Subscribe to Updates
Get the latest creative news from FooBar about art, design and business.
- ಕಾವೇರಿ ನೀರು ಹಂಚಿಕೆ: ಕೇಂದ್ರವು ರಾಜ್ಯಗಳ ಜತೆ ಚರ್ಚೆ ಮಾಡಿ ಸಂಕಷ್ಟ ಸೂತ್ರ ರೂಪಿಸಬೇಕು: ಎಸ್.ಎಂ ಕೃಷ್ಣ
- ಬೀದರ್ ಜಿಲ್ಲಾ ಪೊಲೀಸ್ ಘಟಕ: ನಿವೃತಿ ಹೊಂದಿದ್ದ ಅಧಿಕಾರಿ ಹಾಗೂ ಸಿಬ್ಬಂದಿಗೆ ಬೀಳ್ಕೊಡುಗೆ
- ದೇವರ ಮನೆಯಲ್ಲಿ ಅಡಗಿದ್ದ ನಾಗರಹಾವಿನ ರಕ್ಷಣೆ
- ನೈಸರ್ಗಿಕ ಕೃಷಿಗೆ ಪ್ರೋತ್ಸಾಹ: 50 ಕೃಷಿಕರಿಗೆ ಒಂದು ನಾಟಿ ಹಸು ಮತ್ತು ಹೋರಿ ಕರು ದಾನ: ರೈತ ಮುಖಂಡ ಎಸ್.ಶಿವಪ್ರಸಾದ್
- ಔರಾದ: ಕಾಲು ಬಾಯಿ ರೋಗದ ಲಸಿಕಾ ಅಭಿಯಾನಕ್ಕೆ ಚಾಲನೆ
- ಎಸ್.ಎಂ ಕೃಷ್ಣ ಅವರ ಜೀವನಗಾಥೆ ಕುರಿತ “ನೆಲದ ಸಿರಿ” ಕೃತಿ ಲೋಕಾರ್ಪಣೆ
- ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
- ಪೋಷಕರ ಬುದ್ಧಿವಾದದಿಂದ ನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
Author: admin
ಬೆಂಗಳೂರು: “ಕಾವೇರಿ ನೀರು ಹಂಚಿಕೆ ಸಮಸ್ಯೆಗೆ ಅಂತಿಮ ತೆರೆ ಎಳೆಯಲು ಕೇಂದ್ರ ಸರಕಾರವು ನಾಲ್ಕು ರಾಜ್ಯಗಳ ಜತೆ ಚರ್ಚೆ ಮಾಡಿ ಸಂಕಷ್ಟ ಸೂತ್ರ ರೂಪಿಸಬೇಕು” ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಅಭಿಪ್ರಾಯ ಪಟ್ಟರು. ಚಿತ್ರಕಲಾ ಪರಿಷತ್ ನಲ್ಲಿ ಕಾವೇರಿ ಸಮಸ್ಯೆ ಬಗ್ಗೆ ಮಾಧ್ಯಮಗಳು ಭಾನುವಾರ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಹೀಗೆ ಹೇಳಿದರು. ನಾಲ್ಕು ರಾಜ್ಯಗಳ ಜತೆ ಚರ್ಚಿಸಿ ಯೋಗ್ಯ ತೀರ್ಮಾನ ತೆಗೆದುಕೊಳ್ಳಬೇಕು. ಶಾಶ್ವತ ಪರಿಹಾರಕ್ಕೆ ಇದೊಂದೇ ಮಾರ್ಗ. “ಮಳೆ ಕಡಿಮೆ ಆದಾಗ ಕಾವೇರಿ ವಿವಾದ ಸದ್ದು ಮಾಡುತ್ತದೆ. ಮಳೆಗಾಲದಲ್ಲಿ ನೀರಿನ ಪ್ರಮಾಣ ಕುಸಿದಾಗ ನೀರಿಗೆ ಒತ್ತಡ ಇರುತ್ತದೆ. ನಮಗೆ ಹೋಲಿಸಿದರೆ ತಮಿಳುನಾಡಿನ ವಸ್ತುಸ್ಥಿತಿ ನಾಚಿಸುವಂತೆ ಇದೆ. ನಾನು ಸಿಎಂ ಆಗಿದ್ದಾಗಲೂ ಕಾವೇರಿ ನೀರು ಹಂಚಿಕೆ ಬಗ್ಗೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಆಗ ಪ್ರಧಾನಿಗಳಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ಉಭಯ ರಾಜ್ಯಗಳ ಸಿಎಂಗಳ ಜೊತೆ ಸಂಧಾನ ಮಾಡಲು ಪ್ರಯತ್ನಿಸಿದ್ದರು. ಆದರೆ ಸಫಲ ಆಗಲಿಲ್ಲ. ಅಂತಿಮವಾಗಿ ಸುಪ್ರೀಂ ಕೋರ್ಟ್…
ಬೀದರ್: ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ಇಲಾಖೆಯಲ್ಲಿ ವಯೋ ನಿವೃತಿ ಹೊಂದಿದ್ದ ಅಧಿಕಾರಿ ಹಾಗೂ ಸಿಬ್ಬಂದಿಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು. ಬೀದರ ಜಿಲ್ಲಾ ಪೊಲೀಸ್ ಘಟಕದಿಂದ ಇಲಾಖೆಯಲ್ಲಿ ಪೂರ್ಣಾವಧಿ ಸೇವೆ ಸಲ್ಲಿಸಿ, ವಯೋ ನಿವೃತ್ತಿ ಹೊಂದುತ್ತಿರುವ ಪಿ.ಎಸ್.ಐ. ಬೀದರ ನಗರ ಪೊಲೀಸ್ ಠಾಣೆಯ ಮೋಹನ ಮಹಾರಾಜ, ಎ.ಎಸ್.ಐ ಮಾರ್ಕೆಟ್ ಠಾಣೆಯ ವಿನೋದ, ಎ.ಎಸ್.ಐ ಗಾಂಧಿಗಂಜ ಠಾಣೆಯ ಹಸನಸಾಬ್ ಅವರನ್ನು ಬೀಳ್ಕೊಡಲಾಯಿತು. ನಿವೃತ್ತ ಅಧಿಕಾರಿಗಳು ತಮ್ಮ ನಿವೃತ್ತಿ ಜೀವನವನ್ನು ಸುಖ, ಶಾಂತಿ, ನೆಮ್ಮದಿಯಿಂದ ಕಳೆಯುವಂತಾಗಲಿ ಹಾಗೂ ಅವರ ಅನುಭವದಿಂದ ಸಮಾಜಕ್ಕೆ ಏನಾದರೂ ಕೊಡುಗೆ ದೊರೆಯುವಂತಾಗಲಿ ಎಂದು ಹಾರೈಸಿದ ಅಧಿಕಾರಿಗಳು, ಸಿಬ್ಬಂದಿ ನೆನಪಿನ ಕಾಣಿಕೆ ನೀಡು ಶುಭ ಹಾರೈಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್
ತುಮಕೂರು: ಆಹಾರ ಅರಸಿ ಮನೆಯೊಂದಕ್ಕೆ ನುಗ್ಗಿದ್ದ ನಾಲ್ಕು ಅಡಿ ಉದ್ದದ ನಾಗರಹಾವು ಕಂಡು ಜನರು ಬೆಚ್ಚಿ ಬಿದ್ದಿದ್ದ ಘಟನೆ ನಗರದ ಯಲ್ಲಾಪುರ ವಿನಾಯಕನಗರದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಸಿದ್ದರಾಜು ಎಂಬುವವರ ಮನೆಯ ದೇವರ ಕೋಣೆಯಲ್ಲಿ ಬೃಹತ್ ಗಾತ್ರದ ನಾಗರಹಾವು ಕಾಣಿಸಿಕೊಂಡಿತ್ತು. ದೇವರ ಮನೆಯಲ್ಲಿ ಪೂಜೆ ಮಾಡಲು ಸಿದ್ದರಾಜು ಅಲ್ಲಿ ಅವಿತು ಕುಳಿತಿದ್ದ ನಾಗರಹಾವನ್ನು ಕಂಡಿದ್ದಾರೆ. ತಕ್ಷಣ ಸಿದ್ದರಾಜು ಭಯಭೀತರಾಗಿ ವಾರಂಗಲ್ ಫೌಂಡೇಶನ್ ವನ್ಯಜೀವಿ ಹಾಗೂ ಉರಗ ರಕ್ಷಣಾ ಸಂಸ್ಥೆಯ ಉರಗ ತಜ್ಞ ದಿಲೀಪ್ ಅವರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ದಿಲೀಪ್ ಸುಮಾರು ನಾಲ್ಕು ಅಡಿ ಉದ್ದದ ನಾಗರಹಾವು, ರಕ್ಷಣೆ ಮಾಡಿ ದೇವರಾಯನದುರ್ಗ ಅರಣ್ಯ ಪ್ರದೇಶಕ್ಕೆ ರವಾನಿಸಿದ್ದಾರೆ.
ತುಮಕೂರು: ನೈಸರ್ಗಿಕ ಕೃಷಿಯನ್ನು ಪ್ರೋತ್ಸಾಹಿಸುವ ಸಲುವಾಗಿ ಅತಿ ಅಗತ್ಯವಾಗಿರುವಂತಹ ನಾಟಿ ಹಸುವಿನ ಸಗಣಿ ಮತ್ತು ಗಂಜಲ ಬಳಕೆ ಮಾಡಿಕೊಳ್ಳಲು ಸಹಕಾರಿಯಾಗಲೆಂದು ಆಯ್ದ 50 ಜನ ಕೃಷಿಕರಿಗೆ ಒಂದು ನಾಟಿ ಹಸು ಮತ್ತು ಹೋರಿ ಕರುವನ್ನು ದಾನವಾಗಿ ನೀಡಲಾಗುತ್ತಿದೆ ಎಂದು ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್ ತಿಳಿಸಿದ್ದಾರೆ. ತುಮಕೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯವಾಗಿ ವಿಷಮುಕ್ತವಾಗಿಸುವ ನಿಟ್ಟಿನಲ್ಲಿ ಸುಭಾಷ್ ಪಾಳೆಕಾರ್ ಅವರ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಕಾರ್ಯಾಗಾರ ಹಾಗೂ ಗೋ ದಾನ ಕಾರ್ಯಕ್ರಮವನ್ನು ಸಿದ್ದಗಂಗಾ ಮಠದ ಶ್ರೀಗೋಸಲ ಸಿದ್ದೇಶ್ವರ ಸಮುದಾಯಭವನದಲ್ಲಿ ಅಕ್ಟೋಬರ್ 3ರಂದು ಆಯೋಜಿಸಲಾಗಿದೆ ಎಂದರು. ಬಿಜೆಪಿ ರೈತಮೋರ್ಚಾ ವತಿಯಿಂದ ಈ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು ಈ ವೇಳೆ ರೈತ ಸಮುದಾಯವನ್ನು ಜಾಗೃತಿಗೊಳಿಸುವ ನಿಟ್ಟಿನಲ್ಲಿ ಗೋವುಗಳನ್ನು ದಾನವಾಗಿ ನೀಡಿ ನೈಸರ್ಗಿಕ ಕೃಷಿಗೆ ಪ್ರೋತ್ಸಾಹ ನೀಡುವಂತಹ ಚಿಂತನೆ ಗೊಂದಲಾಗಿದೆ ಎಂದು ಹೇಳಿದರು. ರೈತರ ಆದಾಯ ದ್ವಿಗುಣಗೊಳ್ಳಬೇಕು. ರೈತರ ಅರ್ಥಿಕ ಸ್ಥಿತಿ ಸುಧಾರಣೆ ಯಾಗುವುದರ ಜೊತೆಗೆ, ಜನತೆಗೆ ವಿಷಮುಕ್ತ ಆಹಾರ…
ಬೀದರ್: ಜಿಲ್ಲೆಯ ಔರಾದ ಪಟ್ಟಣದ ಪಶುಚಿಕಿತ್ಸಾಲಯದ ಆವರಣದಲ್ಲಿ ಕಾಲು ಬಾಯಿ ರೋಗದ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಮಾಜಿ ಪಶು ಸಂಗೋಪನೆ ಸಚಿವರು ಪ್ರಭು ಬಿ. ಚವ್ಹಾಣ ಹಾಗೂ ಔರಾದ ತಾಲೂಕಿನ ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ರೈತರು ಕಡ್ಡಾಯವಾಗಿ ತಮ್ಮ ಜಾನುವಾರುಗಳಿಗೆ ತಪ್ಪದೇ ಲಸಿಕೆ ಹಾಕಿಸಿ ಕಾಲು ಬಾಯಿ ಜ್ವರ ರೋಗ ನಿರ್ಮೂಲನೆ ಮಾಡಲು ಸಹಕರಿಸಬೇಕು ಎಂದು ಇದೇ ವೇಳೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಹಾಗೂ ಮುಖಂಡರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್
ಬೆಂಗಳೂರು: ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ. ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ಮಧ್ಯೆ ನಾವು ಏನು ಮಾಡುತ್ತೇವೆ ಎಂಬುದು ಬಹಳ ಮುಖ್ಯ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಇಂದು ಎಸ್.ಎಂ ಕೃಷ್ಣ ಅವರ ಜೀವನಗಾಥೆ ಕುರಿತ ಪುಸ್ತಕ ಬಿಡುಗಡೆ ಮಾಡಲಾಗಿದೆ. ಕೃಷ್ಣ ಅವರ ಸಾಧನೆ, ಮಾರ್ಗದರ್ಶನ ನೆನೆದು, ಮುಂದಿನ ಪೀಳಿಗೆ ಸಮಾಜವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು ಎಂದು ತಿಳಿಸಲು ಈ ಪುಸ್ತಕ ಹೊರ ತಂದಿದ್ದಾರೆ. ಕೃಷ್ಣ ಅವರ ಕುಟುಂಬ ಸದಸ್ಯನಾಗಿ, ಸರ್ಕಾರದ ಪ್ರತಿನಿಧಿಯಾಗಿ ಈ ಪುಸ್ತಕ ಬರೆದವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. “One who wins without problem it is just victory but one who wins with lot of troubles that is history.” ಎಂದು ಹಿಟ್ಲರ್ ಹೇಳಿದ್ದಾನೆ. ಅದೇ ರೀತಿ ಕೃಷ್ಣ ಅವರು ತಮ್ಮ ರಾಜಕೀಯ ಜೀವನದಲ್ಲಿ ಅನೇಕ ಸವಾಲು, ಸಮಸ್ಯೆಗಳನ್ನು ಎದುರಿಸಿ ಗೆದ್ದಿದ್ದಾರೆ. ನನ್ನ ಅವರ ರಾಜಕೀಯ…
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳ ಸ್ಥಿತಿ ನಾಯಿಪಾಡು ಎಂದು ವೀರಶೈವ ಮುಖಂಡ ಶಾಮನೂರು ಶಿವಶಂಕರಪ್ಪ ಹೇಳಿಕೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಶಾಮನೂರು ಶಿವಶಂಕರಪ್ಪನವರ ಹೇಳಿಕೆ ನನ್ನ ಗಮನಕ್ಕೂ ಬಂದಿದೆ. ಈ ಬಗ್ಗೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದರು. ಹಿಂದೆಲ್ಲ ಲಿಂಗಾಯತ ಸಮಾಜ ಕಾಂಗ್ರೆಸ್ ಜೊತೆಗೆ ಇಲ್ಲ ಎಂಬ ಕೊರಗಿತ್ತು. ಆ ಕೊರಗು ಈಗ ಇಲ್ಲ ಎಂದು ತಿಳಿಸಿದರು. ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಿರಿಯರಾದ ಶಾಮನೂರು ಶಿವಶಂಕರಪ್ಪ ಅವರ ಜೊತೆ ಚರ್ಚೆ ಮಾಡುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಚಿಕ್ಕಮಗಳೂರು: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಪದವಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಎಂಬ ಗ್ರಾಮದಲ್ಲಿ ನಡೆದಿದೆ. ಶೃಂಗೇರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸುರಕ್ಷಾ (19) ವಿಷ ಸೇವಿಸಿ ಆತ್ಮಹತ್ಯೆ ಶರಣಾಗಿದ್ದಾಳೆ. ಸುರಕ್ಷಾ ಗಣೇಶ ಹಬ್ಬಕ್ಕೆಂದು ಮನೆಗೆ ತೆರಳಿದ್ದಾಗ ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋದಾಗ ಪೋಷಕರು ಹಲವು ವಿಚಾರಗಳಲ್ಲಿ ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದ ಸುರಕ್ಷಾ ಮನೆಯಲ್ಲಿ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಳು. ಕೂಡಲೇ ಆಕೆಯನ್ನು ಕೊಪ್ಪ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದು, ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಯಚೂರು: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಕರಣಗಳ ಸಂಖ್ಯೆ ಲೆಕ್ಕಕ್ಕೆ ಸಿಕ್ಕರೂ, ಖಾಸಗಿ ಆಸ್ಪತ್ರೆಗಳಲ್ಲೇ ಹೆಚ್ಚು ರೋಗಿಗಳು ದಾಖಲಾಗುತ್ತಿರುವುದರಿಂದ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ. ಸೊಳ್ಳೆಗಳ ನಿಯಂತ್ರಣಕ್ಕೆ ಅಧಿಕಾರಿಗಳು ಮುಂದಾಗುತ್ತಿಲ್ಲ ಎಂದು ಜನ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಇದುವರೆಗೆ 18 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇನ್ನೂ 300ಕ್ಕೂ ಹೆಚ್ಚು ಮಾದರಿಗಳ ವರದಿ ಬರುವುದು ಬಾಕಿಯಿದೆ. ಇದು ಸರ್ಕಾರಿ ಆಸ್ಪತ್ರೆಗಳ ವರದಿಯಾದರೆ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿರುವ ರೋಗಿಗಳ ಸಂಖ್ಯೆ ಇನ್ನೂ ಹೆಚ್ಚಿದೆ. ಹೀಗಾಗಿ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ.
ಬೆಳಗಾವಿ: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ರೈತರ ಅನುಕೂಲಕ್ಕಾಗಿ ಹುದಲಿಯ ಬೆಳಗಾಂ ಶುಗರ್ಸ್ ಪ್ರೈ.ಲಿಮಿಟಡ್ ಮೋಡ ಬಿತ್ತನೆಗೆ ಮುಂದಾಗಿದ್ದು, ಮೋಡ ಬಿತ್ತನೆ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಚಾಲನೆ ನೀಡಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ(ಸೆ.29) ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿದರು. ಮೋಡ ಬಿತ್ತನೆ ಕಾರ್ಯಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮಹಾನಿರ್ದೇಶಕರ(ಡಿಜಿಸಿಎ) ಕಚೇರಿಯು ಗ್ರೀನ್ ಸಿಗ್ನಲ್ ನೀಡಿದೆ. ಸೆ.29 ಹಾಗೂ 30 ರಂದು ಎರಡು ದಿನಗಳ ಕಾಲ ಬೆಳಗಾವಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯ ನಡೆಯಲಿದೆ. ಕ್ಯಾಪ್ಟನ್ ವೀರೇಂದ್ರ ಸಿಂಗ್ ಹಾಗೂ ಕ್ಯಾಪ್ಟನ್ ಆದರ್ಶ ಪಾಂಡೆ ನೇತೃತ್ವದಲ್ಲಿ ವಿಟಿ-ಕೆಸಿಎಂ ವಿಮಾನವು ಮೋಡ ಬಿತ್ತನೆ ಮಾಡಲಿದೆ. ಕಡಿಮೆ ಎತ್ತರದಲ್ಲಿರುವ ಮೋಡಗಳ ಆಕರ್ಷಣೆಗೆ ಸಿಎಸಿಎಲ್-2 ಅಯೋಡೈಡ್ ಹಾಗೂ 20 ಸಾವಿರ ಅಡಿ ಮೇಲೆ ಎತ್ತದರದಲ್ಲಿರುವ ಮೋಡಗಳ ಆಕರ್ಷಣೆಗೆ ಸಿಲ್ವರ್ ಐಯೋಡೈಡ್ ರಾಸಾಯನಿಕ ಸಿಂಪಡಿಸಲಾಗುತ್ತದೆ. ಒಂದು ವೇಳೆ ನಿರ್ದಿಷ್ಟ ಪ್ರದೇಶದ ವ್ಯಾಪ್ತಿಯಲ್ಲಿ ಮೋಡಗಳು ಇದ್ದರೆ ರಾಸಾಯನಿಕ ಸಿಂಪಡಣೆ ಮಾಡಿದ…