Subscribe to Updates
Get the latest creative news from FooBar about art, design and business.
- ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
- ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
- ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
- ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
- ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
Author: admin
ಬಳ್ಳಾರಿ: ಏಷ್ಯನ್ ಚಾಂಪಿಯನ್ ಶಿಪ್ ಅಂಡರ್–23 ಅಥ್ಲೆಟಿಕ್ಸ್ ನ 4*100 ಮೀಟರ್ ರಿಲೇಯಲ್ಲಿ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದ ಬಳ್ಳಾರಿ ಜಿಲ್ಲೆಯ ಹೆಮ್ಮೆಯ ಪ್ರತಿಭೆ ಸುದೀಕ್ಷಾ ಅವರಿಗೆ ಬಳ್ಳಾರಿ ಜಿಲ್ಲಾಡಳಿತದಿಂದ ಗುರುವಾರ ಹೊಸ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು, ಸುದೀಕ್ಷಾ ಅವರ ಈ ಸಾಧನೆ ಇಡೀ ದೇಶಕ್ಕೆ ಹಾಗೂ ವಿಶೇಷವಾಗಿ ನಮ್ಮ ಬಳ್ಳಾರಿ ಜಿಲ್ಲೆಗೆ ಅತ್ಯಂತ ಸಂತೋಷ ಮತ್ತು ಹೆಮ್ಮೆಯ ವಿಷಯವಾಗಿದೆ. ಅವರ ಅಪೂರ್ವ ಪ್ರತಿಭೆಯನ್ನು ಗೌರವಿಸುವ ಸಲುವಾಗಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಇಂದು ಸನ್ಮಾನ ಮಾಡಲಾಗಿದೆ. ಇದರೊಂದಿಗೆ ಸಾಂಕೇತಿಕವಾಗಿ ಜಿಲ್ಲಾ ಕ್ರೀಡಾ ಇಲಾಖೆ ವತಿಯಿಂದ ರೂ.50 ಸಾವಿರ ಚೆಕ್ ಕೂಡ ನೀಡಲಾಗಿದೆ ಎಂದು ತಿಳಿಸಿದರು. ಸುದೀಕ್ಷಾ ಅವರು, ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿಯೇ ಶ್ರೀ ರಾಮಸ್ವಾಮಿ ಅವರ ಮಾರ್ಗದರ್ಶನದಲ್ಲಿ ತಮ್ಮ ಅಥ್ಲೆಟಿಕ್ಸ್ ತರಬೇತಿ ಹಾಗೂ ಸಿದ್ಧತೆಗಳನ್ನು ನಡೆಸಿದ್ದರು ಎಂಬುದು ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಬಳ್ಳಾರಿಯ…
ಬಾಗಲಕೋಟೆ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗಳನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ. ಮುಖ್ಯಮಂತ್ರಿಯವರು ಬರೆದಿಟ್ಟ ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬರಪೀಡಿತ ಪ್ರದೇಶಗಳ ಪ್ರವಾಸದಲ್ಲಿದ್ದ ಅವರು, ಬಾದಾಮಿ ತಾಲೂಕಿನ ಕೆಂದೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. “ಬಿಡದಿ ಟೌನ್ ಶಿಪ್ ಯೋಜನೆ ವಿಚಾರದಲ್ಲಿ ಮುಖ್ಯಮಂತ್ರಿಗಳು ಗೊಂದಲ ಸೃಷ್ಟಿಸುತ್ತಿದ್ದಾರೆ. ಒಂದು ಕಡೆ ಯೋಜನೆ ಕುರಿತು ಪರಿಶೀಲನಾ ಸಮಿತಿ ರಚಿಸುತ್ತೇನೆ ಎಂದು ಹೇಳುತ್ತಾರೆ, ಮತ್ತೊಂದೆಡೆ ಮೂರು ಗ್ರಾಮಗಳಿಗೆ ಭೂಸ್ವಾಧೀನದ ಅಂತಿಮ ಅಧಿಸೂಚನೆ ಹೊರಡಿಸಿದ್ದಾರೆ. ಅವರ ಮನಸ್ಸಿನಲ್ಲಿ ಬೇರೆ ಲೆಕ್ಕಾಚಾರವೇ ಇದೆ. ಆದರೆ ಹೊರಗಡೆ ಮಾತ್ರ ನಾಟಕ ಕಂಪನಿ ನಡೆಸುತ್ತಿದ್ದಾರೆ” ಎಂದು ನಿಖಿಲ್ ಕಿಡಿಕಾರಿದರು. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಯೋಜನೆಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಿರಲಿಲ್ಲ, ಕೇವಲ ಯೋಜನೆಗೆ ಸಂಬಂಧಿಸಿದ ಅಧಿಸೂಚನೆ ಮಾತ್ರ ಹೊರಡಿಸಿದ್ದರು ಎಂದು ಸ್ಪಷ್ಟಪಡಿಸಿದ ಅವರು, “ಕುಮಾರಸ್ವಾಮಿ ಅವರು ಈ…
ರಾಯಚೂರು: ಬೀದಿ ನಾಯಿಗಳ ಹಿಂಡು ಏಕಾಏಕಿ ದಾಳಿ ನಡೆಸಿದ ಪರಿಣಾಮವಾಗಿ ಒಂದೂವರೆ ವರ್ಷದ ಹೆಣ್ಣು ಮಗು ಸಾವನ್ನಪ್ಪಿರುವ ಅತ್ಯಂತ ದಾರುಣ ಮತ್ತು ಮನಕಲಕುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಸಿಂಧನೂರು ತಾಲೂಕಿನ ಕೆ. ಹಂಚಿಕಾಳ ಕ್ಯಾಂಪ್‌ನ ನಿವಾಸಿಗಳಾದ ಅಬ್ದುಲ್ ರಜಾಕ್ ಮತ್ತು ನದಾಫ್ ದಂಪತಿಯ 18 ತಿಂಗಳ ಪುತ್ರಿ ‘ಅನಂ’ ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಜೀವ ಕಳೆದುಕೊಂಡ ದುರ್ದೈವಿ ಬಾಲಕಿ. ಮನೆಯಲ್ಲಿ ಮಲಗಿದ್ದ ಮಗು ಅನಂ, ಎಚ್ಚರಗೊಂಡ ಬಳಿಕ ಪೋಷಕರಿಗೆ ತಿಳಿಯದಂತೆ ರಸ್ತೆಗೆ ಬಂದಿದೆ. ಈ ವೇಳೆ ಹತ್ತಿರದಲ್ಲಿದ್ದ ಕೋಳಿ ಅಂಗಡಿಯ ಬಳಿ ಜಮಾಯಿಸಿದ್ದ ಆರೇಳು ಬೀದಿ ನಾಯಿಗಳ ಹಿಂಡು ಮಗುವಿನ ಮೇಲೆ ಏಕಾಏಕಿ ಮುಗಿಬಿದ್ದಿವೆ. ನಾಯಿಗಳು ಮಗುವನ್ನು ಮನಬಂದಂತೆ ಕಚ್ಚಿ ಎಳೆದಾಡಿ ತೀವ್ರವಾಗಿ ಗಾಯಗೊಳಿಸಿವೆ. ಮಗುವಿನ ಕಿರುಚಾಟ ಕೇಳಿ ಪೋಷಕರು ಮತ್ತು ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಓಡಿ ಬಂದು ನಾಯಿಗಳನ್ನು ಓಡಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ತಕ್ಷಣವೇ ಸಿಂಧನೂರು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಮಗುವಿನ ಸ್ಥಿತಿ…
ಬೆಂಗಳೂರು: ರಾಜ್ಯದಲ್ಲಿ ತೀವ್ರಗೊಂಡಿರುವ ಮಳೆ ಕೊರತೆ, ಕುಡಿಯುವ ನೀರಿನ ಬಿಕ್ಕಟ್ಟು ಹಾಗೂ ಕೃಷಿ ವಲಯದ ಬಿಕ್ಕಟ್ಟನ್ನು ಪರಿಹರಿಸಲು ಕರ್ನಾಟಕದ ಬರ ಪರಿಸ್ಥಿತಿಯನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಬೇಕು ಹಾಗೂ ಕೇಂದ್ರ ಸರ್ಕಾರದಿಂದ ವಿಶೇಷ ಆರ್ಥಿಕ ನೆರವು ನೀಡಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕೇಂದ್ರ ಕೃಷಿ ಸಚಿವರಿಗೂ ಪತ್ರ ಬರೆದಿದ್ದು, ಕೇಂದ್ರದ ಪ್ರತಿಕ್ರಿಯೆಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ. ಪರಮೇಶ್ವರ್ ಅವರು ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಕರ್ನಾಟಕದಲ್ಲಿ ಜೂನ್ ತಿಂಗಳಲ್ಲಿ ಶೇಕಡಾ 42 ರಷ್ಟು ಮತ್ತು ಜುಲೈನಲ್ಲಿ ಇದುವರೆಗೆ ಶೇಕಡಾ 34 ರಷ್ಟು ಮಳೆ ಕೊರತೆ ದಾಖಲಾಗಿದೆ. ಈ ಭೀಕರ ಮಳೆ ಕೊರತೆಯಿಂದಾಗಿ ರಾಜ್ಯದ ಹಲವು ಪ್ರದೇಶಗಳಲ್ಲಿ ಬಿತ್ತನೆಯಾಗಿದ್ದ ಬೆಳೆಗಳಲ್ಲಿ ಸುಮಾರು ಶೇಕಡಾ 80 ರಷ್ಟು ನಷ್ಟ ಸಂಭವಿಸಿದೆ. ಅಂತರ್ಜಲ ಮಟ್ಟ ತೀವ್ರವಾಗಿ ಕುಸಿದಿದ್ದು, ಜಲಾಶಯಗಳಿಗೆ ನೀರಿನ ಹರಿವು…
ಬೀದರ್: ಜಿಲ್ಲೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಬೀದರ್ ಸಬ್ ಅರ್ಬನ್ ಠಾಣೆ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ₹6.73 ಲಕ್ಷ ಮೌಲ್ಯದ 5 ನಾಡ ಪಿಸ್ತೂಲ್, 26 ಜೀವಂತ ಗುಂಡುಗಳು ಹಾಗೂ 5 ತಲ್ವಾರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೀದರ್ ನಗರದ ಗುರುದ್ವಾರ ಸಮೀಪದ ನಿವಾಸಿ ಅಮನ್‌ಜೀತ್ ಸಿಂಗ್ ರಂಜೀತ್ ಸಿಂಗ್ (21) ಹಾಗೂ ಶಹಾಗಂಜ್‌ನ ವೆಂಕಟೇಶ್ ತುಕಾರಾಮ (21) ಬಂಧಿತ ಆರೋಪಿಗಳು. ಇವರಿಗೆ ಶಸ್ತ್ರಾಸ್ತ್ರ ಪೂರೈಕೆ ಮಾಡಿದ್ದ ಮಹಾರಾಷ್ಟ್ರದ ನಾಂದೇಡ್ ಮೂಲದ ಬಲಬೀರ್ ಸಿಂಗ್ ಪ್ರತಾಪ್ ಸಿಂಗ್ (23) ಮತ್ತು ನವಜೋತ್ ಸಿಂಗ್ ಇಂದೇರ್ ಸಿಂಗ್ (24) ಎಂಬುವವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಈ ನಾಲ್ವರ ವಿರುದ್ಧ ಬೀದರ್ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆ ನಡೆದಿದ್ದು ಹೇಗೆ? ಜುಲೈ 15ರ ಬುಧವಾರ ಸಂಜೆ ಬೀದರ್ ಸಬ್ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕಪೇಟ್ ರಿಂಗ್ ರೋಡ್ ನ ಖಾಸಗಿ ಶಾಲೆಯೊಂದರ ಸಮೀಪ ಇಬ್ಬರು…
ತಿಪಟೂರು: ನಗರದ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಜುಲೈ 16ರ ಗುರುವಾರ ಮಧ್ಯಾಹ್ನ 12 ಗಂಟೆಗೆ ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಅವರು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ರೋಟರಿ ಸಂಸ್ಥೆಯ ಟ್ರಸ್ಟ್ ಅಧ್ಯಕ್ಷ ಬಿಸಿ ಪ್ರಭುಸ್ವಾಮಿ ತಿಳಿಸಿದರು. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ತಿಪಟೂರಿನಲ್ಲಿ 1959ರಲ್ಲಿ ಪ್ರಾರಂಭವಾದ ರೋಟರಿ ಸಂಸ್ಥೆಯು ಕಳೆದ 66 ವರ್ಷಗಳಿಂದ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಹಲವಾರು ಜನಪರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿದೆ. ಇದೀಗ 67ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿರುವ ಪ್ರಕಾಶ್ ಅವರು ಯುವಕರಾಗಿದ್ದು, ದೀನದಲಿತರ ಹಾಗೂ ಬಡವರ ಪರವಾಗಿ ಸೇವೆ ಸಲ್ಲಿಸಲು ಇದೊಂದು ಉತ್ತಮ ಅವಕಾಶವಾಗಿದೆ” ಎಂದರು. ಮುಂದುವರಿದು ಮಾತನಾಡಿದ ಅವರು, “ಸಂಸ್ಥೆಯ ಹಿರಿಯರು ಹಾಗೂ ವಕೀಲರಾದ ಉಮೇಶ್ ಅವರು ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಅವರ ದೀರ್ಘಕಾಲದ ಅನುಭವವು ರೋಟರಿ ಸಂಸ್ಥೆಯ ಜನೋಪಯೋಗಿ ಕೆಲಸಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಲು ಅನುಕೂಲವಾಗಲಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಪದಗ್ರಹಣ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷರಾದ ವನಿತಾ…
ತುಮಕೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ತುಮಕೂರು ಹಾಗೂ ಮಾರುತಿ ವಿದ್ಯಾಕೇಂದ್ರ ಬೆಳಗುಂಬ, ತುಮಕೂರು ಇವರ ಸಹಯೋಗದಲ್ಲಿ ಜುಲೈ 17 ರಂದು ಬೆಳಗ್ಗೆ 10 ಗಂಟೆಗೆ ಮಾರುತಿ ವಿದ್ಯಾಕೇಂದ್ರ, ಕಾಲೇಜು ಸಭಾಂಗಣ, ಬೆಳಗುಂಬ, ತುಮಕೂರು ಇಲ್ಲಿ ಕಾನೂನು ಅರಿವು-ನೆರವು ಮತ್ತು ಪೋಕ್ಸೊ ಕಾಯ್ದೆ ಕುರಿತ ಕಾರ್ಯಕ್ರಮ ಆಯೋಜಿಸಲಾಗಿದೆ. ಉದ್ಘಾಟನೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಲೋಕೇಶ ಧನಪಾಲ ಹವಲೆ ಅವರು ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಮಾರುತಿ ವಿದ್ಯಾಕೇಂದ್ರದ ಪ್ರಾಂಶುಪಾಲರಾದ ಸುಷ್ಮಾ ಶರ್ಮ ಅವರು ವಹಿಸುವರು. ಸಂಪನ್ಮೂಲ ವ್ಯಕ್ತಿಯಾಗಿ ಪ್ಯಾನಲ್ ವಕೀಲರಾದ ಆಶಾ ಅವರು ಆಗಮಿಸುವರು. ನಿವೃತ್ತ ಬ್ಯಾಂಕ್ ವ್ಯವಸ್ಥಾಪಕ ಕೆ.ಎಂ.ರಾಮಕೃಷ್ಣಯ್ಯ ಕಾರ್ಯಕ್ರಮ ಕುರಿತು ಮಾತನಾಡುವರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಕೋಟ್ಯಾಕ್ ಮಹೀಂದ್ರ ಬ್ಯಾಂಕ್ ಹಾಗೂ ಮುತ್ತೂಟ್ ಫಿನ್ಕಾರ್ಪ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ಜುಲೈ 17ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು (Walk-in Interview) ಆಯೋಜಿಸಿದೆ. ಹುದ್ದೆಗಳ ವಿವರ: ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಈ ಕೆಳಗಿನ ಹುದ್ದೆಗಳು ಲಭ್ಯವಿವೆ: ಅಸಿಸ್ಟೆಂಟ್ ಮ್ಯಾನೇಜರ್ (Assistant Manager) ಬ್ಯುಸಿನೆಸ್ ಡೆವಲಪ್ಮೆಂಟ್ ಎಕ್ಸಿಕ್ಯೂಟಿವ್ (Business Development Executive) ಅರ್ಹತೆಗಳು: ಶೈಕ್ಷಣಿಕ ಅರ್ಹತೆ: ಪಿಯುಸಿ (PUC) ಅಥವಾ ಯಾವುದೇ ಪದವಿ (Any Degree) ಪಾಸಾಗಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಅರ್ಹರು: ಪುರುಷ ಹಾಗೂ ಮಹಿಳಾ ಅಭ್ಯರ್ಥಿ ಇಬ್ಬರಿಗೂ ಮುಕ್ತ ಅವಕಾಶವಿದೆ. ಸಂಪರ್ಕ ಮಾಹಿತಿ: ಸಂದರ್ಶನಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು, ಅಗತ್ಯ ದಾಖಲೆಗಳು ಹಾಗೂ ಸ್ಥಳದ ಮಾಹಿತಿಗಾಗಿ ಆಸಕ್ತರು ಈ ಕೆಳಗಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ: ದೂರವಾಣಿ: 0816-2278488 ಮೊಬೈಲ್: 8792669410 ಅರ್ಹ…
ತುಮಕೂರು: ಕರ್ನಾಟಕ ಅಥ್ಲೆಟಿಕ್ ಸಂಸ್ಥೆ ವತಿಯಿಂದ ಆಗಸ್ಟ್ 7 ಮತ್ತು 8ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟದಲ್ಲಿ ಭಾಗವಹಿಸಲಿರುವ ತುಮಕೂರು ಜಿಲ್ಲಾ ತಂಡಕ್ಕೆ ಜುಲೈ 17 ರ (ಶುಕ್ರವಾರ) ಬೆಳಿಗ್ಗೆ 8.30 ರಿಂದ ಸಂಜೆ 4ಗಂಟೆಗೆ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದು ಜಿಲ್ಲಾ ಅಥ್ಲೆಟಿಕ್ ಸಂಸ್ಥೆ ಕಾರ್ಯದರ್ಶಿ ಎ.ಎನ್. ಪ್ರಭಾಕರ್ ತಿಳಿಸಿದ್ದಾರೆ. ಈ ಕೂಟವು 14, 16, 18, ಮತ್ತು 20ರ ವಯಸ್ಸಿನೊಳಗಿನ ಬಾಲಕ–ಬಾಲಕಿಯರಿಗಾಗಿ ಏರ್ಪಡಿಸಲಾಗಿದೆ. 14 ವರ್ಷದೊಳಗಿನ ಬಾಲಕ ಬಾಲಕಿಯರು, 17.09.2012 ಮತ್ತು 17.10.2014ರ ಒಳಗೆ ಜನಿಸಿರಬೇಕು. 16 ವರ್ಷದೊಳಗಿನವರು 17.09.2010 ಮತ್ತು 17.10.2012ರ ಒಳಗೆ ಜನಿಸಿರಬೇಕು 18 ವರ್ಷದೊಳಗಿನವರು 17.09.2008 ಮತ್ತು 17.10.2010ರ ಒಳಗೆ ಜನಿಸಿರಬೇಕು ಹಾಗೂ 20 ವರ್ಷದೊಳಗಿನವರು 17.09.2006 ಮತ್ತು 17.10.2008 ರ ಒಳಗೆ ಜನಿಸಿರಬೇಕು. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲಿಚ್ಛಿಸುವ ಕ್ರೀಡಾಪಟುಗಳು 150 ರೂ.ಗಳೊಂದಿಗೆ ಎಎಫ್ ಐ ನೀಡಿರುವ ಯುಐಡಿ ನಂಬರ್ ನೊಂದಿಗೆ ತಮ್ಮ ಜನ್ಮ ದಿನಾಂಕದ ಪತ್ರ, ಆಧಾರ್…
ತುಮಕೂರು : ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಗಾಂಜಾ ಮಾರಾಟ, ಮನೆ ಕಳ್ಳತನ, ಬೋರ್ವೆಲ್ ಸ್ಟಾರ್ಟರ್ ಕಳ್ಳತನ ಹಾಗೂ ಹೆದ್ದಾರಿ ಮತ್ತು ಒಂಟಿ ಮನೆಗಳಲ್ಲಿ ನಡೆದ ಸುಲಿಗೆ ಪ್ರಕರಣಗಳನ್ನು ತುಮಕೂರು ಜಿಲ್ಲಾ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ ಎಂದು ಎಸ್ಪಿ ಅಶೋಕ್ ಕೆ.ವಿ. ತಿಳಿಸಿದರು. ನಗರದ ಎಸ್ ಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗಾಂಜಾ ಮಾರಾಟ ಪ್ರಕರಣಗಳನ್ನು ಒಟ್ಟು 6 ಮಂದಿ ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿ, ಗಾಂಜಾ ಮಾರಾಟ, ಮನೆ ಕಳ್ಳತನ, ಬೋರ್ವೆಲ್ ಸ್ಟಾರ್ಟರ್ ಕಳ್ಳತನ ಹಾಗೂ ಹೆದ್ದಾರಿ ಮತ್ತು ಒಂಟಿ ಮನೆಗಳಲ್ಲಿ ನಡೆದ ಸುಲಿಗೆ ಪ್ರಕರಣಗಳ ಮಾಹಿತಿ ನೀಡಿದರು. ಪ್ರಕರಣ 1: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಬಂಧನ ತುಮಕೂರು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಗಾಂಜಾ ಮತ್ತು ಹೈಡ್ರೋವಿಡ್ ಗಾಂಜಾ ಮಾರಾಟ ಮಾಡುತ್ತಿದ್ದ ಆರು ಸದಸ್ಯರ ಗ್ಯಾಂಗ್ ಅನ್ನು ತಿಲಕ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಜುಲೈ 10ರಂದು ಶೇಷಾದ್ರಿಪುರಂ ಕಾಲೇಜು…