Subscribe to Updates
Get the latest creative news from FooBar about art, design and business.
- ಎಸ್ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
- ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
- ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
- ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
- ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
- ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
- ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
- ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
Author: admin
ಪೊಲೀಸ್ ಠಾಣೆಗಳಿಗೆ ಬರುವ ಸಿವಿಲ್ ಪ್ರಕರಣಗಳಿಗೆ ಕ್ರಿಮಿನಲ್ ಬಣ್ಣ ಬಳಿದು ದುಡ್ಡು ವಸೂಲಿ, ಹಣಕಾಸಿನ ವ್ಯಾಪಾರಕ್ಕೆ ನಿಂತರೆ ಪೊಲೀಸರಿಗೆ ಕಠಿಣವಾದ ಪಾಠ ಕಲಿಸಬೇಕಾದೀತು. ಪೊಲೀಸ್ ಠಾಣೆಗಳು ವ್ಯಾಪಾರಿ ಕೇಂದ್ರವಲ್ಲ ಎಂದು ಕರ್ನಾಟಕ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಕರ್ನಾಟಕ ಹೈಕೋರ್ಟ್‌ನ ನ್ಯಾ. ಎಚ್.ಪಿ. ಸಂದೇಶ್ ಅವರಿದ್ದ ನ್ಯಾಯಪೀಠ ಬೆಂಗಳೂರಿನ ಚಂದ್ರಾ ಲೇಔಟ್ ಪೊಲೀಸರ ಮೂಲಕ ರಾಜ್ಯದ ಪೊಲೀಸರಿಗೆ ಈ ಎಚ್ಚರಿಕೆ ನೀಡಿದೆ. ಸಿವಿಲ್ ವ್ಯಾಜ್ಯವನ್ನು ಕ್ರಿಮಿನಲ್ ಪ್ರಕರಣವನ್ನಾಗಿ ಮಾರ್ಪಡಿಸಲು ಹೇಗೆ ಸಾಧ್ಯ? ಪೊಲೀಸ್ ಠಾಣೆಯಲ್ಲಿ ಸಿವಿಲ್ ವ್ಯಾಜ್ಯವನ್ನು ತೀರ್ಮಾನಿಸಲು ಪೊಲೀಸರಿಗೆ ಅಧಿಕಾರವನ್ನು ನೀಡಿದವರು ಯಾರು ಎಂದು ನ್ಯಾಯಪೀಠ ಪ್ರಶ್ನಿಸಿದೆ. ನಿವೇಶನವೊಂದರ ಖರೀದಿಗೆ ಸಂಬಂಧಿಸಿದ ವಿಚಾರದಲ್ಲಿ ಮಾರಾಟದಾರರಿಗೆ ಹಣ ಪಾವತಿಸಲು ಖರೀದಿದಾರರಿಗೆ ಒತ್ತಾಯಿಸಿದ ಹಾಗೂ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ನ್ಯಾಯಪೀಠ ಪೊಲೀಸರ ನಡವಳಿಕೆ ಬಗ್ಗೆ ಕಟುವಾಗಿ ಈ ಹೇಳಿಕೆ ನೀಡಿದೆ. ಪೊಲೀಸ್ ಠಾಣೆಗಳಲ್ಲಿ ಸಿವಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸುವ ಪೊಲೀಸರ ಕಾರ್ಯವೈಖರಿ ಮತ್ತೆ ಮತ್ತೆ ನಡೆಯುತ್ತಿದೆ. ಠಾಣೆಗಳನ್ನು ವ್ಯಾಪಾರಿ ಕೇಂದ್ರಗಳನ್ನಾಗಿ…
ಚೆನ್ನೈ: ಪಶ್ಚಿಮ ಘಟ್ಟಗಳಲ್ಲಿ ಹಠಾತ್ ಮಳೆಯಿಂದಾಗಿ ತಮಿಳುನಾಡಿನ ತೆಂಕಾಶಿಯಲ್ಲಿರುವ ಓಲ್ಡ್ ಕುರ್ಟಾಲಂ ಜಲಪಾತದಲ್ಲಿ ಹಠಾತ್ ಪ್ರವಾಹ ಸೃಷ್ಟಿಯಾಗಿದೆ. ಪರಿಣಾಮ ತನ್ನ ಸಂಬಂಧಿಕರೊಂದಿಗೆ ಸ್ನಾನಕ್ಕೆಂದು ತೆರಳಿದ್ದ 17 ವರ್ಷದ ಹುಡುಗ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಹುಡುಗನನ್ನು ಅಶ್ವಿನ್ ಎಂದು ಗುರುತಿಸಲಾಗಿದೆ. ಈತ ಪಳಯಂಕೊಟ್ಟೈನ NGO ಕಾಲೋನಿಯ 11 ನೇ ತರಗತಿ ವಿದ್ಯಾರ್ಥಿ. ವಿಷಯ ತಿಳಿದ ಕೂಡಲೇ ತಮಿಳುನಾಡು ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ತಂಡವು ಜಿಲ್ಲಾಧಿಕಾರಿ ಎ.ಕೆ. ಕಮಲ್ ಕಿಶೋರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಸುರೇಶ್ ಕುಮಾರ್ ಅವರೊಂದಿಗೆ ರಕ್ಷಣಾ ಕಾರ್ಯಾಚರಣೆಗೆ ದೌಡಾಯಿಸಿದ್ದಾರೆ. ಪ್ರವಾಸಿಗರ ಗುಂಪೊಂದು ಹಳೆಯ ಕುರ್ಟಾಲಂ ಜಲಪಾತದಲ್ಲಿ ಸ್ನಾನ ಮಾಡುತ್ತಿತ್ತು. ಈ ವೇಳೆ ಜಲಪಾತ ಹಠಾತ್ ಆಗಿ ತುಂಬಿ ಹರಿದಿದೆ. ಪರಿಣಾಮ ಅರಿವಿಲ್ಲದೆ ಸಿಕ್ಕಿಬಿದ್ದ ಪ್ರವಾಸಿಗರು ಸಹಾಯಕ್ಕಾಗಿ ಕಿರುಚಾಡಿದ್ದಾರೆ. ಜಲಪಾತದ ಬಳಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿಯು ಪ್ರವಾಸಿ ತಾಣದಲ್ಲಿದ್ದ ಅಂಗಡಿಯವರ ನೆರವಿನೊಂದಿಗೆ ರಕ್ಷಿಸಲು ಧಾವಿಸಿದರು. ಹಠಾತ್ ಪ್ರವಾಹವು ಎಷ್ಟು ತೀವ್ರವಾಗಿತ್ತು ಎಂದರೆ ಎಲ್ಲರೂ ತಮ್ಮ ತಮ್ಮ ರಕ್ಷಣೆಗೆಂದು ಓಡಿ…
ಸದಾಕಾಲ ಮೋದಿ ದ್ವೇಷದ ಕಾರಣದಿಂದಾಗಿಯೇ ಸೋಶಿಯಲ್ ಮೀಡಿಯಾದಲ್ಲಿ ಪರ ಹಾಗೂ ವಿರೋಧ ವ್ಯಕ್ತಿಗಳನ್ನು ಪಡೆದುಕೊಂಡಿರುವ ನಟ ಕಿಶೋರ್ ಮತ್ತೊಮ್ಮೆ ತಮ್ಮ ಪೋಸ್ಟ್ ಮೂಲಕ ಸುದ್ದಿಯಾಗಿದ್ದಾರೆ. ಬಹುಭಾಷಾ ನಟ ಕಿಶೋರ್ ಬಿಜೆಪಿ ಪಕ್ಷವನ್ನು, ಪ್ರಧಾನಿ ಮೋದಿಯನ್ನು ಪದೇ ಪದೆ ಟೀಕಿಸುತ್ತಲೇ ಇರುತ್ತಾರೆ. ಸದ್ಯ ಲೋಕಸಭೆ ಚುನಾವಣೆ ನಡೆಯುತ್ತಿದ್ದು, ವಿವಿಧ ಹಂತಗಳಲ್ಲಿ ಮತದಾನಕ್ಕೆ ವ್ಯವಸ್ಥೆ ಆಗಿದೆ. ಇಂತಹ ಸಮಯದಲ್ಲಿ ಮತ್ತೊಮ್ಮೆ ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ ಹೊರ ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭಾಷಣದ ವೀಡಿಯೋ ತುಣುಕುಗಳನ್ನು ಹಂಚಿಕೊಂಡು “ನಿಜ ನೀವು ಸಾರ್ವಜನಿಕ ಜೀವನಕ್ಕೇ ಅಲ್ಲ, ಮನುಷ್ಯನಾಗಿರಲೇ ಅಯೋಗ್ಯ” ಎಂದು ಕಿಶೋರ್ ಬರೆದುಕೊಂಡಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ಕಿಶೋರ್ ದ್ವೇಷ ಹೊರ ಹಾಕುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಸಾಕಷ್ಟು ಬಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಾರಿ ಕೊಂಚ ಖಾರವಾಗಿಯೇ ಕಾಮೆಂಟ್ ಮಾಡಿದ್ದಾರೆ. “ನಿಜ ನೀವು ಸಾರ್ವಜನಿಕ ಜೀವನಕ್ಕೇ ಅಲ್ಲ, ಮನುಷ್ಯನಾಗಿರಲೇ ಅಯೋಗ್ಯ. ನಿಮ್ಮಂಥವರ ಬಾಯಲ್ಲಿ ಮರ್ಯಾದಾ ಪುರುಷೋತ್ತಮ ರಾಮನ…
ಅಜ್ಜಿ ಮನೆಗೆ ರಜೆ ಕಳೆಯಲು ಬಂದಿದ್ದ ಬಾಲಕ ಟ್ರಾಕ್ಟರ್ ಗೆ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಈ ದುರ್ಘಟನೆಯು ಮೈಸೂರಿನ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ. ಭವಿಷ್ (8) ಟ್ರಾಕ್ಟರ್ ಗೆ ಸಿಲುಕಿ ಸಾವನ್ನಪ್ಪಿದ ಬಾಲಕನಾಗಿದ್ದಾನೆ. ಚಾಮರಾಜನಗರ ವಾಸಿ ತಾಯಿ ಮಮತಾ ತನ್ನ ಮಕ್ಕಳೊಂದಿಗೆ ದೇವರಸನಹಳ್ಳಿಗೆ ಬಂದಿದ್ದರು. ಮಕ್ಕಳಿಗೆ ರಜೆ ನಿಮಿತ್ತ ತನ್ನ ಮಕ್ಕಳ ಅಜ್ಜಿಮನೆಗೆ ಮಕ್ಕಳೂ ಖುಷಿಯಿಂದ ಬಂದಿದ್ದರು. ಮಕ್ಕಳಲ್ಲಿ ಭವಿಷ್ ಎಂಬ 8 ವರ್ಷದ ಹುಡುಗ ತನ್ನ ಸೋದರಮಾವನ ಜೊತೆ ಟ್ರಾಕ್ಟರ್ ಹತ್ತಿ ಜಮೀನಿಗೆ ತೆರಳಿದ್ದ. ಅಲ್ಲಿ ಜಮೀನಿನಲ್ಲಿ ಟ್ರ್ಯಾಕ್ಟರ್ ಹತ್ತಿ ಮಾವನ ಜತೆ ಉಳುಮೆ ಮಾಡುತ್ತಿದ್ದ. ಈ ಸಂದರ್ಭ ಭವಿಷ್ ಟ್ರಾಕ್ಟರ್ ನಿಂದ ಏಕಾಏಕಿ ಕೆಳಗೆ ಬಿದ್ದಿದ್ದಾನೆ. ಆತನ ಮೇಲೆ ರೊಟಾವೆಲ್ಟರ್ ಹರಿದು ಹೋಗಿದೆ. ಘಟನೆಯಲ್ಲಿ ಆತನ ದೇಹ ಛಿದ್ರ ಛಿದ್ರ ವಾಗಿದೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿರುವ ಮನೆಯೊಂದರಲ್ಲಿ ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಪ್ರಕಾಶ್(51) ಮತ್ತು ಪತ್ನಿ ಯಶೋಧ(48) ಮೃತರಾಗಿದ್ದಾರೆ. ಪತಿ ಪ್ರಕಾಶ್ ರಸ್ತೆ ಬದಿ ಕ್ಯಾಂಟೀನ್ ನಡೆಸುತ್ತಿದ್ದರೆ, ಪ್ರಕಾಶ್ ಪತ್ನಿ ಯಶೋಧ ಫ್ಲೋರ್ ಮಿಲ್ ನಡೆಸುತ್ತಿದ್ದರು. ಈವರೆಗೂ ಪತಿ ಹಾಗೂ ಪತ್ನಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಹುಬ್ಬಳ್ಳಿ: ಪರಿಣಾಮಕಾರಿಯಾದ ಸಾರಿಗೆ ಸೌಲಭ್ಯಗಳನ್ನು ಒದಗಿಸುವ ಮೂಲಕ ಮಕ್ಕಳಿಗೆ ಪೋಷಾಕಾಂಶವನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ನಡೆಯೊಂದರಲ್ಲಿ ಡಾ. ಅಗರ್ವಾಲ್ಸ್ ನೇತ್ರ ಹಾಸ್ಪಿಟಲ್ ತನ್ನ ಕಾಪೆರ್ಟ್ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ಹುಬ್ಬಳ್ಳಿಯಲ್ಲಿ ಅಕ್ಷಯ ಪಾತ್ರ ಫೌಂಡೇಶನ್‍ಗೆ ಆಹಾರ ಡೆಲಿವರಿ ವ್ಯಾನ್ ಅನ್ನು ಒದಗಿಸಿದೆ. ಹೊಸದಾಗಿ ದೇಣಿಗೆ ನೀಡಿದ ವಾಹನವು ಹುಬ್ಬಳ್ಳಿ ವ್ಯಾಪ್ತಿಯಲ್ಲಿನ 28 ಶಾಲೆಗಳಿಗೆ ಅಂದಾಜು 6,000 ಊಟವನ್ನು ಪ್ರತಿ ದಿನ ವಿತರಣೆ ಮಾಡಲು ಅನುಕೂಲ ಮಾಡಿಕೊಡಲಿದೆ. ಸಮುದಾಯದ ಕಲ್ಯಾಣಕ್ಕೆ ಆಸ್ಪತ್ರೆ ಎಷ್ಟು ಬದ್ಧವಾಗಿದೆ ಮತ್ತು ಶಾಲೆಯಲ್ಲಿ ಹಸಿವನ್ನು ನಿರ್ಮೂಲನೆ ಮಾಡಲು ಅಕ್ಷಯ ಪಾತ್ರದ ಧ್ಯೇಯಕ್ಕೆ ಎಷ್ಟು ಪೂರಕವಾಗಿದೆ ಎಂಬುದಕ್ಕೆ ಈ ಕೊಡುಗೆಯು ಸಾಕ್ಷಿಯಾಗಿದೆ. ಅಗರ್ವಾಲ್ಸ್ ಐ ಹಾಸ್ಪಿಟಲ್ ನ ಕ್ಲಿನಿಕಲ್ ಸೇವೆಗಳ ಮುಖ್ಯಸ್ಥ ಡಾ. ಶ್ರೀಕೃಷ್ಣ ನಾಡಗೌಡ ಹೇಳುವಂತೆ “ಈ ಉಪಕ್ರಮದ ಭಾಗವಾಗಲು ನಮಗೆ ಹೆಮ್ಮೆಯಾಗುತ್ತದೆ. ಇದು ಕಣ್ಣಿನ ಆರೋಗ್ಯವನ್ನು ಪ್ರೋತ್ಸಾಹಿಸಲು ತನ್ನ ಬದ್ಧತೆಯನ್ನು ಪ್ರತಿಫಲಿಸುವುದಷ್ಟೇ ಅಲ್ಲ, ಸಮುದಾಯದಲ್ಲಿ ಸಮಗ್ರ ಯೋಗಕ್ಷೇಮವನ್ನು ಕಲ್ಪಿಸುವುದಕ್ಕೂ ಇದು ಪೂರಕವಾಗಿದೆ. ಯುವಜನತೆಯಲ್ಲಿ ಅರ್ಥವತ್ತಾದ ಬದಲಾವಣೆಯನ್ನು ಉಂಟು…
ಕೊರಟಗೆರೆ: ತಾಲ್ಲೂಕಿನ ಚನ್ನಾರಾಯನದುರ್ಗ ಹೋಬಳಿಯ ದಾಸಲುಕುಂಟೆ ಗ್ರಾಮದಲ್ಲಿ ಜಾತ್ರಾ ಮಹೋತ್ಸವ ಮತ್ತು 16 ನೇ ವರ್ಷದ ಮಡಿಲಕ್ಕಿ ಕಾರ್ಯಕ್ರಮ ಜರುಗಿತು. ಜಿಲ್ಲೆಯ ಹೆಸರಾಂತ ಕಲಾವಿದ ನಾಗಭೂಷಣ್ ಮತ್ತು ತಂಡದವರಿಂದ ಭಕ್ತಿಗೀತೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಬೆಳ್ಳಾವಿ ಕಾರದ ಮಠದ ಶ್ರೀವೀರ ಬಸವ ಮಹಾ ಸ್ವಾಮೀಜಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸ ಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿ ಮತ್ತು ಬೆಳ್ಳಾವಿ ಕಾರದ ಮಠದ ಶ್ರೀ ವೀರ ಬಸವಲಿಂಗ ಸ್ವಾಮೀಜಿ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಹೆಚ್ಚು ಅಂಕ ಪಡೆದು ಗ್ರಾಮಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳಾದ ಚೈತ್ರ ಡಿ.ಆರ್., ಪ್ರಜ್ಞಾ ಡಿ.ಆರ್., ಚಂದ್ರು ಡಿ.ಎನ್., ಚಿತ್ರ, ತನುಶ್ರೀ, ಅನಿತಾ ರವರಿಗೆ ಶ್ರೀಗಳು ಸನ್ಮಾನಿಸಿ ಆಶೀರ್ವಾದ ನೀಡಿದರು. ನಂತರ ಮಾತನಾಡಿದ…
ದೇವಸ್ಥಾನದ ಅರ್ಚಕ ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ ನಡೆಸಿದ್ದಾಗಿ ಜನಪ್ರಿಯ ಟಿವಿ ನಿರೂಪಕಿಯೊಬ್ಬರು ಆರೋಪಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಚೆನ್ನೈಯ ಪ್ರಮುಖ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಬಲ್ ದೇಗುಲದ ಅರ್ಚಕ ಕಾರ್ತಿಕ್ ಮುನಿಸ್ವಾಮಿ ವಿರುದ್ಧ ಇದೀಗ ನಿರೂಪಕಿ ವಿರುಗಂಬಾಕ್ಕಂ ಮಹಿಳಾ ಠಾಣೆಗೆ ದೂರು ದಾಖಲಿಸಿದ್ದಾರೆ. ಸಾಲಿಗ್ರಾಮ ಮೂಲದ, ಖಾಸಗಿ ವಾಹಿನಿ ನಿರೂಪಕಿ ಕಾರ್ತಿಕ್ ಮುನಿಸ್ವಾಮಿ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 30 ವರ್ಷದ ನಿರೂಪಕಿ ಆಧ್ಯಾತ್ಮಿಕತೆ ಕಡೆಗೆ ಒಲವು ಹೊಂದಿರುವ ವ್ಯಕ್ತಿಯಾಗಿದ್ದು, ಆಗಾಗ ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುತ್ತಾರೆ. ಅದರಂತೆ ಚೆನ್ನೈಯ ಪರ್ಯಾಸ್ ನಲ್ಲಿರುವ ಈ ದೇವಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಈ ವೇಳೆ ಅರ್ಚಕ ಕಾರ್ತಿಕ್ ಮುನಿಸ್ವಾಮಿ ಜತೆಗೆ ಪರಿಚಯವಾಗಿತ್ತು. ಕ್ರಮೇಣ ಇಬ್ಬರೂ ಸ್ನೇಹಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರ ನಡುವೆ ಗೆಳೆತನ ಗಟ್ಟಿಯಾಗುತ್ತಿದ್ದಂತೆ ಕಾರ್ತಿಕ್ ಮುನಿಸ್ವಾಮಿ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮ, ವಿಶೇಷ ಪೂಜೆಗಳ ಬಗ್ಗೆ ನಿರೂಪಕಿಗೆ ಮಾಹಿತಿ ನೀಡುತ್ತಿದ್ದ. ವಾಟ್ಸಾಪ್ ಮೂಲಕ ಸಂದೇಶ ಕಳುಹಿಸುತ್ತಿದ್ದ.…
ತುಮಕೂರು: ನಾನು ಜೈಲಿನಿಂದ ಹೊರಗೆ ಬಂದ ನಂತರ ಸರಕಾರ ಪತನ ಆಗಲಿದೆ ಎಂದು ವಕೀಲ ದೇವರಾಜೇಗೌಡ ನೀಡಿರುವ ಹೇಳಿಕೆಗೆ ಪತ್ರಿಕ್ರಿಯಿಸಿರುವ ಗೃಹ ಸಚಿವ ಜಿ.ಪರಮೇಶ್ವರ್, ಹಾಗಾದರೆ ದೇವರಾಜೇಗೌಡ ಜೈಲಿನಲ್ಲಿಯೇ ಇರಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಎಸ್ ಐಟಿಯವರು ವಕೀಲ ದೇವರಾಜೇಗೌಡ ಹೇಳಿಕೆ ಬಗ್ಗೆ “ಅದರ ಸಾಧಕ ಬಾಧಕ ಅರಿತು ಕ್ರಮ ತೆಗೆದುಕೊಳ್ಳುತ್ತಾರೆ” ಎಂದರು. ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ಕೊಲೆಗಳು ಎಷ್ಟು ಆಗಿವೆ ಎಂದು ಹೇಳುವುದಕ್ಕಿಂತ, ಮೊದಲು ಬಿಜೆಪಿ ಆಡಳಿತದ ಅವಧಿಯಲ್ಲಿ ಎಷ್ಟು ಕೊಲೆಗಳು ಆಗಿವೆ ಎಂಬುದನ್ನು ನೆನಪಿಸಿಕೊಳ್ಳಲಿ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ. ಬಿಜೆಪಿಯವರಿಂದ ಹೇಳಿಸಿಕೊಂಡು ಕೇಳಿಸಿಕೊಂಡು ಕಾನೂನು ಸುವ್ಯವಸ್ಥೆ ಮಾಡುವ ಅಗತ್ಯವಿಲ್ಲ. ಇದಕ್ಕಾಗಿ ಏನು ಕ್ರಮ ಬೇಕಾದ್ರೂ ತೆಗೆದುಕೊಳ್ಳುತ್ತೇವೆ. ರಾಜ್ಯದಲ್ಲಿ ಬಿಜೆಪಿಯವರು ಶಾಂತಿ ಕದಡಲು ಯತ್ನಿಸಿದರೂ ಕೂಡ ಅದನ್ನು ನಿಯಂತ್ರಿಸುವ ಶಕ್ತಿ ಸರಕಾರಕ್ಕೆ ಇದೆ ಎಂದರು. ಒಂದೊಂದು ಘಟನೆಗೂ ಒಂದೊಂದು ಕಾರಣವಿದೆ. ರಾಜ್ಯದಲ್ಲಿ ಶಾಂತಿಯನ್ನು ಕಾಪಾಡುತ್ತೇವೆ. ಕಾನೂನು ಸುವ್ಯವಸ್ಥೆ ಹಾಳು ಮಾಡಲು ಯತ್ನಿಸಿದರೂ ನಾವು…
ಪಾವಗಡ: ತಾಲ್ಲೂಕಿನ ರೈತರಿಗೆ ಬರ ಪರಿಹಾರ ನೀಡುವಂತೆ ರೈತ ಸಂಘಗಳ ಮುಖಂಡರು, ತಹಸೀಲ್ದಾರ್ ಸಂತೋಷ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ತಾಲೂಕಿನಲ್ಲಿ ಕೆಲವರಿಗೆ ಮಾತ್ರ ಸಹಾಯ ಧನ ದೊರೆತಿದ್ದು, ಬರಗಾಲದ ನೆರವು ಸಿಗದವರು ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆಸರೆಯಾಗುತ್ತಿದ್ದಾರೆ ಎಂದರು. ರೈತರಿಗೆ ಅನ್ಯಾಯವಾಗದಂತೆ ಬರ ಪರಿಹಾರ ಸಿಗುವಂತೆ ಮಾಡುವುದಾಗಿ ರೈತ ಸಂಘಗಳ ಮುಖಂಡರಿಗೆ ತಹಸೀಲ್ದಾರ್ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ತಾಲ್ಲೂಕು ರೈತ ಅಧ್ಯಕ್ಷ ಪೂಜಾರಪ್ಪ, ಸದಸ್ಯರಾದ ಬಡಪ್ಪ, ಗುಡಿಪಲ್ಲಪ್ಪ, ನರಸಪ್ಪ, ಹನುಮಂತರಾಯಪ್ಪ, ತಿಪ್ಪೇಸ್ವಾಮಿ, ನಡಿಪಣ್ಣ, ಸಿದ್ದಪ್ಪ, ಚಿತ್ತಯ್ಯ ಇತರರು ಇದ್ದರು. ವರದಿ: ನಂದೀಶ್ ನಾಯ್ಕ ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296