Subscribe to Updates
Get the latest creative news from FooBar about art, design and business.
- ಎಸ್ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
- ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
- ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
- ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
- ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
- ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
- ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
- ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
Author: admin
ಲಾಹಾವುಲ್ ಹಾಗೂ ಸ್ಪಿಟಿಗೆ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಹಿಮಾಚಲಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಅವರಿಗೆ ಸ್ಥಳೀಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ತೋರಿಸಿದ ಘಟನೆ ನಡೆದಿದೆ. ಕಂಗನಾ ಅವರ ಬೆಂಗಾವಲು ವಾಹನಗಳ ಮೇಲೆ ಕಲ್ಲೆಸೆಯಲಾಗಿದೆಯೆಂದು ಬಿಜೆಪಿ ಆಪಾದಿಸಲಾಗಿದೆ. ‘ಕಂಗನಾ ವಂಗನಾ ನಹಿ ಚಲೇಗಿ’, ‘ಕಂಗನಾ ಗೋ ಬ್ಯಾಕ್’ ಇತ್ಯಾದಿ ಘೋಷಣೆಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಕೂಗಿದ್ದಾರೆ. ಟಿಬೆಟ್ ಅಧ್ಯಾತ್ಮಿಕ ಧರ್ಮಗುರು ದಲಾಯಿ ಲಾಮಾ ಬಗ್ಗೆ ಕಂಗನಾ ಅವರು ಕಳೆದ ವರ್ಷದ ಎಪ್ರಿಲ್ ನೀಡಿದ ವಿವಾದಿತ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಚುನಾವಣಾ ಪ್ರಚಾರ ಸಭೆಯನ್ನು ಕೆಡಿಸಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದ್ದಾರೆ ಹಾಗೂ ತಾವು ಹಿಂತಿರುಗುತ್ತಿದ್ದಾಗ ತಮ್ಮ ಕಾರಿಗೆ ಕಲ್ಲೆಸೆದಿದ್ದಾರೆಂದು ಹಿಮಾಚಲಪ್ರದೇಶದ ಪ್ರತಿಪಕ್ಷ ನಾಯಕ ಜೈ ರಾಮ್ ಠಾಕೂರ್ ಆಪಾದಿಸಿದ್ದಾರೆ. ‘ಅಮೆರಿಕದ ಶ್ವೇತಭವನಕ್ಕೆ ಭೇಟಿ ನೀಡಿದ ಸಂದರ್ಭ, ದಲಾಯಿ ಲಾಮಾ ಅವರು ಜೊಬೈಡೆನ್ ಜೊತೆ ಫೋಟೋ ತೆಗೆಸಿಕೊಂಡ ಸಂದರ್ಭ ತನ್ನ ನಾಲಗೆಯನ್ನು ಹೊರಚಾಚಿರುವ ಛಾಯಾಚಿತ್ರವನ್ನು…
ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟ ಮಾಡುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ಹೇಳಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ ಸೈಟ್ ಮೇಲೆ ಕ್ಲಿಕ್ ಮಾಡಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಅಲ್ಲದೆ, ಮಂಗಳವಾರವೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ಫಲಿತಾಂಶವನ್ನು ನೋಡುವುದು ಹೇಗೆ? ದ್ವಿತೀಯ PUC ಫಲಿತಾಂಶಗಳು https://karresults.nic.in/ ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್ ಗೆ ಭೇಟಿ ನೀಡಿ. ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ. ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು…
ಕೆಲದಿನಗಳ ಹಿಂದೆ ಪುಟ್ಟ ಕಂದಮ್ಮವೊಂದು ಅಪಾರ್ಟ್ ಮೆಂಟ್ ನ ಬಾಲ್ಕನಿಯಿಂದ ಬಿದ್ದಿದ್ದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು, ಮತ್ತು ಆ ಮಗುವನ್ನು ರಕ್ಷಿಸಲಾಗಿತ್ತು. ಇದೀಗ ಆ ಮಗುವಿನ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಕಸ್ಮಿಕವಾಗಿ ತನ್ನ ಕೈಯಿಂದ ಜಾರಿ ಮಗು ಅಪಾರ್ಟ್ ಮೆಂಟ್ ಬಾಲ್ಕನಿಯಲ್ಲಿ ಬಿದ್ದ ಘಟನೆಯ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ನಿಂದನೆ ವ್ಯಕ್ತವಾಗಿದ್ದರಿಂದ, ಮನನೊಂದು ಟೆಕ್ಕಿ ರಮ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಯಮತ್ತೂರಿನ ಕಾರಮಡೈಯಲ್ಲಿರುವ ತವರು ಮನೆಯಲ್ಲಿ ರಮ್ಯಾ ಸಾವನ್ನಪ್ಪಿರುವುದು ಅಚ್ಚರಿಗೆ ಕಾರಣವಾಗಿದೆ. ತಾಯಿಯ ಕೈಯಿಂದ ಮಗು ಬಿತ್ತೆಂದು ವೈರಲ್ ವಿಡಿಯೋದಲ್ಲಿ ಹಲವರು ತಾಯಿಯನ್ನು ನಿಂದಿಸಿದ್ದರು ಎನ್ನಲಾಗಿದೆ. ಈ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರಮ್ಯಾ ಚೆನ್ನೈನ ಐಟಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಆಕೆಯ ಪತಿ ವೆಂಕಟೇಶ್ ಕೂಡ ಐಟಿ ಉದ್ಯೋಗಿ ಎನ್ನಲಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರಮ್ಯಾರನ್ನು ಪೋಷಕರು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ ಆಕೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ…
ತುಮಕೂರು: ಮುಂಗಾರು ಮಳೆಯಿಂದ ಸಂಭವಿಸಬಹುದಾದ ವಿವಿಧ ರೀತಿಯ ಪ್ರಾಕೃತಿಕ ವಿಕೋಪ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳುವ ಮೂಲಕ ಜಿಲ್ಲೆಯಲ್ಲಿ ಯಾವುದೇ ಜೀವಹಾನಿಯಾಗದ ರೀತಿಯಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಸನೃದ್ದರಾಗಿರುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ನಿರ್ದೇಶನ ನೀಡಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ವೀಡಿಯೋ ಕಾನ್ಪೆರೆನ್ಸ್ ಸಭಾಂಗಣದಲ್ಲಿ ನಡೆದ ‘ಮುಂಗಾರು-೨೦೨೪ ಪೂರ್ವಸಿದ್ದತೆ ಹಾಗೂ ಬರ ನಿರ್ವಹಣೆ ಮತ್ತು ಕಂದಾಯ ವಿಷಯಗಳಿಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾದ್ಯಂತ ಆಗಿರುವ ಮಳೆಯ ಪ್ರಮಾಣ, ಅದರಿಂದ ಆದ ಹಾನಿ, ಬರ ನಿರ್ವಹಣೆ, ಮೊದಲಾದ ವಿಷಯದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ರಾಷ್ಟೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಗಾರು ಮಳೆ ಹಾಗೂ ಚಂಡಮಾರುತ ಪರಿಣಾಮಗಳನ್ನು ತಗ್ಗಿಸಲು ಕ್ಯೆಗೊಳ್ಳಬಹುದಾದ ಕ್ರಮಗಳ ಕುರಿತು ನೀಡಿರುವ ಸಲಹೆ ಸೂಚನೆಗಳ ರೀತ್ಯ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು, ಜಿಲ್ಲೆಯಲ್ಲಿ ಈ ಹಿಂದಿನ ವರ್ಷಗಳಲ್ಲಿ ಉಂಟಾದ ಘಟನೆಗಳಿಗೆ ಅನುಗುಣವಾಗಿ ಸಮಸ್ಯೆಗೆ ಒಳಗಾದ ಸ್ಥಳಗಳನ್ನು ಪರಿಶೀಲಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.…
ಕೊರಟಗೆರೆ: ಕುರಿಮಂದೆಯನ್ನು ಗಮನಿಸಿದ ಹೆಬ್ಬಾವೊಂದು ಮೇಕೆ ಮರಿಯನ್ನು ತಿನ್ನಲು ಬಂದಾಗ, ಉರಗ ತಜ್ಞರ ಸಹಾಯದಿಂದ ಹೆಬ್ಬಾವನ್ನು ಸೆರೆಹಿಡಿಯಲಾಗಿರುವ ಘಟನೆ ಕೊರಟಗೆರೆ ತಾಲ್ಲೂಕಿನ ಕುರಂಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಣುವಿನಕುರಿಕೆ ಗ್ರಾಮದಲ್ಲಿ ನಡೆದಿದೆ. ಕುರಿಗಳನ್ನು ಮೇಯಿಸುತ್ತಿದ್ದ ವೇಳೆ, ಸುಮಾರು 11 ಅಡಿ ಉದ್ದ, 16 ಕೆಜಿ ತೂಕದ ಬೃಹತ್ ಗಾತ್ರದ ಹೆಬ್ಬಾವು ಮೇಕೆಯ ಮೇಲೆ ದಾಳಿ ಮಾಡಿ ಮೇಕೆ ಮರಿ ನುಂಗಲು ಯತ್ನಿಸುತ್ತಿದ್ದ ವೇಳೆ, ಇದನ್ನು ಗಮನಿಸಿದ ಮಾಲೀಕ ಮೇಕೆ ಮರಿ ಪ್ರಾಣ ಉಳಿಸಲು ಜೋರಾಗಿ ಕಿರುಚಾಡಿದ್ದಾರೆ. ಜನರ ಕಿರುಚಾಟಕ್ಕೆ ಬೆದರಿದ ಹೆಬ್ಬಾವು ಅಲ್ಲೆ ಪಕ್ಕದಲ್ಲಿದ್ದ ಕತ್ತಾಳೆ ಗಿಡ ಸೇರಿ ಅವಿತುಕೊಂಡಿದೆ. ಕೂಡಲೇ ಸ್ಥಳೀಯರು ತುಮಕೂರು ವರಂಗಲ್ ಫೌಂಡೇಶನ್ ವನ್ಯಜೀವಿ ಹಾಗೂ ಉರಗ ರಕ್ಷಣಾ ಸಂಸ್ಥೆಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಉರಗ ತಜ್ಞ ದಿಲೀಪ್ ಸುಮಾರು ಸಮಯ ಕಾರ್ಯಾಚರಣೆ ನಡೆಸಿ ಹೆಬ್ಬಾವನ್ನು ಸೆರೆ ಹಿಡಿದು, ಹೊರ ತಂದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಗಿದೆ. ಇನ್ನು ಈ ಕಾರ್ಯಾಚರಣೆಯಲ್ಲಿ ಆರ್‌ಎಫ್‌ಓ ರವಿಕುಮಾರ್ ನೇತೃತ್ವದಲ್ಲಿ ಡಿ…
ಗುಬ್ಬಿ: ಹೇಮಾವತಿ ನೀರು ಮಾಗಡಿಗೆ ಹರಿಸುವ ಲಿಂಕ್ ಕೆನಾಲ್ ಪೈಪ್ ಲೈನ್ ಕಾಮಗಾರಿಗೆ ಸಾವಿರಾರು ರೈತರು ಹೋರಾಟ ನಡೆಸಿ ಕೆಲಸ ನಿಲ್ಲಿಸಲು ಸೂಚಿಸಿದ್ದರೂ, ಮೂರು ದಿನದ ಬಳಿಕ ಬೃಹತ್ ಗಾತ್ರದ ೧೨ ಅಡಿ ವ್ಯಾಸದ ಪೈಪ್ ಗಳನ್ನು ಲಾರಿಗಳ ಮೂಲಕ ತಂದು ಕೆಲಸ ಪುನರಾರಂಭ ಮಾಡುವ ಮುನ್ಸೂಚನೆ ಕಂಡ ರೈತರು, ತಕ್ಷಣ ಶಾಸಕ ಎಂ.ಟಿ. ಕೃಷ್ಣಪ್ಪ ಹಾಗೂ ಮಾಜಿ ಸಚಿವ ಸೊಗಡು ಶಿವಣ್ಣ ಅವರ ನೇತೃತ್ವದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಹೊಸಹಳ್ಳಿ ಕ್ರಾಸ್ ಬಳಿ ದೊಡ್ಡ ಪೈಪ್ ಹೊತ್ತ ೨೫ ಲಾರಿಗಳು ಪ್ರತ್ಯಕ್ಷವಾಗಿರುವುದು ಕಂಡ ಸ್ಥಳೀಯ ರೈತರು, ಶಾಸಕರಿಗೆ ಮಾಹಿತಿ ತಿಳಿಸಿದರು. ಕೂಡಲೇ ನೂರಾರು ಮಂದಿ ಜಮಾಯಿಸಿ ಹೆಬ್ಬರು ರಸ್ತೆಯಲ್ಲಿ ಕುಳಿತು ಕೆಲ ಕಾಲ ಪ್ರತಿಭಟನೆ ನಡೆಸಿ, ಲಾರಿಗಳನ್ನು ತಡೆದು ಮರಳಿ ವಾಪಸ್ ಹೋಗಲು ತಾಕೀತು ಮಾಡಿದರು. ಪ್ರತಿಭಟನಾ ನಿರತರನ್ನು ಕುರಿತು ಶಾಸಕ ಎಂ.ಟಿ. ಕೃಷ್ಣಪ್ಪ ಮಾತನಾಡಿ, “ಯಾವುದೇ ರೀತಿ ರೈತರಿಗೆ ನೋಟಿಸ್ ನೀಡದೆ ಭೂ ವಶಕ್ಕೆ…
ರಾಯಚೂರು: ಅನಧಿಕೃತವಾಗಿ ನಡೆಸುತ್ತಿದ್ದ ಕೋಚಿಂಗ್ ಸೆಂಟರ್ ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದೆ. ಲಿಂಗಸೂಗೂರು ಎಸಿ ನೇತೃತ್ವದಲ್ಲಿ 10ಕ್ಕೂ ಹೆಚ್ಚು ಕೋಚಿಂಗ್ ಸೆಂಟರ್ ಗಳ ಮೇಲೆ ದಾಳಿ ನಡೆಸಿದ್ದಾರೆ. ಅನಧಿಕೃತವಾಗಿ ನಡೆಸುತ್ತಿರುವ ಎಲ್ಲಾ ಕೋಚಿಂಗ್ ಸೆಂಟರ್ ಗಳು ಬಂದ್ ಆಗಬೇಕು. ಗಡುವು ಮೀರಿದ ಬಳಿಕ ಕ್ಲಾಸ್ ನಡೆಸಿದ್ರೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ. ಎಲ್ಲಾ ಕೇಂದ್ರಗಳನ್ನು ಬಂದ್ ಮಾಡಿ ಮಕ್ಕಳನ್ನು ತಮ್ಮ ತಮ್ಮ ಪೋಷಕರ ಬಳಿ ಕಳುಹಿಸಬೇಕು. ಗಡುವು ಮೀರಿದ ಬಳಿಕ ಕ್ಲಾಸ್ ನಡೆಸಿದ್ರೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಲಿಂಗಸುಗೂರು ಸಹಾಯಕ ಆಯುಕ್ತ ಅವಿನಾಶ್ ಶಿಂಧೆ ಎಚ್ಚರಿಕೆ ನೀಡಿದ್ದಾರೆ. ಅನಧಿಕೃತ ಕೋಚಿಂಗ್ ಸೆಂಟರ್ ಗಳು ವಸತಿ ಸಹಿತವಾಗಿದ್ದರೆ, ಇನ್ನೂ ಕೆಲವು ವಸತಿ ರಹಿತವಾಗಿ ನಡೆಸುತ್ತಿದ್ದದ್ದು ಪತ್ತೆಯಾಗಿದೆ. ಹಾಗಾಗಿ ದಾಳಿ ನಡೆಸಿದ ಅಧಿಕಾರಿಗಳ ತಂಡ ಸೋಮವಾರ ಒಳಗೆ ಕೋಚಿಂಗ್ ಸೆಂಟರ್ ಗಳನ್ನು ಬಂದ್ ಮಾಡುವಂತೆ ಸೂಚಿಸಿದೆ. ಈ ಕ್ರಮಗಳನ್ನು ಶಿಕ್ಷಣ ಇಲಾಖೆ ರಾಜ್ಯದಾದ್ಯಂತ ನಡೆಸಲು…
ತುರುವೇಕೆರೆ: “ನಮ್ಮ ತಾಲೂಕಿನ ಜನಪ್ರಿಯ ಶಾಸಕರಾದ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್. ಶ್ರೀನಿವಾಸ್ ರವರು ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ನಮ್ಮ ಪಕ್ಷದ ಪರವಾಗಿ ಹಾಗೂ ವೈಯಕ್ತಿಕವಾಗಿ ಖಂಡಿಸುತ್ತೇನೆ. ನಾನು ನಿಮಗೆ ನೇರವಾಗಿ ಪ್ರಶ್ನೆ ಮಾಡುತ್ತೇನೆ. ನಮ್ಮ ಶಾಸಕರು ನಿಮ್ಮನ್ನು ಎಲ್ಲಿ ಕಳ್ಳ ಎಂದು ಹೇಳಿಕೆಯನ್ನು ನೀಡಿದ್ದಾರೆ? ತಮ್ಮಲ್ಲಿ ಆಡಿಯೋ ಅಥವಾ ವಿಡಿಯೋ ತುಣುಕುಗಳಿದ್ದರೆ ಬಹಿರಂಗಪಡಿಸಿ” ಎಂದು ತುರುವೇಕೆರೆ ತಾಲೂಕು ಜೆಡಿಎಸ್ ಪಕ್ಷದ ವಕ್ತಾರ ವೆಂಕಟಾಪುರ ಯೋಗೀಶ್ ತುರುವೇಕೆರೆ ಕ್ಷೇತ್ರದ ಶಾಸಕ ಶ್ರೀನಿವಾಸ ವಿರುದ್ಧ ಕಿಡಿಕಾರಿದರು. ಪಟ್ಟಣದ ದಬ್ಬೆಘಟ್ಟ ರಸ್ತೆಯಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಘೋಷ್ಠಿಯಲ್ಲಿ ಮಾತನಾಡಿ, “ತಾಕತ್ತಿದ್ದರೆ ಗುಬ್ಬಿಗೆ ಬನ್ನಿ ನಿಮ್ಮ ಕೊರಳಪಟ್ಟಿ ಹಿಡಿದು ಎಳೆದುಕೊಳ್ಳುತ್ತೇನೆ ಮತ್ತು ಕೃಷ್ಣಪ್ಪನವರ ಗಂಡಸ್ತನದ ಬಗ್ಗೆ ಮಾಧ್ಯಮದ ಪ್ರತಿನಿಧಿಗಳ ಮುಂದೆ ಪ್ರಶ್ನೆ ಮಾಡಿದ್ದೀರಿ. ಕೃಷ್ಣಪ್ಪನವರ ಗಂಡಸ್ತನ ಏನು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ. ನಿಮಗೆ ತಾಕತ್ತಿದ್ದರೆ ಕೃಷ್ಣಪ್ಪನವರ ಒಂದು ರೋಮ ಮುಟ್ಟಿ ಸಾಕು. ಮುಂದೆ ರಾಜ್ಯದಲ್ಲಿ ಯಾವ ರೀತಿಯ ಪರಿಣಾಮವಾಗುತ್ತದೆ ಎಂದು ನೋಡಿ. ವಾಸುರವರೆ ನೀವೇ…
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪೂರ್ವ ಮುಂಗಾರಿನ ಅಬ್ಬರ ಜೋರಾಗಿದೆ. ಕಳೆದ ಎಂಟತ್ತು ದಿನಗಳಿಂದ ಅಬ್ಬರಿಸುತ್ತಿರೋ ಮಳೆರಾಯ, ರಾಜ್ಯದಾದ್ಯಂತ ಮುಂದಿನ ನಾಲ್ಕೈದು ದಿನ ಮತ್ತಷ್ಟು ಅಬ್ಬರಿಸುವ ಸಾಧ್ಯತೆಯಿದೆ. ರಾಜ್ಯದ ಅನೇಕ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ ಕೂಡ ಇದ್ದು, ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಮೇಲ್ಮೈ ಸುಳಿಗಾಳಿ, ಟ್ರಫ್ ಹಾಗೂ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಇಂದಿನಿಂದ ಐದು ದಿನ ರಾಜ್ಯದ 17 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದಿನಿಂದ ಮೂರು ದಿನ ಕರಾವಳಿ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ 5 ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಉತ್ತರ ಕರ್ನಾಟಕದ ಭಾಗಗಳಿಗೆ ಸಾಧಾರಣ ಮಳೆ ಮುನ್ಸೂಚನೆ ನೀಡಲಾಗಿದೆ. ಜೊತೆಗೆ ಬಹುತೇಕ ಕಡೆ ಮಳೆ ಜೊತೆಗೆ ಬಿರುಗಾಳಿ ಸಹಿತ ಮಳೆ, ಗುಡುಗು ಮಿಂಚಿನ ಎಚ್ಚರಿಕೆ ಕೂಡ ನೀಡಲಾಗಿದೆ. ಬೆಂಗಳೂರಿನಲ್ಲೂ ಮಳೆಯ ಅಬ್ಬರ ಮುಂದುವರೆಯುವ ಸಾಧ್ಯತೆ ಇದ್ದು, ಮುಂದಿನ ಒಂದು ವಾರ ನಗರದ…
ಬೆಳಗಾವಿ: ಕಂಗ್ರಾಳಿ ಕೆಎಚ್ ಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದು, ಮಲತಾಯಿಯೇ ಕೊಲೆ ಮಾಡಿರುವ ಆರೋಪ ಕೇಳಿ ಬರುತ್ತಿದೆ. ಸಮೃದ್ಧಿ ರಾಯಣ್ಣ ನಾವಿ(4) ಮೃತ ಬಾಲಕಿಯಾಗಿದ್ದಾಳೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಮನೆಯಲ್ಲಿ ಆಟವಾಡುತ್ತಿದ್ದ ಮಗು ಏಕಾಏಕಿ ಸಾವನ್ನಪ್ಪಿದೆ. ಹುಷಾರಿಲ್ಲವೆಂದು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಬರುವಾಗಲೇ ದಾರಿ ಮಧ್ಯೆ ಮಗು ಕೊನೆಯುಸಿರೆಳೆದಿದೆ. ಮಗು ಸಾವಿನ ಸುದ್ದಿ ತಿಳಿದು ಅಜ್ಜ, ಅಜ್ಜಿ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಈಗ ಮಲತಾಯಿ ಸಪ್ನಾಳೇ 4 ವರ್ಷದ ಮೊಮ್ಮಗಳನ್ನು ಕೊಲೆ ಮಾಡಿದ್ದಾರೆ ಎಂದು ಬಾಲಕಿ ಅಜ್ಜ ಸುನೀಲ ಹಂಪನ್ನವರ ಗಂಭೀರ ಆರೋಪ ಮಾಡಿದ್ದಾರೆ. ಮೃತ ಬಾಲಕಿ ತಂದೆ ರಾಯಣ್ಣ ನಾವಿ ಛತ್ತೀಸ್ ಗಢದಲ್ಲಿ ಸಿಆರ್ ಪಿಎಫ್ ಯೋಧರಾಗಿ ಕೆಲಸ ಮಾಡುತ್ತಿದ್ದಾರೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296