Subscribe to Updates
Get the latest creative news from FooBar about art, design and business.
- ಎಸ್ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
- ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
- ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
- ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
- ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
- ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
- ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
- ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
Author: admin
ಗುಜರಾತ್: ಬೋರ್ಡ್ ಪರೀಕ್ಷೆಯಲ್ಲಿ ಟಾಪರ್ ಆಗಿದ್ದ ಗುಜರಾತ್ ನ ಮೊರ್ಬಿಯಾದ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ. ಗುಜರಾತ್ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಎಜುಕೇಶನ್ ಬೋರ್ಡ್ ಫಲಿತಾಂಶ ಮೇ 11 ರಂದು ಪ್ರಕಟವಾಗಿದೆ. ಹೀರ್ ಘೆಟಿಯಾ ಎಂಬಾಕೆ 10 ನೇ ತರಗತಿ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ್ದಾಳೆ. ಆಕೆಗೆ ಮೆದುಳಿನ ರಕ್ತಸ್ರಾವವಾಗಿದ್ದು, ಒಂದು ತಿಂಗಳ ಹಿಂದೆ ರಾಜ್ ಕೋಟ್ ನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಳು. ಶಸ್ತ್ರಚಿಕಿತ್ಸೆಯ ನಂತರ ಡಿಸ್ಚಾರ್ಜ್ ಕೂಡ ಆಗಿ ಮನೆಗೆ ತೆರಳಿದ್ದಳು. ಆದರೆ ವಾರದ ಹಿಂದೆ ಆಕೆಯಲ್ಲಿ ಮತ್ತೆ ಉಸಿರಾಟ ಮತ್ತು ಹೃದಯದ ತೊಂದರೆ ಕಾಣಿಸಿಕೊಂಡಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಯಿತು. ಎಂಆರ್‌ಐ ವರದಿಯಲ್ಲಿ 80% ರಿಂದ 90% ರಷ್ಟು ಆಕೆಯ ಮೆದುಳು ಕೆಲಸ ಮಾಡುವುದನ್ನು ನಿಲ್ಲಿಸಿದೆ ಎಂದು ತೋರಿಸಿದೆ. ಆಕೆಯ ಹೃದಯ ಕೆಲಸ ಮಾಡುವುದನ್ನು ನಿಲ್ಲಿಸಿದ ನಂತರ ಹೀರ್ ಬುಧವಾರ ನಿಧನರಾದಳು. ಬಳಿಕ ಆಕೆಯ ಕಣ್ಣುಗಳು ಮತ್ತು ಆಕೆಯ ದೇಹವನ್ನು ಪೋಷಕರು…
ಬಯಲು ಶೌಚಕ್ಕೆ ತೆರಳಿದ್ದ ಬಾಲಕನನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪದ ನೆರಿಗಾ ಗ್ರಾಮದಲ್ಲಿ ನಡೆದಿದೆ. ಬಯಲು ಶೌಚಾಲಯಕ್ಕೆ ಹೋದ ಬಾಲಕ ಮೃತದೇಹವಾಗಿ ಪತ್ತೆಯಾಗಿದ್ದಾನೆ. ಕಳೆದ ಮೇ 15ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಾಣೇಶ್(15) ಕೊಲೆಯಾಗಿ ಪ್ರಾಣವನ್ನು ಕಳೆದುಕೊಂಡವನು. ಬಯಲು ಶೌಚಾಲಯಕ್ಕೆಂದು ಹೋದವನನ್ನು ಯಾರೋ ಹಂತಕರು ದೊಣ್ಣೆಯಿಂದ ಹೊಡೆದು ಕೊಂದಿದ್ದಾರೆ. ತಲೆ ಹಾಗೂ ಹೊಟ್ಟೆ ಭಾಗಕ್ಕೆ ರಭಸವಾಗಿ ಹೊಡೆದಿರುವುದರಿಂದ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಮಗ ಕಾಣದೆ ಇದ್ದಾಗ ಹುಡುಕಾಟ ನಡೆಸಿದಾಗ ಆತನ ಮೃತದೇಹವು ಪತ್ತೆಯಾಗಿದೆ ಎನ್ನಲಾಗಿದೆ. ಕೂಡಲೇ ಪೋಷಕರು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ. ಪ್ರಾಣೇಶ್ ತಂದೆ, ತಾಯಿ ಕಳೆದ ಮೂರು ತಿಂಗಳ ಹಿಂದೆ ಗಾರೆ ಕೆಲಸಕ್ಕೆಂದು ನೆರಿಗಾ ಗ್ರಾಮಕ್ಕೆ ಬಂದು ನೆಲೆಸಿದ್ದರು ಎನ್ನಲಾಗಿದೆ. ಮೂಲತಃ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಗೆ ಸೇರಿದ ಮಂತ್ರಾಲಯದ ಪ್ರಾಣೇಶ್, ಬೇಸಿಗೆ ರಜೆ ಹಿನ್ನೆಲೆಯಲ್ಲಿ ತಂದೆ-…
ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿ ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವ ಹೋರಿಯ ಪತ್ತೆಗಾಗಿ ಬಜರಂಗದಳದ ಕಾರ್ಯಕರ್ತರು ಹಾಗೂ ಭಕ್ತರು ಕಾರಣಿಕ ಶಕ್ತಿ ಬಲ್ನಾಡಿನ ಉಳ್ಳಾಲ್ತಿ ದೈವದ ಮೊರೆ ಹೋಗಿದ್ದಾರೆ. ದೇವಸ್ಥಾನದ ಗದ್ದೆಯಲ್ಲಿ ತಿರುಗಾಡುತ್ತಿದ್ದ ಎರಡು ಹೋರಿಗಳು ಇದ್ದಕ್ಕಿದ್ದ ಹಾಗೆ ನಾಪತ್ತೆಯಾಗಿದ್ದವು. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಬಜರಂಗದಳದವರು ಪ್ರಕರಣ ದಾಖಲಿಸಿದ್ದರು. ಇದೀಗ ಬಜರಂಗದಳ ಹಾಗೂ ಭಕ್ತರು ಹೋರಿಗಾಗಿ ದೈವದ ಮೊರೆ ಹೋಗಿದೆ. ಅಲ್ಲದೇ ಪ್ರಶ್ನಾಚಿಂತನೆಯಲ್ಲೂ ಹೋರಿಯ ಕುರಿತು ಕೇಳಿದ್ದಾರೆ. ಅದರಲ್ಲಿ ಕಂಡುಬಂದಂತೆ ಹೋರಿ ಅಡ್ಯನಡ್ಕ ಸಮೀಪ ಇದೆ ಎಂದು ತಿಳಿದು ಬಂದಿದೆ. ಜ್ಯೋತಿಷ್ಯ ಚಿಂತನೆಯಲ್ಲಿ ಹೋರಿ ಜೀವಂತವಾಗಿರುವ ಕುರಿತು ಮಾಹಿತಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಬಜರಂಗದಳ ಕಾರ್ಯಕರ್ತರು ಹಾಗೂ ಭಕ್ತರು ಬಲ್ನಾಡು ಉಳ್ಳಾಲ್ತಿ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಹೋರಿ ಕಳ್ಳತನಗೈದವರಿಗೆ ತಕ್ಕ ಶಿಕ್ಷೆ ದೈವದ ಮೂಲಕ ಸಿಗುವಂತೆ ಪ್ರಾರ್ಥಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಬೆಂಗಳೂರು: ಇಲ್ಲಿ ನೀವು ಓಡಾಡ ಬೇಕಂದ್ರೆ ನಿಮ್ಮ ಗುಂಡಿಗೆ ಗಟ್ಟಿಯಿರಬೇಕು. ಬೆಂಗಳೂರಿನ ರಸ್ತೆಗಳೇ ಹಾಗೆ ರಸ್ತೆಗೂ ಗುಂಡಿಗಳಿಗೂ ಅವಿನಾಭಾವ ಸಂಬಂಧ. ಮಳೆ ಬಂದರೆ ಸಾಕು, ರಸ್ತೆ ಯಾವುದು? ಗುಂಡಿ ಯಾವುದು ಅನ್ನೋದೇ ಗೊತ್ತಾಗಲ್ಲ. ಇನ್ನು ಬ್ರಾಂಡ್ ಬೆಂಗಳೂರು ಕನಸು ಕಂಡಿರುವ ಡಿಕೆಶಿಯ ಕನಸು ನನಸಾಗೋ ಲಕ್ಷಣಗಳು ಕಾಣುತ್ತಿಲ್ಲ. ಬಿಬಿಎಂಪಿ ಅಂತೂ ನಮಗೂ ಇದಕ್ಕೂ ಸಂಬಂಧವೇ ಇಲ್ಲ ಎನ್ನುವಂತೆ ಗಪ್ ಚುಪ್ ಆಗಿದೆ. ಎಸ್ ಸಿಲಿಕಾನ್ ಸಿಟಿಯಲ್ಲಿ ರಸ್ತೆಗಳು ಕಿತ್ತುಹೋಗಿ, ವಾಹನ ಸವಾರರಿಗೇ ಸವಾಲು ಹಾಕುತ್ತಿದೆ. ಅದೆಷ್ಟೋ ಮಂದಿ ರಸ್ತೆ ಗುಂಡಿಗಳಲ್ಲಿ ಬಿದ್ದು ಅಪಘಾತವಾಗಿರೊ ಉದಾಹರಣೆಗಳಿವೆ. ಇನ್ನು ಬೆಂಗಳೂರಿನಲ್ಲಿ ಮಳೆ ಬಂದರೆ ಬದುಕು ಚಿಂದಿ ಚಿತ್ರಾನ್ನವಾಗುವುದರಲ್ಲಿ ಎರಡು ಮಾತಿಲ್ಲ. ಒಂದು ಕಡೆ ಮಳೆ, ಮತ್ತೊಂದು ಕಡೆ ಗುಂಡಿಗಳಿಂದ ವಾಹನ ಸವಾರರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡ್ತಾರೆ. ಇನ್ನು ಬ್ರಾಂಡ್ ಬೆಂಗಳೂರು ಅಡಿಯಲ್ಲಿ ಗುಂಡಿಗಳನ್ನು ಮುಚ್ಚುವ ಕಾರ್ಯದಲ್ಲಿ ಬಿಬಿಎಂಪಿ ಕಂಪ್ಲೀಟ್ ಫೇಲ್ ಆಗಿದೆ. ಕಳೆದ ಮೂರ್ನಾಲ್ಕು ದಿನ ಮಳೆ ಸುರಿಯುತ್ತಿದ್ದಂತೆ ರಾಜಧಾನಿ ಬೆಂಗಳೂರಿನ…
ಉತ್ತರಾಖಂಡದಲ್ಲಿ ಸಾವಿರಾರು ಹೆಕ್ಟೇರ್ ಅರಣ್ಯ ಪ್ರದೇಶ ಕಾಡ್ಗಿಚ್ಚಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ಉತ್ತರಾಖಂಡ ರಾಜ್ಯ ಸರ್ಕಾರಗಳನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಕಾಡ್ಗಿಚ್ಚನ್ನು ತಡೆಗೆ ಅಗತ್ಯವಿರುವ ಅನುದಾನವನ್ನು ಯಾಕೆ ಬಿಡುಗಡೆ ಮಾಡಿಲ್ಲ? ಅರಣ್ಯ ಸಿಬ್ಬಂದಿಯನ್ನು ಮತಗಟ್ಟೆ ಕರ್ತವ್ಯಕ್ಕೆ ನಿಯೋಜಿಸಿದ್ದು ಯಾಕೆ ಎಂದು ಖಾರವಾಗಿ ಪ್ರಶ್ನಿಸಿದೆ. ಈ ಬಗ್ಗೆ ಪರಿಸರವಾದಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ ಸರ್ಕಾರಗಳ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿತು. ನವೆಂಬರ್ ನಿಂದ ಈವರೆಗೂ ಸಾವಿರಕ್ಕೂ ಅಧಿಕ ಬಾರಿ ರಾಜ್ಯದ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು. ಈವರೆಗೂ 1,100 ಹೆಕ್ಟೇರ್‌ಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಈ ಕಾಡ್ಗಿಚ್ಚು ತಡೆಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ₹ 10 ಕೋಟಿ ರೂ ಬೇಡಿಕೆ ಸಲ್ಲಿಸಿದ್ದರೂ ನೀಡಿದ್ದು ಕೇವಲ ₹ 3.15 ಕೋಟಿ ನೀಡಲಾಗಿದೆ ಎಂಬ ವರದಿಯನ್ನು ಕೋರ್ಟ್ ಮುಂದಿಡಲಾಗಿತ್ತು. ಏಪ್ರಿಲ್ 19ರಂದು ಉತ್ತರಾಖಂಡದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ…
ನವದೆಹಲಿ: ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ ನಡೆಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯಲ್ಲಿ ಚುನಾವಣಾ ಸಂಭ್ರಮದ ನಡೆಯುತ್ತಿರುವ ನಡುವೆ, ದೆಹಲಿ ಈಶಾನ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ್ದಾನೆ. ಈ ಘಟನೆ ನಡೆದಾಗ ಕನ್ಹಯ್ಯ ಅವರು ಲೋಕಸಭೆ ಚುನಾವಣೆಯ ಪ್ರಚಾರ ನಡೆಸುತ್ತಿದ್ದರು. ಮಾಲೆ ಹಾಕುವ ನೆಪದಲ್ಲಿ ಈ ವ್ಯಕ್ತಿ ಕನ್ಹಯ್ಯನ ಬಳಿಗೆ ಬಂದು ಕಪಾಳಮೋಕ್ಷ ಮಾಡಿದ್ದಾನೆ. ವಿಶೇಷವೆಂದರೆ ಈ ವ್ಯಕ್ತಿ ಅಪರಾಧ ಮಾಡುವ ಮುನ್ನ ವೀಡಿಯೋವನ್ನೂ ಮಾಡಿಕೊಂಡಿದ್ದಾನೆ. ಮೊಬೈಲ್ ಕ್ಯಾಮರಾ ಹಿಡಿದುಕೊಂಡಿದ್ದ ಆತನ ಸಹಚರ ಮೊದಲು ‘ಕನ್ಹಯ್ಯಾಗೆ ಈಗ ಹೊಡೆಯಲಿದ್ದಾನೆ’ ಎನ್ನುತ್ತಾನೆ. ಕನ್ಹಯ್ಯಾ ಕುಮಾರ್ ಗೆ ಮಾಲೆ ಹಾಕಿದ ಬಳಿಕ ಆರೋಪಿಯು ಕಪಾಳಮೋಕ್ಷ ಮಾಡಿದ್ದು, ಬಳಿಕ ಘಟನಾ ಸ್ಥಳದಲ್ಲಿ ಕೋಲಾಹಲ ಎದ್ದಿರುವುದನ್ನು ಕಾಣಬಹುದು. ಕನ್ಹಯ್ಯಾಗೆ ಕಪಾಳಮೋಕ್ಷ ಮಾಡಿದ ವ್ಯಕ್ತಿ ಯಾರು ಎಂಬುದು ಇನ್ನೂ ತಿಳಿದುಬಂದಿಲ್ಲ. ದೆಹಲಿ ಪೊಲೀಸರ ಪ್ರಕಾರ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕನ್ಹಯ್ಯಾ ಕುಮಾರ್‌ಗೆ ಕಪಾಳಮೋಕ್ಷ ಮಾಡಿದ ಇಬ್ಬರೂ ಆರೋಪಿಗಳು…
ರಾಜಧಾನಿಯ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ. ಮಂಜುನಾಥ ನಗರದ ಸಂಧ್ಯಾ ಮೃತ ಮಹಿಳೆಯಾಗಿದ್ದಾರೆ. ನೆನ್ನೆ ರಾತ್ರಿ ಘಟನೆ ನಡೆದಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ ಮೃತದೇಹ ಪತ್ತೆಯಾಗಿದೆ. ಇವರಿಗೆ ಮದುವೆಯಾಗಿ 5 ವರ್ಷ ಆಗಿತ್ತು. ನಾಲ್ಕು ವರ್ಷದ ಗಂಡು ಮಗುವೂ ಇತ್ತು. ಅಳಿಯ ಜಯಪ್ರಕಾಶ್ ಮೈತುಂಬಾ ಸಾಲ ಮಾಡಿ ಅದನ್ನು ತೀರಿಸಲು ಕಿರುಕುಳ ನೀಡುತ್ತಿದ್ದ. ನನ್ನ ಮಗಳಿಗೆ ಈ ವಿಚಾರವಾಗಿ ಕಿರುಕುಳ ನೀಡುತ್ತಿದ್ದ ಎಂದು ಸಂಧ್ಯಾ ತಂದೆ ಆಪಾದಿಸಿದ್ದಾರೆ. ಸದ್ಯ ಬಸವೇಶ್ವರನಗರ ಪೊಲೀಸ್ ಠಾಣಾ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಸಾರ್ವಜನಿಕರ ಅನುಕೂಲಕ್ಕಾಗಿ ನಗರ ಬಸ್ ನಿಲ್ದಾಣದಿಂದ ಗುಬ್ಬಿ ಗೇಟ್ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ಮೂಲಕ ಶಿರಾಗೇಟ್‌ವರೆಗೂ ಪ್ರತಿ 20 ನಿಮಿಷಕ್ಕೊಮ್ಮೆ ನಗರ ಸಾರಿಗೆ ಬಸ್ ಗಳ ವ್ಯವಸ್ಥೆಯನ್ನು ಇಂದಿನಿಂದ ಕಲ್ಪಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಸಂಜೆ ನಡೆದ ತುಮಕೂರು ನಗರದ ರಾಷ್ಟ್ರೀಯ ಹೆದ್ದಾರಿ–4 ರಲ್ಲಿ ಅಮಾನಿಕೆರೆ ಕೋಡಿ ಹಳ್ಳಕ್ಕೆ ಸೇತುವೆ ನಿರ್ಮಾಣ ಕಾಮಗಾರಿಯ ಹಿನ್ನೆಲೆಯಲ್ಲಿ ವಾಹನಗಳ ಸುಗಮ ಸಂಚಾರ ಹಾಗೂ ಕಾಮಗಾರಿ ಪ್ರಗತಿ ಕುರಿತ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಪ್ರತಿ ದಿನ ದುಡಿಯುವ ಕಾರ್ಮಿಕ ವರ್ಗದವರು ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಮತ್ತು ತುಮಕೂರು ನಗರದ ಬಸ್ ನಿಲ್ದಾಣದಿಂದ ಗುಬ್ಬಿಗೇಟ್ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ಮೂಲಕ ಶಿರಾಗೇಟ್‌ವರೆಗೂ ಪ್ರತಿ ೨೦ ನಿಮಿಷಕ್ಕೊಮ್ಮೆ ಪ್ರತಿ ದಿನ ಬೆಳಿಗ್ಗೆ 7 ರಿಂದ ನಗರ ಸಾರಿಗೆ ಮಿನಿ ಬಸ್ ಗಳ ವ್ಯವಸ್ಥೆಯನ್ನು ಇಂದಿನಿಂದ ಕಲ್ಪಿಸಿ ಈ ಬಗ್ಗೆ…
ಬೆಂಗಳೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಬೆಂಗಳೂರು ಜಂಟಿಯಾಗಿ ಜೂನ್ 8, 2024 ರಂದು ವಿಶ್ವ ಪರಿಸರ ದಿನವನ್ನು ಆಯೋಜಿಸುತ್ತಿದ್ದು, ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸೃಜನಶೀಲತೆ, ನಾವೀನ್ಯತೆ ಮತ್ತು ವಿಶ್ವ ಪರಿಸರ ದಿನಾಚರಣೆಯಲ್ಲಿ ವಿದ್ಯಾರ್ಥಿಗಳ ಸಕ್ರಿಯತೆಯನ್ನು ಉತ್ತೇಜಿಸಲು ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಇದು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಮತ್ತು ಮಣ್ಣು ಮತ್ತು ಭೂಮಿಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳ ಬಗ್ಗೆ ತಮ್ಮ ಕೊಡುಗೆ ನೀಡಲು ಅವಕಾಶವನ್ನು ಒದಗಿಸುತ್ತದೆ. ಕರ್ನಾಟಕ ರಾಜ್ಯದ ಯಾವುದೇ ಮಂಡಳಿಯಲ್ಲಿ ಪ್ರಸ್ತುತ ದಾಖಲಾದ ಪ್ರೌಢಶಾಲಾ ವಿದ್ಯಾರ್ಥಿಗಳು ಈ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಪ್ರಬಂಧಗಳನ್ನು ಕನ್ನಡ ಅಥವಾ ಇಂಗ್ಲಿಷ್ ನಲ್ಲಿ ಸಲ್ಲಿಸಬಹುದು. ಪ್ರತಿ ಭಾಷೆಗೆ ಒಬ್ಬ ಸ್ಪರ್ಧಿಗೆ ಕೇವಲ ಒಂದು ಪ್ರಬಂಧವನ್ನು ಮಾತ್ರ ಸಲ್ಲಿಸಲು ಅವಕಾಶವಿದೆ. ಯಾವುದೇ ಸ್ಪರ್ಧಿಯು ಒಂದು ನಿರ್ದಿಷ್ಟ ಭಾಷೆಯಲ್ಲಿ ಒಂದಕ್ಕಿಂತ ಹೆಚ್ಚು ಪ್ರಬಂಧಗಳನ್ನು ಸಲ್ಲಿಸಿರುವುದು ಕಂಡುಬಂದರೆ, ಅವರು ಸಲ್ಲಿಸಿದ ಎಲ್ಲಾ ಪ್ರಬಂಧಗಳನ್ನು ಅಮಾನ್ಯವೆಂದು ಪರಿಗಣಿಸಲಾಗುತ್ತದೆ. ಪ್ರಬಂಧದ ಕೊನೆಯಲ್ಲಿ ಹೆಸರು,…
ಐಸ್ ಕ್ರೀಂ ಮ್ಯಾನ್ ಆಫ್ ಇಂಡಿಯಾ ಎಂದೇ ಪ್ರಖ್ಯಾತರಾದ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್(70) ಅವರು ಮೇ 17ರಂದು ಮುಂಬಯಿಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಐಸ್ ಕ್ರೀಂ ಎನ್ನುವುದು ಒಂದು ವರ್ಗಕ್ಕೆ ಮಾತ್ರ ಸೀಮಿತವಾಗಿತ್ತು. ರಘುನಂದನ್ ಕಾಮತ್ ಅವರು ಐಸ್‌ಕ್ರೀಂ ಅನ್ನು ಜಯಪ್ರಿಯಗೊಳಿಸಿ ಎಲ್ಲರಿಗೂ ಲಭ್ಯವಾಗುವಂತೆ ಮತ್ತು ಅದು ಸಮಾರಂಭಗಳಲ್ಲಿ ಒಂದು ಅಗತ್ಯದ ಪದಾರ್ಥ ಎಂಬಷ್ಟರ ಮಟ್ಟಿಗೆ ಬೆಳೆಸಿದ ಕೀರ್ತಿಗೆ ಪಾತ್ರರಾದವರು. ರಘುನಂದನ್ ಅವರು 1954ರಲ್ಲಿ ಮೂಲ್ಕಿಯಲ್ಲಿ ಬಡ ಕುಟಂಬವೊಂದರಲ್ಲಿ ಜನಿಸಿದ್ದರು. ಕಾಮತ್ ಅವರ ತಂದೆ ಹಣ್ಣಿನ ವ್ಯಾಪಾರಿಯಾಗಿದ್ದರು. ಕಾಮತ್ ಅವರು ತಮ್ಮ 15ನೇ ವಯಸ್ಸಿನಲ್ಲಿ ಅಣ್ಣನ ಹೊಟೇಲ್‌ಗೆ ಕೆಲಸಕ್ಕೆಂದು ಮುಂಬಯಿಗೆ ತೆರಳಿದ್ದರು. ಅಲ್ಲಿ ಹೊಟೇಲ್ ಉದ್ಯಮ ಆರಂಭಿಸಿ ಹಣ್ಣುಗಳಿಂದಲೇ ಐಸ್ ಕ್ರೀಂ ತಯಾರಿಸಿ ಜನಪ್ರಿಯರಾದರು. ಮುಂಬಯಿಯಲ್ಲಿ 1984ರಲ್ಲಿ ನ್ಯಾಚುರಲ್ಸ್ ಐಸ್ ಕ್ರೀಂ ಆರಂಭಿಸಿದ್ದರು. ಅದು ದೇಶಾದ್ಯಂತ ಜನಪ್ರಿಯವಾಗಿ ದೊಡ್ಡ ಉದ್ಯಮವಾಗಿ ಬೆಳೆದಿದೆ. 40ಕ್ಕೂ ಅಧಿಕ ನಗರಗಳಲ್ಲಿ 140ಕ್ಕೂ ಹೆಚ್ಚು ಕಡೆಗಳಲ್ಲಿ ನ್ಯಾಚುರಲ್…