Author: admin

ಕೊರಟಗೆರೆ : ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಅತಿಮುಖ್ಯ. ಕ್ರೀಡಾಂಗಣವು ಮಕ್ಕಳಿಗೆ ಗೆಲುವು ಮತ್ತು ಸೋಲಿನ ಜೀವನದ ಪಾಠ ಕಲಿಸುತ್ತದೆ. ನಮ್ಮ ದೇಶದ ದ್ಯಾನ್‌ಚಂದ್, ಸಚಿನ್, ಪಿ.ವಿ.ಸಿಂಧು ಅಂತಹ ಕ್ರೀಡಾಪಟುಗಳೇ ನನ್ನ ಶಾಲೆಯ ಮಕ್ಕಳ ಸಾಧನೆಗೆ ಸ್ಪೂರ್ತಿ ಎಂದು ಸಾರಂಗ ಅಕಾಡೆಮಿ ಅಧ್ಯಕ್ಷ ಅಜಯ್‌ ಕುಮಾರ್ ತಿಳಿಸಿದರು. ಕೊರಟಗೆರೆ ಪಟ್ಟಣದ ಶ್ರೀರಾಘವೇಂದ್ರ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ವಾರ್ಷಿಕ ಕ್ರೀಡಾ ಕಾರ್ಯಕ್ರಮದಡಿ ಸೋಮವಾರ ಏರ್ಪಡಿಸಲಾಗಿದ್ದ ರಾಘಕ್ರೀಡೆ–2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಗೆ ಶಿಕ್ಷಕರ ಜೊತೆ ಪೋಷಕರ ಪಾತ್ರ ಬಹುಮುಖ್ಯ. ಟಿವಿ ಮತ್ತು ಮೊಬೈಲ್ ಮಕ್ಕಳ ಶೈಕ್ಷಣಿಕ ಜೀವನಕ್ಕೆ ಅಪಾಯ. ಪೋಷಕರು ಮಕ್ಕಳ ಶೈಕ್ಷಣಿಕ ಜೀವನದ ಬಗ್ಗೆ ಕಡ್ಡಾಯವಾಗಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕಿದೆ. ಕ್ರೀಡಾಕೂಟ ಯಶಸ್ವಿಗೆ ಕಾರಣರಾದ ಪೋಷಕರು ಮತ್ತು ಶಿಕ್ಷಕರಿಗೆ ಧನ್ಯವಾದ ಎಂದರು. ರಾಘವೇಂದ್ರ ಶಾಲೆ ಆಡಳಿತ ಅಧಿಕಾರಿ ಕೆ.ಎನ್.ರುದ್ರೇಶ್ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯದ ಜೊತೆ ಕ್ರೀಡಾ ಚಟುವಟಿಕೆ ಬಹುಮುಖ್ಯ. ನಮ್ಮ ಶಾಲೆಯಲ್ಲಿ ಚಿಣ್ಣರಸಂತೆ,…

Read More

ದಾವಣಗೆರೆ: ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ನಗರದ ಎಂಸಿಸಿ ಬಡಾವಣೆಯ ಅವರ ನಿವಾಸದಿಂದ ಸೋಮವಾರ ಮಧ್ಯಾಹ್ನ 12.32ಕ್ಕೆ ಆರಂಭವಾಯಿತು. ಪೂಜಾ ಕೈಂಕರ್ಯ ಮುಗಿದು ಪಾರ್ಥಿವ ಶರೀರವನ್ನು ಮನೆಯಿಂದ ಹೊರಗೆ ತರಲಾಯಿತು. ಎಂಸಿಸಿ ಬಡಾವಣೆಯ ‘ಬಿ’ ಬ್ಲಾಕ್‌ನಿಂದ ಹೊರಟ ಮೆರವಣಿಗೆಯಲ್ಲಿ ಭಜನೆ ತಂಡಗಳು ಭಕ್ತಿಗೀತೆ ಹಾಡಿದವು. ಪಾರ್ಥಿವ ಶರೀರದ ಕೈವಲ್ಯಕ್ಕೆ ಪುತ್ರ, ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಹೆಗಲು ಕೊಟ್ಟಿದ್ದರು. ರಸ್ತೆಯ ಇಕ್ಕೆಲಗಳಲ್ಲಿ ಸಾಲಾಗಿ ನಿಂತಿರುವ ಜನರು ಹೂಹಾರ ಹಾಕಿ ಗೌರವ ಸಲ್ಲಿಸಿದರು. ಶಾಮನೂರು ರಸ್ತೆ, ಗುಂಡಿ ವೃತ್ತ, ಚರ್ಚ್ ರಸ್ತೆ, ರಾಮ್ ಅಂಡ್ ಕೋ ವೃತ್ತ, ಎವಿಕೆ ಕಾಲೇಜು ರಸ್ತೆಯ ಮೂಲಕ ಸಾಗಿದ ಮೆರವಣಿಗೆ ಹೈಸ್ಕೂಲ್ ಮೈದಾನ ತಲುಪಿತು. ಗೃಹ ಸಚಿವ ಜಿ.ಪರಮೇಶ್ವರ, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜ ಸಚಿವರಾದ ಎಸ್.ಎ.ರವೀಂದ್ರನಾಥ, ಎಂ.ಪಿ.ರೇಣುಕಾಚಾರ್ಯ, ಶಾಸಕ ಕೆ.ಎಸ್. ಬಸವಂತಪ್ಪ, ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅಂತಿಮ…

Read More

ತುಮಕೂರು: ಟಾಸ್ಕ್‌ಗಳಿಗೆ ಹಣ ಹೂಡಿಕೆ ಮಾಡಿ ದುಪ್ಪಟ್ಟು ಲಾಭ ಗಳಿಸಬಹುದು ಎಂಬ ಆಮಿಷಕ್ಕೆ ಒಳಗಾಗಿ ತುರುವೇಕೆರೆ ತಾಲ್ಲೂಕಿನ ಮುದ್ದನಹಳ್ಳಿ ಹೊಸೂರಿನ ಬಸವರಾಜು ಎಂಬುವರು 7.44 ಲಕ್ಷ ರೂ. ಕಳೆದುಕೊಂಡಿದ್ದಾರೆ. ಆರೋಪಿಗಳು ಕರೆ ಮಾಡಿ, ನೀವು ರಿಲಿಯನ್ ಪ್ರಾಪರ್ಟಿಸ್‌ ಗೆ ಸದಸ್ಯರಾಗಿದ್ದು, ನಿಮಗೆ ಮೂರು ಸ್ಲಾಟ್‌ ಗಳನ್ನು ಕೊಡುತ್ತೇವೆ. ಅದನ್ನು ಪೂರ್ಣಗೊಳಿಸಿದರೆ ಹಣ ನೀಡಲಾಗುವುದು  ಎಂದಿದ್ದಾರೆ. ಇದಾದ ಬಳಿಕ ಬಸವರಾಜು ಖಾತೆಗೆ 820 ವರ್ಗಾಯಿಸಿದ್ದಾರೆ. ಸ್ಲಾಟ್ ಮುಂದುವರಿಸಲು 11,228 ರೀಚಾರ್ಜ್ ಮಾಡಬೇಕು ಎಂದು ತಿಳಿಸಿದ್ದಾರೆ. ಬಸವರಾಜು ತಮ್ಮ ಪತ್ನಿ ಖಾತೆಯಿಂದ ಹಣ ವರ್ಗಾವಣೆ ಮಾಡಿದ್ದು, ವಾಪಸ್ 18 ಸಾವಿರ ಅವರ ಖಾತೆಗೆ ಹಾಕಿದ್ದಾರೆ. ಫ್ಲಾಟ್ ಮುಂದುವರಿಸಲು ಮತ್ತಷ್ಟು ರೀಚಾರ್ಜ್ ಮಾಡಬೇಕು ಎಂದು 10 ಸಾವಿರ ಪಡೆದಿದ್ದಾರೆ. ಇದೇ ಕಾರಣ ಹೇಳಿ ಡಿ. 7ರಿಂದ 12ರ ವರೆಗೆ ಹಂತ ಹಂತವಾಗಿ ಒಟ್ಟು 7,62,131 ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಇದರಲ್ಲಿ ಅವರಿಗೆ ಕೇವಲ 18 ಸಾವಿರ ಹಿಂದಿರುಗಿಸಿದ್ದಾರೆ. ಇದುವರೆಗೆ ವರ್ಗಾವಣೆ ಮಾಡಿದ ಹಣ ವಾಪಸ್ ಕೊಡುವಂತೆ ಬಸವರಾಜು…

Read More

ತುಮಕೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಸರ್ಕಾರದ ಗ್ಯಾರಂಟಿ ಯೋಜನೆ ಯುವನಿಧಿ ಫಲಾನುಭವಿಗಳಿಗೆ ಉಚಿತವಾಗಿ 2 ವಾರಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿ ಕಾರ್ಯಕ್ರಮವು ನಗರದ ಬಿ.ಹೆಚ್. ರಸ್ತೆ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ನಡೆಯಲಿದ್ದು, ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮ, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಉದ್ಯಮ ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ ಕುರಿತು ತರಬೇತಿ ನೀಡಲಾಗುವುದು. ತರಬೇತಿ ಪಡೆಯಲಿಚ್ಚಿಸುವ ಯುವನಿಧಿ ಫಲಾನುಭವಿಗಳು ಡಿಸೆಂಬರ್ 20ರೊಳಗಾಗಿ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ರಿಸರ್ವ್ ಪೊಲೀಸ್ ಮೈದಾನದ ಎದುರು, ಎಸ್.ಐ.ಟಿ. ಬಸ್ ನಿಲ್ದಾಣ, ತುಮಕೂರು ಅಥವಾ ದೂ.ವಾ.ಸಂ. 7022746755ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.…

Read More

ತುಮಕೂರು: ಅಸಮಾನತೆ ತೊಡೆದು ಹಾಕಿ, ಸಮ ಸಮಾಜ ನಿರ್ಮಿಸುವುದು ಸರ್ಕಾರದ ಉದ್ದೇಶ. ಇದಕ್ಕೆ ಪೂರಕವಾಗಿ ಕಳೆದ 2 ವರ್ಷದಲ್ಲಿ ತಾಂಡಾಗಳ ಅಭಿವೃದ್ಧಿಗೆ ನೂರಾರು ಕೋಟಿ ವ್ಯಯಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹೇಳಿದರು. ನಗರದಲ್ಲಿ ಶನಿವಾರ ತಾಂಡಾ ಅಭಿವೃದ್ಧಿ ನಿಗಮ, ಜಿಲ್ಲಾ ಬಂಜಾರ ಸೇವಾಲಾಲ್ ಸೇವಾ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬಂಜಾರ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. 3.40 ಕೋಟಿ ವೆಚ್ಚದಲ್ಲಿ ಭವನ ನಿರ್ಮಿಸಲಾಗಿದೆ. ತಾಂಡಾಗಳ ಮೂಲಭೂತ ಸೌಲಭ್ಯಕ್ಕೆ 50 ಕೋಟಿ ವೆಚ್ಚ ಮಾಡಲಾಗಿದೆ. 500ಕ್ಕೂ ಹೆಚ್ಚು ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಲಾಗಿದೆ. 10 ಸಾವಿರ ಲಂಬಾಣಿ ಯುವಕ, ಯುವತಿಯರಿಗೆ ಕೌಶಲ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಮಾತನಾಡಿ, ಜಾತಿ ವ್ಯವಸ್ಥೆ ಮನುಷ್ಯನನ್ನು ಕುಗ್ಗಿಸಿದೆ. ಜಾತಿ, ಉಪಜಾತಿ ಎಂದು ಒಡೆದು ಚೂರಾದರೆ ಅವಕಾಶ ದೂರವಾಗುತ್ತದೆ. ಜಾತೀಯತೆ ಇಲ್ಲದಿದ್ದರೆ ಭಾರತ ಮತ್ತಷ್ಟು ಶಕ್ತಿಯುತವಾಗುತ್ತಿತ್ತು. ತಳ ಸಮುದಾಯವನ್ನು ಸಮಾಜದ ಮುನ್ನೆಲೆಗೆ ತರುವ ಉದ್ದೇಶದಿಂದ ಸಂವಿಧಾನದಲ್ಲಿ ಕಾನೂನಾತ್ಮಕವಾಗಿ…

Read More

ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ 164 ಕೋಟಿ ವೆಚ್ಚದ ಕಾಮಗಾರಿ ನಡೆಯುತ್ತಿದ್ದು, ಈಗ ಮುಖ್ಯಮಂತ್ರಿ ನಿಧಿಯಿಂದ 50 ಕೋಟಿ ಅನುದಾನ ಬಂದಿದ್ದು, ಇನ್ನೂ ಸಾಕಷ್ಟು ಅನುದಾನ ತಂದು ಕೊರಟಗೆರೆ ಅಭಿವೃದ್ಧಿ ಮಾಡುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ತಾಲೂಕಿನ ಸಿ.ಎನ್.ದುರ್ಗ ಹೋಬಳಿಯ ಜಟ್ಟಿ ಅಗ್ರಹಾರ ಗ್ರಾಮದಲ್ಲಿ ನಡೆದ ಎತ್ತಿನಹೊಳೆ ಯೋಜನೆಗೆ ಭೂ ಸ್ವಾಧೀನ ಪಡಿಸಿಕೊಂಡ ಜಮೀನಿನ ರೈತಗೆ ಭೂ ಪರಿಹಾರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊರಟಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ ತಮ್ಮ ಆಶೀರ್ವಾದದಿಂದ ಮೂರು ಬಾರಿ ಗೃಹ ಸಚಿವನಾಗಿದ್ದೇನೆ. ಈ ರಾಜ್ಯದ ಲಕ್ಷಾಂತ ಹೆಣ್ಣು ಮಕ್ಕಳ ರಕ್ಷಣೆ, ಮಕ್ಕಳ ರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿ, ಸರ್ಕಾರಿ ಆಸ್ತಿ ರಕ್ಷಣೆ, ಮಾಡುವುದು ನಮ್ಮ ರಕ್ಷಣೆ ಆಗಿದ್ದು, ಅದರ ಜೊತೆಗೆ ಕೊರಟಗೆರೆ ಜನತೆಯನ್ನ ಯಾವುದೇ ಕಾರಣಕ್ಕೂ ಮರೆಯುವುದಿಲ್ಲ. ಕೇಂದ್ರ ಸರ್ಕಾರಿಂದ ಈಗಾಗಲೇ ಸಣ್ಣ ನೀರಾವರಿ ಇಲಾಖೆಗೆ ೩೦ ಕೋಟಿ ಅನುದಾನ ಬಂದಿದ್ದು ಆ ಕೆಲಸಗಳನ್ನ…

Read More

ನೊಣವಿನಕೆರೆ: ನೊಣವಿನಕೆರೆ ಪಿ.ಎಂ. ಶ್ರೀ–ಕೆಪಿಎಸ್ ಪ್ರಾಥಮಿಕ ಶಾಲೆಯ ತೇಜಸ್, 7ನೇ ತರಗತಿ ವಿದ್ಯಾರ್ಥಿ, ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ಸಾಧನೆ ಮಾಡಿದ್ದಾರೆ. ಈ ಮೂಲಕ ಅವರು ತುಮಕೂರು ಜಿಲ್ಲೆಯನ್ನು ಪ್ರತಿನಿಧಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ತೇಜಸ್ ಅವರ ಈ ಸಾಧನೆಗೆ ಶಾಲೆಯ ಶಿಕ್ಷಕರು, ಆಡಳಿತ ಮಂಡಳಿ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದು, ಮುಂದಿನ ಹಂತದಲ್ಲೂ ಉತ್ತಮ ಪ್ರದರ್ಶನ ನೀಡಲಿ ಎಂದು ಶುಭ ಹಾರೈಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಆಲದಕಟ್ಟೆ ರಾಷ್ಟ್ರೀಯ ಹೆದ್ದಾರಿ 150 ಎ ನಲ್ಲಿ ಶನಿವಾರ ಎರಡು ಓಮ್ನಿ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಚಾಲಕರು ಸೇರಿ ಒಟ್ಟು ಏಳು ಮಂದಿ ಗಾಯಗೊಂಡ ಘಟನೆ ನಡೆದಿದೆ. ಚಿಕ್ಕನಾಯಕನಹಳ್ಳಿ ಮಾರ್ಗವಾಗಿ ತೆರಳುತ್ತಿದ್ದ ಓಮ್ನಿ ವಾಹನಕ್ಕೆ ಹುಳಿಯಾರು ಮಾರ್ಗವಾಗಿ ಬರುತ್ತಿದ್ದ ಮತ್ತೊಂದು ಓಮ್ನಿ ವಾಹನವು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಓಮ್ನಿ ವಾಹನಗಳ ಚಾಲಕರಾದ ಅದಿಲ್ ಮತ್ತು ಪ್ರಕಾಶ್ ಅವರಿಗೆ ಕಾಲು ಮುರಿದಿದ್ದು, ತೀವ್ರ ಸ್ವರೂಪದ ಗಾಯಗಳಾಗಿವೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಐದು ಜನ ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಹೆಚ್ಚಿನ ಚಿಕಿತ್ಸೆ ಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳನ್ನು ಚಿಕ್ಕನಾಯಕನ ಹಳ್ಳಿ ಆಸ್ಪತ್ರೆಗೆ ರವಾನಿಸಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆ ಗಾಗಿ ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಭೂಮಿ ಸ್ವಾಧೀನಪಡಿಸಿಕೊಂಡು ಸೂಕ್ತ ಪರಿಹಾರ ನೀಡದ ನಗರದ ತುಮಕೂರು ರಾಯದುರ್ಗ, ತುಮಕೂರು, ದಾವಣಗೆರೆ ರೈಲು ಯೋಜನೆಯ ವಿಶೇಷ ಭೂ ಸ್ವಾಧೀನ ಅಧಿಕಾರಿ ಕಚೇರಿ ಪೀಠೋಪಕರಣವನ್ನು ಜಪ್ತಿ ಮಾಡಲಾಯಿತು. ತಾಲ್ಲೂಕಿನ ಹರಿಯಪ್ಪನಹಳ್ಳಿ ಗ್ರಾಮದ ರೈತ ಚಿಕ್ಕವೀರಯ್ಯ ಅವರ ಕೋರ ಗ್ರಾಮದ ಸರ್ವೇನಂ.69/5 ಮತ್ತು 67/1 ಒಟ್ಟು 1 ಎಕರೆ 7 ಗುಂಟೆ ಜಮೀನನ್ನು ತುಮಕೂರು ದಾವಣಗೆರೆ ರೈಲು ಮಾರ್ಗಕ್ಕೆ ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಸರ್ಕಾರ ನಿಗದಿಪಡಿಸಿದಂತೆ 70 ಲಕ್ಷ ರೂ. ಪರಿಹಾರ ನೀಡಲಾಗಿತ್ತು. ಮಾರುಕಟ್ಟೆಯ ದರ ನೀಡುವಂತೆ ಚಿಕ್ಕವೀರಯ್ಯ ಕೋರ್ಟ್ ಮೊರೆ ಹೋಗಿದ್ದರು. ಮೂರು ತಿಂಗಳ ಒಳಗೆ 1.30 ಕೋಟಿ ಹೆಚ್ಚುವರಿ ಪರಿಹಾರ ನೀಡುವಂತೆ ತುಮಕೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆದೇಶಿಸಿತ್ತು. ಪರಿಹಾರ ನೀಡದ ಕಾರಣ ತುಮ ಕೂರು ರಾಯದುರ್ಗ ತುಮಕೂರು ದಾವಣಗೆರೆ ರೈಲು ಯೋಜನೆಯ ವಿಶೇಷ ಭೂಸ್ವಾಧೀನ ಅಧಿಕಾರಿ ಕಚೇರಿಯ ಪೀಠೋಪಕರಣವನ್ನು ಜಪ್ತಿ ಮಾಡಲಾಯಿತು. ಈ ಪ್ರಕರಣ ಸಂಬಂಧ ರೈತ ಚಿಕ್ಕವೀರಯ್ಯ ಪರವಾಗಿ ವಕೀಲರಾದ ಹೆಚ್. ಆರ್. ಕಾಂತರಾಜು ವಾದ ಮಂಡಿಸಿದ್ದರು.…

Read More

ತುಮಕೂರು: ಗುಬ್ಬಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 10 ಅಂಗನವಾಡಿ ಕಾರ್ಯಕರ್ತೆ ಹಾಗೂ 118  ಸಹಾಯಕಿಯರ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ತಮ ಅರ್ಜಿಯನ್ನು 2026ರ ಜನವರಿ 9ರೊಳಗಾಗಿ https://karnemakaone.kar.nic.in/abcd/  ವೆಬ್‌ ಸೈಟ್ ವಿಳಾಸದ ಮೂಲಕ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ. ಸಂ. 08131-223731ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More