಿದುಬಂದಿದೆ. ಘಟನೆಯಲ್ಲಿ ಕಾರ್ಮಿಕರಿಗೆ ತೀವ್ರ ಗಾಯಗಳಾಗಿದ್ದು, ದೇಹದ ಭಾಗಗಳು ಚೆಲ್ಲಾಪಿಲ್ಲಿಯಾಗಿ ನೆಲಕ್ಕೆ ಬಿದ್ದಿದ್ದವು ಎಂದು ಮೂಲಗಳು ತಿಳಿಸಿವೆ. ಮೃತ ಕಾರ್ಮಿಕರನ್ನು ಯೋಗೇಂದ್ರ, ಅನುಜ್ ಮತ್ತು ಅವಧೇಶ್ ಎಂದು ಗುರುತಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹೊಸ ಛಾಪು ಮೂಡಿಸಿದ್ದ ನಿವೃತ್ತ ಪೊಲೀಸ್ ಮಹಾನಿರ್ದೇಶಕರಾದ ಬಿ.ಎನ್. ಗರುಡಾಚಾರ್ (96) ಇಂದು ಮುಂಜಾನೆ ನಿಧನರಾಗಿದ್ದಾರೆ. ಬಸವನಗುಡಿಯ ಕೃಷ್ಣ ರಸ್ತೆಯಲ್ಲಿರುವ ಪೋಸ್ಟ್ ಆಫೀಸ್ ಹಿಂಭಾಗದ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ನಾಳೆ ಅವರ ಅಂತ್ಯ ಸಂಸ್ಕಾರ ವಿಲ್ಸನ್ಗಾರ್ಡನ್ನ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ. ಬಿ.ಎನ್.ಗರುಡಾಚಾರ್ ಅವರು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಗ್ರಾಮದವರು. ಇವರು 1976 ರಿಂದ 1980ರ ವರೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಬೆಂಗಳೂರು ಸಂಚಾರ ವಿಭಾಗದ ಡಿಸಿಪಿ ಆಗಿದ್ದ ಬಿ.ಎನ್ ಗರುಡಾಚಾರ್ ಅವರು, ಎನ್.ಆರ್. ಜಂಕ್ಷನ್ (ಎಲ್ ಐಸಿ ಕಚೇರಿ ಬಳಿ)ನಲ್ಲಿ ಸಂಚಾರ ದಟ್ಟಣೆ ಹೆಚ್ಚಿದ್ದ ಕಾರಣಕ್ಕೆ ಸಿಗ್ನಲ್ ಅಳವಡಿಸಿದ್ದರು. ಇದು ಬೆಂಗಳೂರಿನ ಮೊದಲ ಟ್ರಾಫಿಕ್ ಸಿಗ್ನಲ್ ಆಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎಸ್ ಪಿಯಾಗಿ ಸೇವೆ ಸಲ್ಲಿಸಿದ್ದ ಅವರು, ನಂತರ ಬೆಂಗಳೂರು ನಗರ ಡಿಸಿಪಿಯಾಗಿ ಸೇವೆ ಸಲ್ಲಿಸಿದ್ದು, ರಾಜ್ಯದ…

Read More

ಹುಬ್ಬಳ್ಳಿ: ಯತ್ನಾಳ್ ಕಾಂಗ್ರೆಸ್ ಗೆ ಪಕ್ಷಕ್ಕೆ ಬಂದ್ರೆ ಹೈಕಮಾಂಡ್ ಜೊತೆಗೆ ಚರ್ಚೆ ಮಾಡಿ ಕರೆದುಕೊಂಡು ಬನ್ನಿ ಅಂದ್ರೆ ಸ್ವಾಗತ ಮಾಡ್ತೀವಿ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾನೇ ಬಸನಗೌಡ ಪಾಟೀಲ್ ಯತ್ನಾಳರನ್ನು ಕಾಂಗ್ರೆಸ್ಗೆ ಕರೆದುಕೊಂಡು ಬರುತ್ತೇನೆ, ನನಗೆ ಜವಾಬ್ದಾರಿ ಕೊಟ್ಟರೆ ಕರೆದುಕೊಂಡು ಬರುತ್ತೇನೆ ಎಂದರು. ಬಸ್ ಪ್ರಯಾಣ ದರ ಏರಿಕೆ ಸಂಬಂಧ ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ಬೆಲೆ ಏರಿಕೆಯಿಂದ ಅಷ್ಟೇನೂ ಹೊರೆ ಆಗೋದಿಲ್ಲ ನಮಗೂ ಇತಿ ಮಿತಿ ಇದೆ, ಹೊಸ ಬಸ್ ನಿಲ್ದಾಣ ನಿರ್ಮಾಣ, ಹೊಸ ಬಸ್ ಖರೀದಿ ಮಾಡುತ್ತಿದ್ದೇವೆ ಎಂದು ಹೇಳಿದರು. ಹನಿಟ್ರ್ಯಾಪ್ ಅದು ವೈಯಕ್ತಿಕ, ಅದು ಸರ್ಕಾರದ ಯೋಜನೆ ಅಲ್ಲ, ಸದನದಲ್ಲಿ ರಾಜಣ್ಣ ಅವರ ಹೆಸರು ತೆಗೆದುಕೊಂಡಿದ್ದು ಯತ್ನಾಳ್, ಅದಕ್ಕೆ ರಾಜಣ್ಣ ಸದನದಲ್ಲಿ ಉತ್ತರ ಕೊಟ್ಟಿದ್ದಾರೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ತುಮಕೂರು: ತಮ್ಮ ಹತ್ಯೆಗೆ ಸುಪಾರಿ ನೀಡಿರುವ ಬಗ್ಗೆ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಹೇಳಿಕೆ ನೀಡಿದ್ದರು. ಇದೀಗ ಈ ಬಗ್ಗೆ ಎಸ್ ಪಿಗೆ ಅವರು ದೂರು ನೀಡಿದ್ದಾರೆ. ಎಸ್ಪಿ ಗೆ ದೂರು ನೀಡಿದ ಬಳಿಕ ಮಾತನಾಡಿದ ಅವರು, ಎಸ್ಪಿ ಅವರಿಗೆ ದೂರು ನೀಡಿ ವಿವರವಾಗಿ ತಿಳಿಸಿದ್ದೇನೆ ಎಂದರು. ಆರೋಪಿಗಳು ಕಾರಿಗೆ ಜಿಪಿಎಸ್ ಹಾಕೋ ಕೆಲಸ ಮಾಡಿದ್ರು. ಒಟ್ಟು 70 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದಾರೆ. ಅದ್ರಲ್ಲಿ ಐದು ಲಕ್ಷ ಕೊಟ್ಟಿದ್ದಾರೆ. ಯಾಕ್ ಕೊಟ್ಟಿದ್ದಾರೆ ಏನು ಅಂತಾ ಗೊತ್ತಿಲ್ಲ. ನಾನು ಆಗಲಿ ನನ್ನ ಕೆಲಸ ಆಗಲಿ ಅಂತಾ ಇರೋನು ಎಂದರು. ಸೋಮ ಮತ್ತು ಭರತ್ ಅನ್ನೋ ಹೆಸರು ಆಡಿಯೋದಲ್ಲಿ ಬಂದಿದೆ. ಅವರಿಬ್ಬರು ಯಾರಂತ ನನಗೆ ಗೊತ್ತಿಲ್ಲ. ಲೇಡಿ ಮತ್ತು ಹುಡುಗ ಮಾತನಾಡಿರೋ ಆಡಿಯೋ ಅದು. 18 ನಿಮಿಷದ ಆಡಿಯೋ ಇರೋ ಅಂತದ್ದು. ಸುಪಾರಿ ಕೊಟ್ಟಿದ್ದಾರೆ ಹೊಡೆಯಬೇಕು ಅಂತಾ ಏನ್ ವಿಚಾರ ಅಂತಾ ತನಿಖೆಯಾಗಬೇಕು ಎಂದರು. ದ್ವೇಷ ಏನುಕ್ಕೆ ಅಂತಾ ಗೊತ್ತಿಲ್ಲ. ಜಿಪಿಎಸ್ ಚಿಪ್ ಕಾರಿಗೆ…

Read More

ನವದೆಹಲಿ: ಕನ್ನಡತಿ ರಶ್ಮಿಕಾ ಮಂದಣ್ಣ ಅವರನ್ನು ಅದ್ಭುತ ನಟಿ ಎಂದು ಬಾಲಿವುಡ್ ನಟ ಸಲ್ಮಾನ್ಖಾನ್ ಹಾಡಿ ಹೊಗಳಿದ್ದಾರೆ. ಸಿಕಂದರ್ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದರೂ ಆಮೀರ್ ಖಾನ್ ಮತ್ತು ನಿರ್ದೇಶಕ ಎ.ಆರ್ ಮುರುಗದಾಸ್ ಜೊತೆಗಿನ ವಿಶೇಷ ಸಂದರ್ಶನದಲ್ಲಿ ಅವರು, ರಶ್ಮಿಕಾ ಮಂದಣ್ಣ ಅವರನ್ನು ಹಾಡಿ ಹೊಗಳಿದ್ದಾರೆ. ರಶ್ಮಿಕಾ ಮಂದಣ್ಣ ಅವರು ಹಾರ್ಡ್ ವರ್ಕರ್, ಆಕೆ ಅದ್ಭುತ ನಟಿ. ನಾವು ಹೈದರಾಬಾದ್ನಲ್ಲಿ ಚಿತ್ರೀಕರಣದಲ್ಲಿದ್ದಾಗ, ಅವರು ಬೆಳಿಗ್ಗೆ 6 ಗಂಟೆಗೆ ಸಿದ್ಧರಾಗಿ ಪುಷ್ಪ 2 ಚಿತ್ರೀಕರಣದಲ್ಲಿ ಇರುತ್ತಿದ್ದರು. ಆ ಚಿತ್ರದ ಚಿತ್ರೀಕರಣ ಮುಗಿದ ನಂತರ, ಅವರು ನಮ್ಮೊಂದಿಗೆ ಶೂಟಿಂಗ್ ಬರುತ್ತಿದ್ದರು. ಜ್ವರ ಬಂದಾಗಲೂ, ನಟಿ ವಿಶ್ರಾಂತಿ ಇಲ್ಲದೆ ಕೆಲಸ ಮಾಡುತ್ತಿದ್ದರು ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ನವದೆಹಲಿ: ಈ ದೇಶಕ್ಕಾಗಿ ಕಾಂಗ್ರೆಸ್ ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಹೋರಾಡಿತ್ತು. ಕಾಂಗ್ರೆಸ್ ಜೊತೆ ಬಿಜೆಪಿ-ಆರ್ ಎಸ್ ಎಸ್ ನ್ನು ಹೋಲಿಕೆ ಮಾಡುವುದು ತಮಾಷೆ ವಿಷಯ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಮೂರು ನಿಗದಿತ ಸಭೆಗಳಲ್ಲಿ ಮೊದಲನೆ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಲಿಷ್ಠ ಕಾಂಗ್ರೆಸ್ ಸ್ಥಾಪನೆಗೆ ಮತ್ತು ನ್ಯಾಯಯುತ ಭಾರತ ನಿರ್ಮಾಣಕ್ಕೆ ಶ್ರಮಿಸಬೇಕೆಂದು ಕರೆ ನೀಡಿದರು. ನಮ್ಮ ಪಾತ್ರವಿಲ್ಲದೆ ಪಕ್ಷವು ಅಭಿವೃದ್ಧಿ ಹೊಂದಲು, ಯಶಸ್ವಿಯಾಗಲು ಸಾಧ್ಯವಿಲ್ಲ. ನಮ್ಮ ಹೋರಾಟವು ಆರ್ ಎಸ್ ಎಸ್–ಬಿಜೆಪಿ ವಿರುದ್ಧ ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕ, ಪ್ರತಿಯೊಂದು ಸಮುದಾಯವು ಕನಸು ಕಾಣುವ ಮತ್ತು ಸಾಧಿಸುವ ಹಕ್ಕನ್ನು ಹೊಂದಿರುವ ಭಾರತಕ್ಕಾಗಿ ಇದೆ. ಒಟ್ಟಾಗಿ, ನಾವು ಬಲವಾದ ಕಾಂಗ್ರೆಸ್ ಮತ್ತು ನ್ಯಾಯಯುತ ಭಾರತವನ್ನು ನಿರ್ಮಿಸುತ್ತೇವೆ ಎಂದು ಸಭೆಯ ನಂತರ ವಾಟ್ಸಾಪ್ ಚಾನೆಲ್ ನಲ್ಲಿ ಮಾಡಿರುವ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಬೆಂಗಳೂರು: ನಟಿ ರನ್ಯಾ ರಾವ್ ಈ ಹಿಂದೆ ಸುಮಾರು 14.56 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿರುವುದನ್ನು ಗುಪ್ತಚರ ಇಲಾಖೆ ಪತ್ತೆ ಹಚ್ಚಿದೆ. ದುಬೈಯಿಂದ ಕಳ್ಳಸಾಗಣೆ ಮಾಡಿದ ಚಿನ್ನವನ್ನು ಸಾಹಿಲ್ ಸಕಾರಿಯಾ ಜೈನ್ ಅವರ ಸಹಾಯದಿಂದ ರನ್ಯಾ ರಾವ್ ಭಾರತದಲ್ಲಿ ಮಾರಾಟ ಮಾಡಲು ಸಹಾಯ ಮಾಡುತ್ತಿದ್ದರು. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ 4.45 ಕೋಟಿ ರೂಪಾಯಿ ಸುಂಕ ನಷ್ಟವಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಹೇಳಿಕೊಂಡಿದೆ. ಈ ವರ್ಷದ ಆರಂಭದಲ್ಲಿ ಜನವರಿ 11 ರಂದು ರನ್ಯಾ ಭಾರತಕ್ಕೆ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದರು. ಜನವರಿ 11 ರಂದು ಅವರು ಸುಮಾರು 14.56 ಕೆಜಿ ತೂಕದ, 11.55 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದರು. ಸಾಹಿಲ್ ಜೈನ್ ಅವರು ಅದನ್ನು ಮಾರಾಟ ಮಾಡಲು ಸಹಾಯ ಮಾಡಿದ್ದರು. ಇದರಿಂದಾಗಿ 4.46 ಕೋಟಿ ರೂಪಾಯಿ ಸರ್ಕಾರಕ್ಕೆ ಕಸ್ಟಮ್ಸ್ ಸುಂಕ ನಷ್ಟವಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಬೆಂಗಳೂರು: ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಿಟ್ಟಮಾರನಹಳ್ಳಿ ಬೈ–ಪಾಸ್‌ನಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಬೆಂಗಳೂರಿನ ಶಿವಪ್ರಕಾಶ್ (37) ಪುಟ್ಟಗೌರಮ್ಮ (72) ಮತ್ತು ಚನ್ನಪಟ್ಟಣದ ಮಂಗದಹಳ್ಳಿಯ ಶಿವರತ್ನ (50) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರು ನಟರಾಜು (42) ಮತ್ತು ಸುಮಾ (36) ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ವ್ಯಾನ್ ಚಾಲಕ ನಾಗೇಶ್ ಕೂಡ ಗಾಯಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More