Subscribe to Updates
Get the latest creative news from FooBar about art, design and business.
- ಡಿ.29ರಿಂದ ತುಮಕೂರು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ: ಏನೇನು ಕಾರ್ಯಕ್ರಮಗಳು ಇರಲಿವೆ?
- ತುರುವೇಕೆರೆ: ಡಿ.30: ಸಂಪಿಗೆಯಲ್ಲಿ ವೈಕುಂಠ ಏಕಾದಶಿ ಮಹೋತ್ಸವ
- ಕುಣಿಗಲ್: ಡಿ.29ರಿಂದ ವೆಂಕಟರಮಣ ಸ್ವಾಮಿ ಪೂಜೋತ್ಸವ
- ತುರುವೇಕೆರೆ: ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ತೀರ್ಮಾನ
- ವಿದ್ಯುತ್ ಕಂಬಗಳಿಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ
- ಬಡ ರೈತರಿಗೆ ಸರಕಾರ ಹಕ್ಕು ನೀಡಿ ಬದುಕಲು ಬಿಡಬೇಕು: ಬಸವರಾಜಪ್ಪ
- ಸರಗೂರು: SSLC ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ತರಬೇತಿ
- ರೈತರ ಜಮೀನಿಗೆ ನುಗ್ಗಿದ ಕಾಡಾನೆಗಳು: ಲಕ್ಷಾಂತರ ಬೆಲೆಬಾಳುವ ರಾಗಿ, ಜೋಳ ಆನೆಗೆ ಆಹಾರ: ರೈತರು ಕಂಗಾಲು
Author: admin
ಬೆಂಗಳೂರು: ಕೆ.ಸಿ.ವ್ಯಾಲಿ 2ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ನಿಂದ ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿ ನಿವಾಸದಲ್ಲಿ ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಸಿಎಂ, ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. 250ಕ್ಕೂ ಹೆಚ್ಚು ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪ್ರತಿನಿತ್ಯ ಹರಿಸಲಾಗುತ್ತಿದೆ ಎಂದರು. ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆಯಡಿ ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸಲಾಗುವುದು. ಮೊದಲನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ ಚಿಕ್ಕಬಳ್ಳಾಪುರ ಕೆರೆಗಳನ್ನು ಯಶಸ್ವಿಯಾಗಿ ತುಂಬಿಸಲಾಗಿದೆ. ಈ ನೀರನ್ನು ಕುಡಿಯಲು ಬಳಸುವುದಿಲ್ಲ. ಕೆರೆ ತುಂಬಿಸಿದ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಉತ್ತಮಗೊಂಡಿದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಬೆಂಗಳೂರು: ಸಾಮಾಜಿಕ ನ್ಯಾಯದ ಬಗ್ಗೆ ಬುರುಡೆ ಭಾಷಣ ಮಾಡಿ ಬುದ್ಧ, ಬಸವ, ಅಂಬೇಡ್ಕರರಿಗೆ ಅವಮಾನ ಮಾಡಬೇಡಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ತಮ ಅಧಿಕೃತ ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ದಲಿತರು, ಹಿಂದುಳಿದ ವರ್ಗಗಳ ಜನರನ್ನು ವೋಟ್ ಬ್ಯಾಂಕ್ ಮಾಡಿಕೊಂಡು ಮೋಸ ಮಾಡಬೇಡಿ ಎಂದು ಕಿಡಿಕಾರಿದ್ದಾರೆ. ಒಂದು ಕಡೆ ಹಿಂದುಳಿದ ವರ್ಗಗಳ ವಿವಿಧ ಅಭಿವೃದ್ಧಿ ನಿಗಮಗಳಿಗೆ ನೂರಾರು ಕೋಟಿ ಅನುದಾನ ಕಡಿತ ಮಾಡಿದ್ದೀರಿ, ಮತ್ತೊಂದು ಕಡೆ ಮೀಸಲಿಟ್ಟಿರುವ ಹಣವನ್ನು ಸರಿಯಾಗಿ ಖರ್ಚು ಮಾಡಿಲ್ಲ. ಇದೇನಾ ಸ್ವಾಮಿ ನಿಮ ಸಾಮಾಜಿಕ ನ್ಯಾಯ? ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ. ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ವಿನಿಯೋಗವಾಗಬೇಕಾಗಿದ್ದ ವಾಲೀಕಿ ಅಭಿವೃದ್ಧಿ ನಿಗಮದ 187 ಕೋಟಿ ಹಣವನ್ನ ಲಪಟಾಯಿಸಿದ್ದಾಯ್ತು. ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣದಲ್ಲಿ ಪ್ರತಿ ವರ್ಷ ಬರೋಬ್ಬರಿ 15 ಸಾವಿರ ಕೋಟಿ ರೂಪಾಯಿ ಹಣವನ್ನ ಬೇರೆಡೆ ವರ್ಗಾಯಿಸಿ ದುರ್ಬಳಕೆ ಮಾಡಿದ್ದಾಯ್ತು.…
ಪಾವಗಡ: 2025-26 ನೇ ಸಾಲಿನ ನಿಡಗಲ್ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಸಹನಾ ಹಿರಿಯ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಲ್ಲಾ ವಿಭಾಗಗಳಿಂದ ಉತ್ತಮ ಸಾಧನೆ ಮಾಡಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಾಥಮಿಕ ಶಾಲಾ ವಿಭಾಗ: 4×100 ರಿಲೇ ಪ್ರಥಮ ವಾಸುದೇವ್, ದರ್ಶನ್, ರತನ್ ಗೌಡ . ದಿಗಂತ್ ಗೌಡ, ರತಿಷ್ ಗೌಡ, 200 ಮೀಟರ್ ಪ್ರಥಮ : ರತನ್‌ಗೌಡ, ಗುಂಡು ಎಸೆತ ಪ್ರಥಮ ವಾಸುದೇವ್,ಚಕ್ರ ಎಸೆತ ಪ್ರಥಮ: ವಾಸುದೇವ್,100 ಮೀಟರ್ ಪ್ರಥಮ:ವಾಸುದೇವ್,ಉದ್ದ ಜಿಗಿತ ಪ್ರಥಮ: ದರ್ಶನ್,ಟೇಬಲ್ ಟೆನ್ನಿಸ್ ಪ್ರಥಮ: ಜೀವನ್ ಯಾದವ್, ಶಶಾಂಕ್ ಗೌಡ, ಕುಶಲ್‌ಗೌಡ ,ಅಜಯ್ ಕುಮಾರ್, ಜೀವನ್.ಎನ್,ಯೋಗಾಸನ ಪ್ರಥಮ : ನವನೀತ್, ವಿನಯ್, ರವಿತೇಜ, ನಿತಿನ್, ಯಶ್ವಂತ್, ಅಕ್ಷಯ್. ನಂದನ್, ಚೆಸ್ ಪ್ರಥಮ: ಉದಯ್,ಹರ್ಷಿತ್ ರೆಡ್ಡಿ, ರೇವಂತ್ ರೆಡ್ಡಿ, ಅಬಯ್ ಸ್ಕಂದ, ಜನಾರ್ದನ ರೆಡಿ, ಥೋ ಬಾಲ್ ದ್ವಿತೀಯ : ಜೀವನ್, ಗಗನ್‌ದೀಪ್, ಶಶಿಧರ್, ಅಜಯ್ ಕುಮಾರ್, ಜನಾರ್ಧನ್ ರೆಡ್ಡಿ, ಯಶಸ್, ಯಶಸ್ ಗೌಡ, ಪರ್ಥಾಸಾರಥಿ, ಪುನಿತ್,…
ಬೆಂಗಳೂರು: ಲೇಡಿಸ್ ಪಿಜಿಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಮದನ್ ಪಲ್ಲಿ ಮೂಲದ ಕೆ.ನರೇಶ್ ಪಟ್ಯಂ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ಆ.29ರಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಪಿ.ಜಿಗೆ ನುಗ್ಗಿದ್ದ ಅಪರಿಚಿತ ವ್ಯಕ್ತಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಸದ್ದುಗುಂಟೆಪಾಳ್ಯ ಠಾಣಾ ವ್ಯಾಪ್ತಿಯ ಪಿಜಿಯಲ್ಲಿ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆರೋಪಿ ಯುವತಿಯ ರೂಮ್‌ಗೆ ನುಗ್ಗಿದಾಗ ಆಕೆ ರೂಮ್ ಮೇಟ್ ಇರಬಹುದು ಅಂದುಕೊಂಡಿದ್ದಳು. ಕಾಮುಕ ಮೊದಲೇ ಪಿಜಿ ಫ್ಲೋರ್ ನ ಎಲ್ಲಾ ರೂಮ್ ಡೋರ್ ಗಳನ್ನು ಲಾಕ್ ಮಾಡಿ, ಬಳಿಕ ಯುವತಿ ಬಳಿ ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಅಲ್ಲದೇ ಚಾಕು ತೋರಿಸಿ ಬೆದರಿಕೆ ಹಾಕಿದ್, ಈ ವೇಳೆ ಪ್ರತಿರೋಧ ತೋರಿದ ಯುವತಿಗೆ ಥಳಿಸಿ ಆಕೆಯನ್ನು ಎಳೆದಾಡಿ ಸ್ಥಳದಿಂದ ಎಸ್ಕೇಪ್ ಆಗಿದ್ದ. ಸದ್ಯ ಆರೋಪಿಯನ್ನ ಸದ್ದುಗುಂಟೆಪಾಳ್ಯ ಠಾಣಾ ಪೊಲೀಸರು…
ತುಮಕೂರು: ತುಮಕೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಸ್ಥಾನಕ್ಕೆ 7ನೇ ಬಾರಿಗೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ, 14 ಜನ ನಿರ್ದೇಶಕರನ್ನು ಒಳಗೊಂಡ ಆಡಳಿತ ಮಂಡಳಿಯು ರಾಜಣ್ಣ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದೆ. ರಾಜಣ್ಣ ಅವರ ಈ ಸಾಧನೆ ತುಮಕೂರು ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಅವರ ಪ್ರಾಬಲ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಕೆ.ಎನ್. ರಾಜಣ್ಣ ಕರ್ನಾಟಕದ ಸಹಕಾರಿ ಕ್ಷೇತ್ರದಲ್ಲಿ 1972ರಿಂದಲೂ ತಮ್ಮ ಪ್ರಭಾವವನ್ನು ಸ್ಥಾಪಿಸಿದ್ದಾರೆ. ರಾಷ್ಟ್ರೀಯ ಕೃಷಿ ಸಹಕಾರ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾದ ನಿರ್ದೇಶಕರಾಗಿ ಮತ್ತು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನ ಅಧ್ಯಕ್ಷರಾಗಿ (2001–2005 ಮತ್ತು 2015–2020) ಎರಡು ಅವಧಿಗಳಲ್ಲಿ ಸೇವೆ ಸಲ್ಲಿಸಿದ ಅನುಭವವನ್ನು ಅವರು ಹೊಂದಿದ್ದಾರೆ. ಈ ಹಿಂದೆ ಆರು ಬಾರಿ ಈ ಸ್ಥಾನವನ್ನು ಅಲಂಕರಿಸಿದ್ದ ರಾಜಣ್ಣ, ತಮ್ಮ ಅನುಭವ ಮತ್ತು ನಾಯಕತ್ವದ ಮೂಲಕ ಬ್ಯಾಂಕ್‌ನ ಕಾರ್ಯನಿರ್ವಹಣೆಯನ್ನು ಸುಧಾರಿಸಿದ್ದಾರೆ. ತುಮಕೂರು ಡಿಸಿಸಿ ಬ್ಯಾಂಕ್ ಜಿಲ್ಲೆಯ ಗ್ರಾಮೀಣ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರವನ್ನು…
ಇಂದೋರ್: ವೈದ್ಯಕೀಯ ನಿರ್ಲಕ್ಷ್ಯದ ಆಘಾತಕಾರಿ ಘಟನೆಯೊಂದು ಇಂದೋರ್ ನ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ನಡೆದಿದೆ. ನವಜಾತ ಶಿಶುಗಳ ತೀವ್ರ ನಿಗಾ ಘಟಕದ (NICU) ಒಳಗಿದ್ದ ಎರಡು ನವಜಾತ ಶಿಶುಗಳನ್ನು ಇಲಿಗಳು ಕಚ್ಚಿದ್ದು, ಒಂದು ಶಿಶು ಮಂಗಳವಾರ ಸಾವಿಗೀಡಾಗಿದೆ. ಆದಾಗ್ಯೂ, ಆಸ್ಪತ್ರೆ ಅಧಿಕಾರಿಗಳು ಸಾವಿಗೆ ಕಾರಣ ಇಲಿ ಕಡಿತವಲ್ಲ, ಆಕೆಯ ಗಂಭೀರ ವೈದ್ಯಕೀಯ ಸ್ಥಿತಿ ಎಂದು ಹೇಳಿದ್ದಾರೆ. ಮಹಾರಾಜ ಯಶವಂತರಾವ್ ಆಸ್ಪತ್ರೆಯ NICU ಒಳಗೆ ಭಾನುವಾರ ಮತ್ತು ಸೋಮವಾರ ಸತತವಾಗಿ ಇಲಿಗಳು ಕಚ್ಚಿರುವ ಘಟನೆ ನಡೆದಿವೆ. ಹುಟ್ಟಿ ಮೂರ್ನಾಲ್ಕು ದಿನಗಳಷ್ಟೇ ಕಳೆದಿದ್ದ ಎರಡೂ ನವಜಾತ ಶಿಶುಗಳ ಬೆರಳುಗಳು, ತಲೆ ಮತ್ತು ಭುಜಗಳಿಗೆ ಗಾಯಗಳಾಗಿವೆ ಎಂದು ಆಸ್ಪತ್ರೆಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಮಧ್ಯಪ್ರದೇಶ ವೈದ್ಯಕೀಯ ಶಿಕ್ಷಣ ಇಲಾಖೆಯು ಎಂವೈ ಆಸ್ಪತ್ರೆ ಸಂಯೋಜಿತವಾಗಿರುವ ಎಂಜಿಎಂ ವೈದ್ಯಕೀಯ ಕಾಲೇಜಿನ ಡೀನ್ ಗೆ ಶೋ–ಕಾಸ್ ನೋಟಿಸ್ ನೀಡಿದೆ. ಆಸ್ಪತ್ರೆ ಆಡಳಿತವು ಹಲವಾರು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದೆ. ಇಬ್ಬರು ನರ್ಸ್‌ಗಳನ್ನು ಅಮಾನತುಗೊಳಿಸಲಾಗಿದ್ದು, ಮುಖ್ಯ ನರ್ಸ್, ಪಿಐಸಿಯು ಉಸ್ತುವಾರಿ ಮತ್ತು…
ದಾವಣಗೆರೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರನ್ನು ನಾಯಿಗೆ ಹೋಲಿಸಿ ಅವಹೇಳನಕಾರಿಯಾಗಿ ಮಾತನಾಡಿದ್ದ, ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ದ ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್, ಶಾಸಕರಿಗೆ ಬೆಲೆಯೇ ಕೊಡುವುದಿಲ್ಲ. ಶಾಸಕರು ಸಭೆಯಲ್ಲಿ ಇದ್ದರೆ ಮುಖ ತಿರುಗಿಸಿ ಕೂರುತ್ತಾರೆ. ಗಂಟೆಗಟ್ಟಲೆ ಶಾಮನೂರು ಮನೆಯ ಬಾಗಿಲನ್ನು ನಾಯಿಯ ರೀತಿ ಕಾಯುತ್ತಾರೆ. ಎಸ್ಪಿ ಶಾಮನೂರು ಕುಟುಂಬದ ಪೊಮೆರಿಯನ್ ನಾಯಿಯಂತೆ ವರ್ತಿಸುತ್ತಾರೆ. ಇವರಿಗೆ ಅಧಿಕಾರದಲ್ಲಿರುವವರು ಮಾತ್ರ ಮುಖ್ಯವಾಗಿ ಕಾಣುತ್ತಾರೆ ಎನ್ನಿಸುತ್ತದೆ. ಎಲ್ಲಾ ಜನಪ್ರತಿನಿಧಿಗಳನ್ನು ಸಮಾನವಾಗಿ ಕಾಣುವ ದೃಷ್ಟಿಕೋನ ಇಲ್ಲ. ಈ ಅಧಿಕಾರ ತಾತ್ಕಾಲಿಕ ಅನ್ನುವುದನ್ನು ಎಸ್ಪಿ ಅರಿತುಕೊಳ್ಳಬೇಕು ಎಂದು ಹರಿಹರ ಬಿಜೆಪಿ ಶಾಸಕ ಬಿಪಿ ಹರೀಶ್ ಟೀಕಿಸಿದ್ದರು. ದೂರು ಆಧರಿಸಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 79 (ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವುದು) ಹಾಗೂ 132 (ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ) ಅಡಿಯಲ್ಲಿ ಎಫ್…
ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಅನು, ಪುಷ್ಕರ್ ಕುಮಾರ್ (25 ) ಹಾಗು ಜ್ಯೋತಿಕುಮಾರಿ (22) ದಂಪತಿಯ ಪುತ್ರಿ ಅನು ಮೃತ ಮಗು. ನೇಪಾಳ ಮೂಲದ ದಂಪತಿ ಕಳೆದ 8 ವರ್ಷಗಳಿಂದ ಇಲ್ಲೇ ವಾಸಮಾಡುತ್ತಿದ್ದರು. ದಂಪತಿ ಮನೆಯಲ್ಲಿ ಮಗು ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಮಗು ಸಾವನ್ನಪ್ಪಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ವಿಜಯಪುರ: ಮುಸ್ಲಿಂ ಯುವತಿಯರನ್ನು ಮದುವೆಯಾದರೆ ಹಿಂದೂ ಯುವಕರಿಗೆ 5 ಲಕ್ಷ ರೂ. ನೀಡುವುದಾಗಿ ಘೋಷಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ರಿಲೀಫ್ ಸಿಕ್ಕಿದೆ. ಈ ಬಗ್ಗೆ ಕಲಬುರಗಿ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದ್ದು, ಯತ್ನಾಳ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ. ಕೊಪ್ಪಳದಲ್ಲಿ ಯತ್ನಾಳ್ ನೀಡಿದ್ದ ಈ ಹೇಳಿಕೆಗೆ ಸಂಬಂಧಿಸಿದಂತೆ ವಿಜಯಪುರ, ಕಲಬುರ್ಗಿ ಹಾಗೂ ಕೊಪ್ಪಳದಲ್ಲಿ ದೂರುಗಳು ದಾಖಲಾಗಿದ್ದವು. ವಿಜಯಪುರ, ಕಲಬುರಗಿಯಲ್ಲಿ ದಾಖಲಾಗಿದ್ದ ದೂರುಗಳನ್ನು ಪೊಲೀಸ್ ಇಲಾಖೆ ಕೊಪ್ಪಳಕ್ಕೆ ವರ್ಗಾಯಿಸಿತ್ತು. ಈ ದೂರುಗಳ ರದ್ದತಿ ಕೋರಿ ಕಲಬುರಗಿ ವಿಭಾಗೀಯ ಪೀಠಕ್ಕೆ ಯತ್ನಾಳ್ ಅರ್ಜಿ ಸಲ್ಲಿಸಿದ್ದರು. ಯತ್ನಾಳ್ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ನ್ಯಾಯಮೂರ್ತಿ ಎಂಐ ಅರುಣ್ ಅವರ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ಆರ್‌ಎಂಸಿ ಯಾರ್ಡ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರ್.ಆರ್.ನಗರ ಶಾಸಕ ಮುನಿರತ್ನ ಅವರಿಗೆ ವಿಶೇಷ ತನಿಖಾ ದಳ (ಎಸ್ ಐಟಿ) ಕ್ಲೀನ್ ಚಿಟ್ ನೀಡಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಎಸ್‌ಐಟಿಯು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ. ಈ ವರದಿಯು ಶಾಸಕನಿಗೆ ಬಿಗ್ ರಿಲೀಫ್ ನೀಡಿದೆ. ಆರ್ ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ, ಈ ಪ್ರಕರಣದಲ್ಲಿ, ಮಹಿಳೆಯೊಬ್ಬರು ಶಾಸಕ ಮುನಿರತ್ನ ಸೇರಿದಂತೆ ಕೆಲವರ ವಿರುದ್ಧ ಸಾಮೂಹಿಕ ಅತ್ಯಾಚಾರದ ಆರೋಪ ಮಾಡಿದ್ದರು. ಆರೋಪಿಗಳು ತನ್ನನ್ನು ನಿದ್ರೆ ಮಾತ್ರೆಗಳನ್ನು ಸೇವಿಸುವಂತೆ ಒತ್ತಾಯಿಸಿ, ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಆರ್ ಎಂಸಿ ಯಾರ್ಡ್ ಪೊಲೀಸರು ಎಫ್ ಐಆರ್ ದಾಖಲಿಸಿ, ತನಿಖೆಯನ್ನು ಎಸ್‌ಐಟಿಗೆ ವಹಿಸಿದ್ದರು. ಆದರೆ, ತನಿಖೆಯ ಸಂದರ್ಭದಲ್ಲಿ ಆರೋಪಗಳಿಗೆ ಸಾಕ್ಷ್ಯಾಧಾರ ದೊರೆಯದಿರುವುದು ಈಗ ಬೆಳಕಿಗೆ ಬಂದಿದೆ. ಎಸ್‌ಐಟಿಯ ತನಿಖೆಯು ಆರೋಪಿತ ಮಹಿಳೆಯ ದೂರಿನ ವಿಶ್ವಾಸಾರ್ಹತೆಯನ್ನು ಪರಿಶೀಲಿಸಿದೆ. ತನಿಖೆಯಲ್ಲಿ, ಮಹಿಳೆಯು ತಾನು ನಿದ್ರೆ ಮಾತ್ರೆ ಸೇವಿಸಿದ್ದೇನೆ ಎಂದು ಹೇಳಿಕೆ ನೀಡಿದ್ದರು. ಇದರ…