Subscribe to Updates
Get the latest creative news from FooBar about art, design and business.
- ಎಸ್ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
- ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
- ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
- ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
- ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
- ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
- ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
- ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
Author: admin
ಮುಂಬೈ: ಇಲ್ಲಿನ ಘಾಟ್ಖೋಪರ್ನಲ್ಲಿ ಹೋರ್ಡಿಂಗ್ ದುರಂತ ಸಂಭವಿಸಿದ ಸ್ಥಳದಲ್ಲಿ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಗುರುವಾರ ಬೆಳಗ್ಗೆ ಅಂತ್ಯಗೊಂಡಿದೆ ಎಂದು ಕೇಂದ್ರ ವಿಪತ್ತು ನಿರ್ವಹಣಾ ದಳದ ಅಧಿಕಾರಿ ತಿಳಿಸಿದ್ದಾರೆ. ಭಾರೀ ಮಳೆ ಹಾಗೂ ಧೂಳಿನ ಬಿರುಗಾಳಿಗೆ ಘಾಟ್ಖೋಪರ್ನ ಛೆಡ್ಡಾ ನಗರ ಪ್ರದೇಶದಲ್ಲಿರುವ 120 X 120 ಅಡಿ ಎತ್ತರದ ಬೃಹತ್ ಹೋರ್ಡಿಂಗ್ ಪೆಟ್ರೋಲ್ ಬಂಕ್ ಮೇಲೆ ಸೋಮವಾರ ಸಂಜೆ ಕುಸಿದ ಬಳಿಕ 66 ಗಂಟೆಗಳ ಕಾಲ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ ಅವರು ತಿಳಿಸಿದ್ದಾರೆ. ಕಾರ್ಯಾಚರಣೆಯನ್ನು ಗುರುವಾರ ಬೆಳಗ್ಗೆ 10.30ಕ್ಕೆ ಅಂತ್ಯಗೊಳಿಸಲಾಗಿದೆ. ಸ್ಥಳ ಪರಿಶೀಲನೆ ನಡೆಸಿದ ಬಳಿಕ ಬಿಎಂಸಿ ಆಯುಕ್ತ ಭೂಷಣ್ ಗಗ್ರಾನಿ ಅವರು ಈ ಕುರಿತು ಘೋಷಣೆ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ. ಬುಧವಾರ ತಡ ರಾತ್ರಿ ಹೋರ್ಡಿಂಗ್ನ ಅಡಿಯಲ್ಲಿ ಸಿಲುಕಿದ್ದ ಕಾರಿನಲ್ಲಿದ್ದ ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ)ನ ನಿವೃತ್ತ ಜನರಲ್ ಮ್ಯಾನೇಜರ್ ಹಾಗೂ ಅವರ ಪತ್ನಿಯ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಇದರೊಂದಿಗೆ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.…
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹು ದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ, ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ 38ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತು ಕೊಟ್ಟಂತೆ, ಈ ವರ್ಷದ ಬಜೆಟ್ ನಲ್ಲಿ ಅದನ್ನು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯರು ರಾಜ್ಯದ ಅಡಳಿತದ ಶಕ್ತಿದೇಗುಲವಾದ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕಚೇರಿಗೆ ತೆರಳಿ ಅಭಿನಂದನೆ ಪತ್ರ ಸಲ್ಲಿಸಿದರು. ಸಂಘದ ನಿಯೋಗದೊಂದಿಗೆ ಮುಖ್ಯಮಂತ್ರಿಗಳು ರಾಜ್ಯದ ಸಾವಿರಾರು ಗ್ರಾಮೀಣ ಪತ್ರಕರ್ತರಿಗೆ ನಿಮ್ಮ ಘೋಷಣೆಯಿಂದ ತುಂಬ ಅನುಕೂಲ ಆಗಲಿದ್ದು, ನಿಮ್ಮ ಈ ಉದಾರತೆಗೆ ಪತ್ರಕರ್ತರ ಸಂಘ ಸದಾ ಚಿರ ಋಣಿಯಾಗಿರುತ್ತದೆ ಎಂದು ಶಿವಾನಂದ ತಗಡೂರು ಹೇಳಿದರು. ಇದಕ್ಕೆ ಮುಖ್ಯಮಂತ್ರಿಗಳು ನಗುತ್ತಲ್ಲೆ ಕೈಜೋಡಿಸಿದರು. ನಿಯೋಗದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ…
ಮೋಜು-ಮಸ್ತಿ ಮಾಡಲೆಂದು ಅತಿಯಾದ ವೇಗದಲ್ಲಿ ವಾಹನ ಚಲಾಯಿಸಿ ಪ್ರಾಣ ಕಳೆದುಕೊಂಡ ಘಟನೆ ಗುಜರಾತ್ ನಲ್ಲಿ ನಡೆದಿದ್ದು, ಐವರು ಯುವಕರು ಇನ್ ಸ್ಟಾಗ್ರಾಂ ಲೈವ್ ಹೋಗುತ್ತಾ ಕಾರನ್ನು ಪ್ರತಿ ಗಂಟೆಗೆ 160 ಕಿಲೋಮೀಟರ್ ವೇಗದಲ್ಲಿ ಚಲಾಯಿಸಿ ಕೊನೆಗೆ ಭೀಕರ ಅಪಘಾತಕ್ಕೀಡಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಅಸುನೀಗಿದರೆ, ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುಜರಾತ್ ನ ಕಛ್ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅಹ್ಮದಾಬಾದ್‌ನಿಂದ ಮುಂಬೈಗೆ SUV ಕಾರಿನಲ್ಲಿ ರೋಡ್ ಟ್ರಿಪ್ ಹೊರಟಿದ್ದ ಐವರು ಯುವಕರು ಕಾರು ಚಲಾಯಿಸುತ್ತಲೇ ಇನ್‌ಸ್ಟಾಗ್ರಾಂ ಲೈವ್ ಹೋಗಿದ್ದಾರೆ. ಒಂದು ಅತೀ ವೇಗದ ಕಾರು ಚಾಲನೆ ಅದರ ಜೊತೆ ಇನ್‌ಸ್ಟಾಗ್ರಾಂನಲ್ಲಿ ಲೈವ್ ಹೀಗೆ ಎದುರಿಗೆ ಬರುತ್ತಿದ್ದ ಒಂದೊಂದೆ ವಾಹಗಳನ್ನು ಓವರ್ ಟೇಕ್ ಮಾಡುತ್ತಾ ಹುಚ್ಚಾಟ ಮೆರೆದಿದ್ದಾರೆ. ಫುಲ್ ಎಂಜಾಯ್ ಮೂಡ್ ನಲ್ಲಿದ್ದ ಯುವಕರ ಹುಚ್ಚಾಟದಿಂದ ಎದುರಿಗೆ ಬರುತ್ತಿದ್ದ ವಾಹನ ತಪ್ಪಿಸಲು ಹೋಗಿ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಯುವಕರಿಬ್ಬರು ಸ್ಥಳದಲ್ಲೇ ಬಲಿಯಾಗಿದ್ದಾರೆ. ಉಳಿದ ಮೂವರು ಗಂಭೀರವಾಗಿ…
ದಾವಣಗೆರೆ: ಗ್ರಾಮದ ಕೆರೆಗೆ ಕೆಲವು ದುಷ್ಕರ್ಮಿಗಳು ವಿಷ ಹಾಕಿ ಸಾವಿರಾರು ಮೀನುಗಳು ಸತ್ತಿರುವ ಘಟನೆ ದಾವಣಗೆರೆ ತಾಲೂಕಿನ ಎಲೆಬೇತೂರಿನಲ್ಲಿ ನಡೆದಿದೆ. ಗ್ರಾಮದ ಹೊರ ವಲಯದ ಎಲೆಬೇತೂರು ಗ್ರಾಮಕ್ಕೆ ಹೊಂದಿಕೊಂಡಿರುವ ಭದ್ರಾ ಕಾಲುವೆ ಆಶ್ರಿತವಾಗಿರುವ ಸುಮಾರು 126 ಎಕರೆ ವಿಸ್ತೀರ್ಣದ ಬೇತೂರು ಕೆರೆಯಲ್ಲಿ, ಈ ಬರದಲ್ಲಿ ಸುಮಾರು 60 ಎಕರೆಯಷ್ಟು ನೀರು ಸಂಗ್ರಹವಾಗಿತ್ತು ಎನ್ನಲಾಗಿದೆ. ಕೆರೆ ಅಂಗಳದಲ್ಲಿ ಸುಮಾರು 20 ಅಡಿಗಳಷ್ಟು ಆಳದ ಗುಂಡಿಗಳಲ್ಲಿ 8-10 ಕೆಜಿ ತೂಕದ ಭಾರೀ ಮೀನುಗಳ ಮಾರಣ ಹೋಮ ನಡೆಸಲಾಗಿದೆ ಎಂದು ವರದಿ ತಿಳಿಸಿದೆ. ಎಲೆಬೇತೂರು ಗ್ರಾಮದ ಮಂಜಪ್ಪ ಬಾರಿಕೇರ, ಸಿದ್ದಪ್ಪ ಬಾರಿಕರ, ಹನುಮಂತಪ್ಪ ಜಕ್ಕಾವರು ಸೇರಿಕೊಂಡು ಮೀನುಗಾರಿಕೆ ಇಲಾಖೆಯಿಂದ ಟೆಂಡರ್ ಪಡೆದು, ಸುಮಾರು 8 ಲಕ್ಷ ಮೀನು ಮರಿಗಳನ್ನು ಬಿಟ್ಟಿದ್ದರು. 5 ವರ್ಷಗಳ ಹಿಂದೆ ಬಿಟ್ಟಿದ್ದ ಮೀನುಗಳ ಸಂತತಿ ಹೆಚ್ಚಾಗಿತ್ತು. ರವೂ, ಕಾಟ್ಲಾ, ಗೌರಿ, ಮಿರಗಲ್, ಬ್ಲಾಕ್ ಶಾರ್ಪ್ ಹೀಗೆ ನಾನಾ ಮೀನುಗಳ ಮರಿಗಳನ್ನು ಬಿಡಲಾಗಿತ್ತು. ಎಲೆಬೇತೂರು ಕೆರೆಯ 126 ಎಕರೆ ಪೈಕಿ ಅರ್ಧದಷ್ಟು ನೀರು…
ಬೆಂಗಳೂರಿನ ಹಲವೆಡೆ ಬೆಳ್ಳಂ ಬೆಳಗ್ಗೆ ಭಾರೀ ಮಳೆಯಾಗಿದೆ. ರಾಮಕೃಷ್ಣ ಆಶ್ರಮ, ಜೆಸಿ ರಸ್ತೆ, ನ್ಯಾಷನಲ್ ಕಾಲೇಜು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದು ವಾಹನ ಸವಾರರ ಸಂಚಾರಕ್ಕೆ ತೊಡಕು ಉಂಟಾಯಿತು. ಬೆಳಗ್ಗೆ 5 ಗಂಟೆಯಿಂದಲೇ ಕೆಲವೆಡೆ ಸಾಧಾರಣ ಮಳೆಯಾದರೆ ಇನ್ನು ಕೆಲವೆಡೆ ಧಾರಾಕಾರವಾಗಿ ಮಳೆ ಸುರಿಯಿತು. ನ್ಯಾಷನಲ್ ಕಾಲೇಜು ಹಾಗೂ ಲಾಲ್ ಬಾಗ್ ಮಧ್ಯೆ ರಸ್ತೆಯಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆಯಾಯಿತು. ಶಾಂತಿನಗರ, ಕೋರಮಂಗಲ, ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್, ಕೆಆರ್ ಮಾರ್ಕೆಟ್, ಮೆಜೆಸ್ಟಿಕ್, ಶಿವಾಜಿನಗರ, ವಿಧಾನಸೌಧ, ವಸಂತನಗರ, ಎಂಜಿ ರಸ್ತೆ, ಕಬ್ಬನ್ಪಾರ್ಕ್, ಟ್ಯಾನಿರೋಡ್, ರಾಮಕೃಷ್ಣ ಆಶ್ರಮ, ಬಸವನಗುಡಿ, ಗಿರಿನಗರ, ಶ್ರೀನಿವಾಸ ನಗರ, ಕತ್ರಿಗುಪ್ಪೆ, ಜಯನಗರ, ಬನಶಂಕರಿ ಸೇರಿದಂತೆ ಹಲವೆಡೆ ಮಳೆ ಸುರಿಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕೋಲಾರ: ಜಮೀನು ಪೋಡಿ ದುರಸ್ತಿ ಹೆಸರಿನಲ್ಲಿ ಸರ್ವೆ ಮಾಡಿ ನಮ್ಮಿಂದ ಬೇಸಾಯ ಭೂಮಿ ಕಿತ್ತುಕೊಳ್ಳುವ ಉನ್ನಾರ ನಡೆಯುತ್ತಿದೆ ಎಂದು ಜಮೀನು ಮಾಲೀಕ ರತ್ನಮ್ಮ ಮುನಿಯಪ್ಪ ಅವ್ರು ಆರೋಪಿಸಿದರು. ಕೋಲಾರ ತಾಲೂಕಿನ ವಕ್ಕಲೇರಿ ಹೋಬಳಿ ಸ್ವಾಮಿಗಳ ಗೊಲ್ಲಹಳ್ಳಿ ಗ್ರಾಮದ ಸರ್ವೇ ನಂ. 75/2 1ಎಕರೆ 8ಗುಂಟೆ ಜಮೀನು ವಿಚಾರವಾಗಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಜಮೀನು ಸೇರಿದಂತೆ ಸರ್ವೇ ನಂ 76, 77, 78 ಜಮೀನುಗಳನ್ನು ಕಬಳಿಸಲು ಕಿಡಿಗೇಡಿಗಳು ಮುಂದಾಗಿದ್ದು, ತಹಶೀಲ್ದಾರ್ ಸಹ ಅವರಿಗೆ ಸಾಥ್ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಚೆನ್ನೈ ಕಾರಿಡಾರ್ ಕಾಮಗಾರಿಗಾಗಿ ನಮ್ಮ ಜಮೀನನ್ನು ಕಳೆದುಕೊಂಡು ಅದರಲ್ಲಿ ಬಂದ ಹಣದಿಂದ ಕೋಲಾರ ನಗರದ ಕಠಾರಿ ಪಾಳ್ಯ ನಿವಾಸಿ ಸಿರಾಜ್ ಎಂಬುವರ ಬಳಿ ಲಕ್ಷ್ಮಿ ಸಾಗರ ಗ್ರಾಮದ ಸರ್ವೇ ನಂ 75/2 ಭೂಮಿಯನ್ನು ಕೊಂಡುಕೊಂಡಿದ್ದೇನೆ. ಕೃಷಿಗೆ ಯೋಗ್ಯವಲ್ಲದ ಭೂಮಿಯನ್ನು ಸರಿ ಮಾಡಿ ಕೃಷಿ ಭೂಮಿಯಾಗಿ ಪರಿವರ್ತಿಸಿದ್ದು, ಟ್ರಾನ್ಸ್ ಫಾರ್ಮರ್, ಕೃಷಿ ಹೊಂಡ ನಿರ್ಮಿಸಿ ಬೆಳೆಗಳನ್ನು ಬೆಳೆಯುತ್ತಿದ್ದೇನೆ. ಈಗ ಕೆಲವು ಕಿಡಿಗೇಡಿಗಳಿಂದ ಜಮೀನು…
ಇಂಡೊನೇಶ್ಯಾದ ಪಶ್ಚಿಮ ಸುಮಾತ್ರಾ ಪ್ರಾಂತದಲ್ಲಿ ಕಳೆದ ವಾರಾಂತ್ಯದಿಂದ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದೆ. ಘಟನೆಯಲ್ಲಿ ಇದುವರೆಗೂ 58 ಮಂದಿ ಮೃತಪಟ್ಟಿದ್ದು 35 ಜನರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ವಿಪತ್ತು ನಿರ್ವಹಣಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹದ ಸಮಸ್ಯೆ ಎದುರಾಗಿದೆ. ಭೂಕುಸಿತದಿಂದ ಕೆಸರು ಮಣ್ಣು ಹಾಗೂ ಪಶ್ಚಿಮ ಸುಮಾತ್ರಾದ ಮೂರು ಜಿಲ್ಲೆಗಳಲ್ಲಿ ಮರಾಪಿ ಪರ್ವತದಿಂದ ಸಿಡಿದ ಜ್ವಾಲಾಮುಖಿಯ ಬಿಸಿಬೂದಿ ಪ್ರವಾಹದ ನೀರಿನಲ್ಲಿ ಸೇರಿಕೊಂಡು ಪ್ರಮುಖ ರಸ್ತೆಗಳಲ್ಲಿ ತ್ಯಾಜ್ಯಗಳು ರಾಶಿ ಬಿದ್ದಿವೆ. ತನಾಹ್ ದತಾರ್ ಜಿಲ್ಲೆಯಲ್ಲಿ ಹಲವು ಸೇತುವೆ, ಮನೆಗಳು ಕುಸಿದು ಬಿದ್ದಿದ್ದು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ರಸ್ತೆಗಳಲ್ಲಿ ರಾಶಿಬಿದ್ದಿರುವ ಕಲ್ಲು ಮಣ್ಣು, ಮರಗಳು ಹಾಗೂ ತ್ಯಾಜ್ಯವನ್ನು ತೆರವುಗೊಳಿಸಿ ಸಂಚಾರ ವ್ಯವಸ್ಥೆ ಸುಗಮಗೊಳಿಸಲು ಪ್ರಮುಖ ಆದ್ಯತೆ ನೀಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಕನಿಷ್ಟ 249 ಮನೆಗಳು, 556 ಎಕರೆ ಕೃಷಿ ಪ್ರದೇಶ, 19 ಸೇತುವೆಗಳು ಹಾಗೂ…
ಪಾವಗಡ: ಪಾವಗಡ ತಾಲೂಕಿನ ರಂಗಸಮುದ್ರದಲ್ಲಿ ಸಿಡಿಲಿಗೆ ದನದ ಕೊಟ್ಟಿಗೆ ಹೊತ್ತಿ ಉರಿದ ಘಟನೆ ನಡೆದಿದೆ. ಒಂದು ಹಸು ಸಜೀವ ದಹನಗೊಂಡಿದ್ದು, ಮೂರು ಹಸುಗಳಿಗೆ ಗಾಯಗಳಾಗಿವೆ. ಈ ಹಸುಗಳು ರಂಗಸಮುದ್ರದ ಕರಿಯಪ್ಪ ಎನ್ನುವವರಿಗೆ ಸೇರಿದವಾಗಿವೆ. ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆ ವೇಳೆ ಸಿಡಿಲು ಅಬ್ಬರಿಸಿದ್ದು, ಕೊಟ್ಟಿಗೆಯಲ್ಲಿ ಮಲಗಿದ್ದ ಕರಿಯಪ್ಪ ಹಾಗೂ ಬಾಲಕ ಮಹಾಲಿಂಗನಿಗ ಗಾಯಗಳಾಗಿವೆ. ಗಾಯಾಳುಗಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅರಸಿಕೆರೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವರದಿ: ನಂದೀಶ್ ನಾಯ್ಕ ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕೊರಟಗೆರೆ: ಕೊರಟಗೆರೆ ತಾಲೂಕಿನ ಅಗ್ರಹಾರ ಗ್ರಾಮ ಪಂಚಾಯತಿ ವ್ಯಾಪ್ತಿಯ ಥರಟಿ ಗ್ರಾಮದ ಬಳಿ ಘಟನೆ ನಡೆದಿದೆ. ಘಟನಾ ಸ್ಥಳದಲ್ಲಿ ರೈತನ ಆಕ್ರಂದನ ಮುಗಿಲು ಮುಟ್ಟಿದೆ. ಥರಟಿ ಗ್ರಾಮದ ತಿಮ್ಮಪ್ಪ ಬಿನ್ ವೆಂಕಟರಮಣಪ್ಪ ಎನ್ನುವ ಬಡ ರೈತನಿಗೆ ಸೇರಿದ ಕುರಿಗಳಾಗಿವೆ. ಕುರಿಗಳು ಕಳೆದುಕೊಂಡ ರೈತನಿಗೆ ಬಸ್ ಮಾಲೀಕನಿಂದ ಪರಿಹಾರ ಕೊಡಿಸುವಂತೆ ಗ್ರಾಮಸ್ಥರ ಆಗ್ರಹಿಸಿದ್ದಾರೆ. ಈ ರಸ್ತೆಯಲ್ಲಿ ಅತೀ ವೇಗದ ಚಲನೆಯಿಂದ ಪದೇ ಪದೇ ಅಪಘಾತಗಳು ಸಂಭವಿಸುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾಸಗಿ ಬಸ್ ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಒಂದು ಗಂಟೆಗೂ ಅಧಿಕ ಟ್ರಾಫಿಕ್ ಜಾಮ್ ಆಗಿದ್ದು, ಕೊರಟಗೆರೆ ಪೊಲೀಸ್ ಅಧಿಕಾರಿಗಳು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ:…
ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಣಿವೆ ಬಿಳಚಿ ಬಳಿ ನಡೆದಿತ್ತು. ಮೃತದೇಹದ ಕಿವಿ ಓಲೆಯಿಂದಲೇ ಕೊಲೆವೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಳೆದ ಮೇ 9ರಂದು ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಕಿವಿಯೋಲೆ ಹಂತಕರ ಸುಳಿವು ನೀಡಿದೆ. ಕೈ-ಕಾಲು ಕಟ್ಟಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದದ್ದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಆದರೆ ಮೃತದೇಹ ಸಂಪೂರ್ಣ ಕೊಳೆತ ಹಿನ್ನೆಲೆಯಲ್ಲಿ ಗುರುತು ಹಿಡಿಯಲು ಕಷ್ಟವಾಗಿತ್ತು. ಮೃತದೇಹ ಸಿಕ್ಕ ಜಾಗದಲ್ಲಿ ಎಲ್ಲ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದರು. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ನಾಪತ್ತೆ ಆಗಿದ್ದಾರೆ ಎಂಬ ಪ್ರಕರಣ ದಾಖಲಿಸಿಕೊಂಡಿದ್ದದ್ದು ತಿಳಿದಿತ್ತು. ಭದ್ರಾ ನಾಲೆಯಲ್ಲಿ ಸಿಕ್ಕ ಮೃತದೇಹಕ್ಕೂ ಇಲ್ಲಿ ಮಿಸ್ಸಿಂಗ್ ಆಗಿದ್ದ ಮಹಿಳೆಗೂ ತಾಳೆ ಮಾಡಿ ನೋಡಿದ್ದರು. ಆಗ ಮೃತದೇಹದಲ್ಲಿದ್ದ ಕಿವಿ ಓಲೆಯಿಂದ ಮೃತಳ ಗುರುತನ್ನು ಪತ್ತೆ ಮಾಡಲಾಯಿತು. ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಅರಕೆರೆ ಗ್ರಾಮದ ನಿವಾಸಿ ನೇತ್ರಾವತಿ (47) ಕೊಲೆಯಾಗಿದ್ದಾರೆ ಎನ್ನಲಾಗಿದೆ. ಕುಮಾರ ಎಚ್.ಜಿ. (38) ಹಾಗೂ…