Subscribe to Updates
Get the latest creative news from FooBar about art, design and business.
- ಎಸ್ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
- ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
- ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
- ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
- ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
- ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
- ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
- ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
Author: admin
ನಟ ಭಯಂಕರ ಡಾಲಿ ಧನಂಜಯ್ ನಟನೆಯ ‘ಕೋಟಿ’ ಸಿನಿಮಾದ ಟೀಸರ್ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿ ಸದ್ದು ಮಾಡಿತ್ತು. ಇದೀಗ ಸಿನಿಮಾದ ಮೊದಲ ಹಾಡು ಯೂಟ್ಯೂಬ್ ನಲ್ಲಿ ಬಿಡುಗಡೆ ಆಗಿದ್ದು ಸಂಗೀತ ಪ್ರಿಯರ ಮನ ಸೆಳೆದಿದೆ. ಯೋಗರಾಜ್ ಭಟ್ ಬರೆದ ಸಾಹಿತ್ಯಕ್ಕೆ ಅರ್ಮಾನ್ ಮಲ್ಲಿಕ್ ಹಾಡಿದ್ದು, ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕೋಟಿ’ ಮಧ್ಯಮವರ್ಗದ ಯುವಕನ ಕತೆಯುಳ್ಳ ಸಿನಿಮಾ. ‘ಕೋಟಿ’ ಸಿನಿಮಾನಲ್ಲಿ ಡಾಲಿ ಧನಂಜಯ್ ಎದುರು ಮೋಕ್ಷ ಕುಶಾಲ್ ನಾಯಕಿಯಾಗಿ ನಟಿಸಿದ್ದಾರೆ. ನಟಿ ತಾರಾ, ರಂಗಾಯಣ ರಘು, ರಮೇಶ್ ಇಂದಿರಾ, ತನುಜಾ ವೆಂಕಟೇಶ್ ಇನ್ನೂ ಹಲವರು ನಟಿಸಿದ್ದಾರೆ. ಹಾಡು ಬಿಡುಗಡೆಗೆ ಮುನ್ನ ಮಾತನಾಡಿದ್ದ ನಿರ್ದೇಶಕ ಪರಮೇಶ್ವರ್ ಗುಂಡ್ಕಲ್, ‘‘ವಾಸುಕಿ ಭವನ್ ಹೊಸ ತಲೆಮಾರಿನ ಪ್ರತಿಭಾವಂತ ಮ್ಯೂಸಿಕ್ ಡೈರೆಕ್ಟರ್. ಇನ್ನು, ಯೋಗರಾಜ್ ಭಟ್ ಅವರ ಸಾಹಿತ್ಯದ ದೊಡ್ಡ ಫ್ಯಾನ್ ನಾನು. ಯೋಗರಾಜ್ ಭಟ್ ಮತ್ತು ವಾಸುಕಿ ವೈಭವ್ ಕಾಂಬಿನೇಷನ್ನ ಈ ಗೀತೆಯನ್ನು ಅರ್ಮಾನ್ ಮಲಿಕ್ ಬಹಳ ಚೆನ್ನಾಗಿ ಹಾಡಿದ್ದಾರೆ. ಕನ್ನಡಿಗರಿಗೆ…
ರಾಜಧಾನಿಯಲ್ಲಿ ಮಾವಿನ ಸೀಸನ್ ಲೇಟಾಗಿ ಆರಂಭವಾಗಿದ್ದು, ಮಳೆ ಬಂದ ನಂತರ ಸಿಲಿಕಾನ್ ಸಿಟಿ ಮಂದಿ ಬಗೆ ಬಗೆಯ ಹಣ್ಣುಗಳನ್ನ ಸವಿಯುತ್ತಿದ್ದಾರೆ. ಈ ಮಧ್ಯೆ ಲಾಲ್ ಬಾಗ್ ನಲ್ಲಿಯು ಈ ವರ್ಷ ಮಾವಿನ ಮೇಳ ನಡೆಸುವುದಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಸದ್ಯ ಮೇಳಕ್ಕೆ ಡೇಟ್ ಕೂಡ ಫಿಕ್ಸ್ ಮಾಡಿದ್ದಾರೆ. ಇದೇ ಮೇ. 24 ರಿಂದ ಜೂನ್ 10 ರವರೆಗೂ ಮಾವು ಹಾಗೂ ಹಲಸಿನ ಮೇಳ ಮಾಡುವುದಕ್ಕೆ ಮಾವು ಅಭಿವೃದ್ಧಿ ನಿಗಮ ಹಾಗೂ ಲಾಲ್ ಬಾಗ್ ತೋಟಗಾರಿಕೆ ಇಲಾಖೆ ನಿರ್ಧರಿಸಿದೆ. ಈ ಮಾವಿನ ಮೇಳಕ್ಕೆ ಕೋಲಾರ, ಶ್ರೀನಿವಾಸಪುರ, ಚಿಂತಾಮಣಿ, ಬೆಂಗಳೂರು ಗ್ರಾಮಾಂತರ, ಹಾವೇರಿ, ಧಾರವಾಡ ಸೇರಿದಂತೆ ನಾನಾ ಜಿಲ್ಲೆಗಳ ಮಾವು ಬೆಳೆಗಾರರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಮೇಳದಲ್ಲಿ ವಾಣಿಜ್ಯ, ಪಾರಂಪರಿಕ ಮಾವಿನ ತಳಿಗಳು, ಜೊತೆಗೆ ಉಪ್ಪಿನಕಾಯಿಗೆ ಬಳಸುವ ಆಮ್ಲೆಟ್, ಮಿಡಿ ಮಾವು ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಇರಲಿದೆ. ಇನ್ನು ಐಐಎಚ್‌ಆರ್, ಜಿಕೆವಿಕೆ ಮತ್ತಿತರ ಸಂಸ್ಥೆಗಳು ಅಭಿವೃದ್ಧಿಪಡಿಸಿದ ಹಲಸಿನ ತಳಿಗಳು, ರೈತರು ಬೆಳೆದ ನಾನಾ ತಳಿಯ ಹಲಸಿನ…
ಪಾವಗಡ: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ, ಪಾವಗಡ ತಾಲೂಕಿನ ಸಹನಾ ಕಾನ್ವೆಂಟ್ ಮತ್ತು ಕೋಡಿಗೆಹಳ್ಳಿಯ ಮೊರಾರ್ಜಿ ವಸತಿ ಶಾಲೆ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದುಕೊಂಡು ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದೆ ಎಂದು ಬಿ.ಇ.ಓ. ಇಂದ್ರಾಣಮ್ಮ ತಿಳಿಸಿದ್ದಾರೆ. ಕೋಟಗುಡ್ಡ ಗ್ರಾಮದ ಸಹನಾ ಕಾನ್ವೆಂಟ್ ನಲ್ಲಿ ಹಮ್ಮಿಕೊಂಡಿದ್ದ, ಹೆಚ್ಚು ಅಂಕಗಳನ್ನು ಪಡೆದ, ಜಾಹ್ನವಿ, ನಾಗಶ್ರೀ, ಸುಶ್ಮಿತಾ ವಿದ್ಯಾರ್ಥಿಗಳನ್ನು ಗೌರವಿಸಿ, ಶಾಲೆಯನ್ನು ಅಭಿನಂದಿಸಿ ಮಾತನಾಡಿದ್ದಾರೆ. “ಪರೀಕ್ಷೆಯನ್ನು ಯಾವುದೋ ಪೂರ್ವಗ್ರಹ ಪೀಡಿತದಿಂದ ನೋಡದೆ, ಅದರ ಬಗ್ಗೆ ಅರಿವು ಇಲ್ಲದೆ ಊಹಾಪೋಹಗಳಿಂದ ದಾರಿ ತಪ್ಪುವಂತಾಗುತ್ತದೆ. ಇದು ಮಕ್ಕಳ ಪೋಷಕರಲ್ಲಿ ಕಳವಳಕ್ಕೆ ಕಾರಣವಾಗುತ್ತದೆ. ಕೂಲಿಕಾರ್ಮಿಕರು ತಮ್ಮ ಮಕ್ಕಳನ್ನು ತಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗುವುದರಿಂದ ಫಲಿತಾಂಶವನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಈ ಬಾರಿಯ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಯಾವ ರೀತಿಯಾಗಿ ಪರೀಕ್ಷೆಯನ್ನು ಬರೆದಿದ್ದಾರೋ ಅದೇ ರೀತಿಯಾಗಿ ಅವರು ಫಲಿತಾಂಶವನ್ನು ಸಹ ಪಡೆದುಕೊಂಡಿದ್ದಾರೆ. ಮುಂದಿನ 2025 ರಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರತಿಯೊಬ್ಬರು 625ಕ್ಕೆ 625 ಅಂಕಗಳನ್ನು ಪಡೆದುಕೊಳ್ಳುವ ಗುರಿ ಹೊಂದಬೇಕೆಂದು ಸಹನಾ…
ಬೆಂಗಳೂರು: ಸಮಾಜದ ಸ್ವಾಸ್ಥ್ಯವನ್ನ ಕಾಪಾಡಬೇಕು ಅಂದ್ರೆ ಮಾಧ್ಯಮಗಳ ಪಾತ್ರ ಬಲುದೊಡ್ಡದು ಅಂತಾರೆ. ಅದಕ್ಕಾಗಿಯೇ ಇವತ್ತಿನ ಈ ಸುದ್ದಿ ಸಾಕ್ಷಿಯಾಗಿದೆ. ನೋಡೋಕೆ, ಕೇಳೋಕೆ ಪ್ರೇಕ್ಷಕರಿಗೆ ಇಷ್ಟವಿಲ್ಲದಿದ್ರೂ ಇಲ್ಲಿನ ಪರಿಸ್ಥಿತಿ, ದುಸ್ಥಿತಿ ಬಗ್ಗೆ ತೋರಿಸಲೇ ಬೇಕಾದ ಅನಿವಾರ್ಯವಿದೆ. ಹೌದು… ಬೆಂಗಳೂರಿನಲ್ಲಿ ಸಾಕಷ್ಟು ಸ್ಮಶಾನಗಳಿವೆಯಾದರೂ, ಕಲ್ಪಲ್ಲಿ ಸ್ಮಶಾನ ನಗರದ ಅತ್ಯಂತ ಹಳೆಯ ಸ್ಮಶಾನಗಳಲ್ಲಿ ಒಂದು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸೇರಿದ ಸ್ಮಶಾನವಾದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿದೆ. ಇಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಕನಿಷ್ಟ ಮೂಲಭೂತ ಸೌಕರ್ಯ ಇಲ್ಲದೆ ಶೋಚನೀಯ ಸ್ಥಿತಿ ನಿರ್ಮಾಣವಾಗಿದೆ. ಸ್ಮಶಾನದಲ್ಲಿ ಸಮಾಧಿ ಅಗೆಯುವವರು ಹಾಗೂ ಅವರ ಕುಟುಂಬಸ್ಥರು ಸೇರಿ ಸುಮಾರು 40ಕ್ಕೂ ಹೆಚ್ಚು ಮಂದಿ ನೆಲೆಸಿದ್ದಾರೆ. ಅಲ್ಲದೆ, ಇಲ್ಲಿ ನೋಂದಣಿ ಕಚೇರಿ ಕೂಡ ಇದೆ. ಅಡುಗೆ, ಸ್ನಾನ, ಶೌಚಾಲಯ ಎಲ್ಲದಕ್ಕೂ 35-40 ಮಂದಿಗೆ 2 ಟ್ಯಾಂಕರ್ ಮಾತ್ರ ನೀರು ಪೂರೈಕೆ ಆಗುತ್ತಿದೆ. 6 ನಲ್ಲಿಗಳಿದ್ದರೂ ಎರಡು ನಲ್ಲಿಗಳು ಮಾತ್ರ ಕೆಲಸ ಮಾಡುತ್ತಿವೆ. ನೀರಿನ ಗುಣಮಟ್ಟ, ನಿರಂತರ ಹೊಗೆ ಸ್ಮಶಾನದ ಕೆಲಸಗಾರರ…
ಈ ಹಿಂದೆ ಹಲವು ಬಾರಿ ಸರ್ಕಾರಿ ಬಸ್ ನಲ್ಲಿ ಮಹಿಳೆಯರು ಕಿತ್ತಾಡಿಕೊಂಡ ಘಟನೆಗಳು ವರದಿಯಾಗಿದ್ದವು. ಹಾಗೆಯೇ ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣದ ಸೀಟಿಗಾಗಿ ಕೆಲವು ಮಹಿಳೆಯರು ಕಿತ್ತಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಒಂದು ಸೀಟಿಗಾಗಿ ಪರಸ್ಪರ ಚಪ್ಪಲಿ ಹಿಡಿದು ಬಡಿದಾಡಿಕೊಂಡು, ಅಂಗಿ- ರವಿಕೆ ಹರಿದುಕೊಂಡ ಘಟನೆ ಬೀದರ್ ನಲ್ಲಿ ನಡೆದಿದೆ. ಈ ಘಟನೆ ಬೀದರ್ ನಿಂದ ಕಲಬುರಗಿಗೆ ತೆರಳುವ ಮಾರ್ಗದ ಬಸ್ಸಿನಲ್ಲಿ ನಡೆದಿದೆ. ತಾನು ಕರ್ಚೀಫ್ ಹಾಕಿಟ್ಟಿದ್ದ ಸೀಟಿನಲ್ಲಿ ಮತ್ತೊಬ್ಬಳು ಬಂದು ಕುಳಿತಿದ್ದರಿಂದ ಸಿಟ್ಟಾದ ಮಹಿಳೆ ಏಳಲು ಹೇಳಿದ್ದಾಳೆ. ಆದರೆ ಕೂತಿದ್ದ ಮಹಿಳೆ ಇದಕ್ಕೆ ಸ್ಪಂದಿಸದೆ ಕಟುವಾಗಿ ಪ್ರತಿಕ್ರಿಯಿಸಿದ್ದು, ಇದರಿಂದ ಮಾತಿಗೆ ಮಾತು ಬೆಳೆದಿದೆ. ಅವಾಚ್ಯ ಶಬ್ದಗಳಿಂದ ಬೈದುಕೊಂಡಿದ್ದಾರೆ. ಪರಸ್ಪರರ ಅಂಗಿ ಹಿಡಿದು ಎಳೆದಾಡಿಕೊಂಡಿದ್ದಾರೆ. ನಂತರ ಚಪ್ಪಲಿ ಹಿಡಿದುಕೊಂಡು ಬಡಿದಾಡಿಕೊಂಡಿದ್ದಾರೆ. ಜೊತೆಗಿದ್ದ ಹಲವರು ಇವರ ಜಗಳ ಬಿಡಿಸಲು ಯತ್ನಿಸಿದ್ದಾರೆ. ಈ ಘಟನೆಯನ್ನು ಪ್ರಯಾಣಿಕರೊಬ್ಬರು ವೀಡಿಯೋ ಮಾಡಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ತುಮಕೂರು: ಜಮೀನುಗಳ ಖಾತೆ ಮತ್ತು ಪಹಣಿಗಳನ್ನು ತಂದೆಯ ಹೆಸರಿನಿಂದ ಮಗನ ಹೆಸರಿಗೆ ವರ್ಗಾವಣೆ ಮಾಡಿಕೊಡಲು 10 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದ ಸಿ.ಎಸ್.ಪುರ ಹೋಬಳಿ ರಾಜಸ್ವ ನಿರೀಕ್ಷಕ ಕೆ.ನರಸಿಂಹಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕು, ಸಿ. ಎಸ್.ಪುರ ಹೋಬಳಿ, ಉಂಗ್ರ ಮಜರೆ, ಗದ್ದೆಹಳ್ಳಿ ನಾಗರಾಜು ಅವರ ತಂದೆ ಚಿಕ್ಕಯಲ್ಲಯ್ಯ ಅವರ ಹೆಸರಿನಲ್ಲಿದ್ದ ಉಂಗ್ರ ಗ್ರಾಮದ ಸರ್ವೆ ನಂಬರ್:201/1 ಮತ್ತು ಹುಲ್ಲೇಕೆರೆ ಗ್ರಾಮದ ಸರ್ವೆ ನಂಬರ್:32ರ ಜಮೀನುಗಳನ್ನು ಅವರ ಮಗನಾದ ನಾಗರಾಜು ಅವರಿಗೆ ಗುಬ್ಬಿ ತಾಲೂಕು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಹಕ್ಕು ಖುಲಾಸೆ ಪತ್ರ ಮುಖೇನ ನೋಂದಣಿ ಮಾಡಿಕೊಡಲಾಗಿದೆ. ಸದರಿ ಜಮೀನುಗಳ ಖಾತೆ ಮತ್ತು ಪಹಣಿಗಳನ್ನು ತಂದೆಯ ಹೆಸರಿನಿಂದ ಮಗನಾದ ದೂರುದಾರ ನಾಗರಾಜು ಹೆಸರಿಗೆ ವರ್ಗಾವಣೆ ಮಾಡಿಕೊಡಲು ಸಿ.ಎಸ್. ಪುರ ಹೋಬಳಿ ರಾಜಸ ನಿರೀಕ್ಷಕರಾದ ಕೆ.ನರಸಿಂಹಮೂರ್ತಿ ಹಣದ ಬೇಡಿಕೆ ಇಟ್ಟಿದ್ದು, 10 ಸಾವಿರ ರೂ. ಲಂಚ ಸ್ವೀಕರಿಸುವ ಮೂಲಕ ಆರೋಪಿ ಕೆ.ನರಸಿಂಹಮೂರ್ತಿ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.…
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೀಗ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಮಿಕ್ಕುಳಿದ ವೃಂದದ 2,286 ಹುದ್ದೆಗಳು, ಹಿಂಬಾಕಿ ಹುದ್ದೆ ಸೇರಿ ಒಟ್ಟು 2,500 ಹುದ್ದೆಗಳಿಗೆ ಮಾ.10ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆಯಾಗಿ ದ್ವಿತೀಯ ಪಿಯು ಅಥವಾ ತತ್ಸಮಾನ ತರಗತಿ ಪೂರ್ಣಗೊಳಿಸಿರಬೇಕು. ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ, ಬ್ಯಾಡ್ಜ್ ಹೊಂದಿರಬೇಕು. ಸಾಮಾನ್ಯ ವರ್ಗದವರಿಗೆ ಗರಿಷ್ಠ ವಯೋಮಿತಿ 35 ವರ್ಷ, 2ಎ, 2ಬಿ, 3ಎ ಮತ್ತು 3ಬಿಗೆ 38, ಎಸ್ಸಿ, ಎಸ್ಟಿ ಮತ್ತು ಪ್ರವರ್ಗ-1ಕ್ಕೆ 40, ಮಾಜಿ ಸೈನಿಕ, ಇಲಾಖಾ ಅಭ್ಯರ್ಥಿಗೆ 45 ವರ್ಷ ವಯೋಮಿತಿ. ದೇಹದಾರ್ಢ್ಯತೆ: ಪುರುಷರು 160 ಸೆ.ಮೀ, ಮಹಿಳೆಯರು 150 ಸೆಂ. ಮೀ ಎತ್ತರ ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ ವಯೋಮಿತಿ 18 ಆಗಿದ್ದು, ಗರಿಷ್ಠ ವಯೋಮಿತಿ 35 ವರ್ಷ ಆಗಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು…
ತಿರುವನಂತಪುರಂ: ಭಾರೀ ಮಳೆ ಇರುವ ಹಿನ್ನೆಲೆ ಹವಾಮಾನ ಇಲಾಖೆಯು ಕೇರಳದ 9 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಿದೆ. ಭಾರೀ ಮಳೆಯಾದರೆ ಮಣಿಯಾರ್ ಅಣೆಕಟ್ಟಿನ ಶೆಟರ್ ಗಳನ್ನು ಮೇಲಕ್ಕೆತ್ತುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನೈಋತ್ಯ ಮಾನ್ಸೂನ್ ಮೇ 19ರ ವೇಳೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ತಲುಪುವ ನಿರೀಕ್ಷೆಯಿದೆ. ಇದರ ನಂತರ ಮುಂಗಾರು ಮೇ 29 ಮತ್ತು ಜೂನ್ 1ರ ನಡುವೆ ಕೇರಳವನ್ನು ಅಪ್ಪಳಿಸಬಹುದು. ಸಾಮಾನ್ಯವಾಗಿ, ಜೂನ್ 10ರೊಳಗೆ ಮುಂಗಾರು ಮಹಾರಾಷ್ಟ್ರವನ್ನು ಪ್ರವೇಶಿಸುತ್ತದೆ. ಈ ವರ್ಷ ಅದು ಸರಿಯಾದ ಸಮಯಕ್ಕೆ ಆಗಮಿಸುವ ನಿರೀಕ್ಷೆಯಿದೆ. ಜೂನ್ 15ರ ವೇಳೆಗೆ ಗುಜರಾತ್, ಮಧ್ಯಪ್ರದೇಶ, ಛತ್ತೀಸ್ ಗಢ, ಜಾರ್ಖಂಡ್ ಮತ್ತು ಬಿಹಾರಕ್ಕೆ ಮುಂಗಾರು ಪ್ರವೇಶಿಸಬಹುದು. ಜೂನ್ 20-25ರ ನಡುವೆ ಮುಂಗಾರು ಉತ್ತರ ಪ್ರದೇಶ, ಹಿಮಾಚಲ, ಉತ್ತರಾಖಂಡ ಮತ್ತು ಕಾಶ್ಮೀರವನ್ನು ಪ್ರವೇಶಿಸುವ ಸಾಧ್ಯತೆಯಿದೆ. ಮಾನ್ಸೂನ್ ಜೂನ್ 30ರಂದು ರಾಜಸ್ಥಾನ, ದೆಹಲಿ, ಹರಿಯಾಣ ಮತ್ತು ಪಂಜಾಬ್‌ಗೆ ಅಪ್ಪಳಿಸಬಹುದು. ಇದು ಜುಲೈ 8ರ ವೇಳೆಗೆ ಇಡೀ ದೇಶವನ್ನು ಆವರಿಸುತ್ತದೆ. ತಿರುವನಂತಪುರದಲ್ಲಿ…
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹತ್ಯೆ ನಡೆದು ಕೆಲವು ವಾರಗಳ ಬೆನ್ನಲ್ಲೆ ಯುವತಿ ಅಂಜಲಿಯ ಹತ್ಯೆ ನಡೆದಿದೆ. ಮೇಲಿಂದ ಮೇಲೆ ಇಂತಹ ಘಟನೆಗಳು ನಡೆಯುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ. ಇಂದು ಹುಬ್ಬಳ್ಳಿಯ ಅಂಜಲಿ ಮನೆ ಹಾಗೂ ಕಿಮ್ಸ್ ಆಸ್ಪತ್ರೆ ಮುಂದೆ ಯುವತಿ ಮೃತದೇಹ ಅಂತ್ಯಕ್ರಿಯೆಗೆ ರವಾನಿಸಿದಂತೆ ತಡೆ ಹಿಡಿದ ಘಟನೆ ನಡೆದಿದೆ. ನೆನ್ನೆ ಬೆಳ್ಳಂಬೆಳಗ್ಗೆ ಇಲ್ಲಿನ ವೀರಾಪೂರ ಓಣಿಯಲ್ಲಿರುವ ಅಂಜಲಿ ಮನೆಗೆ ನುಗ್ಗಿದ ಆರೋಪಿ ಗಿರೀಶ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಪ್ರೀತಿ ನಿರಾಕರಿಸಿದ್ದಕ್ಕೆ ಈ ಕೊಲೆ ನಡೆದಿದೆ ಎನ್ನಲಾಗಿದೆ. ಘಟನೆಯಿಂದ ಆಕ್ರೋಶಗೊಂಡಿರುವ ಕುಟುಂಬಸ್ಥರು, ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಜಿಲ್ಲಾಧಿಕಾರಿಗಳು ಅಂಜಲಿ ಮನೆಗೆ ಬರುವವರೆಗೂ ಮೃತದೇಹ ಎತ್ತಲು ಬಿಡುವುದಿಲ್ಲ ಎಂದು ಕಿಮ್ಸ್ ಆಸ್ಪತ್ರೆ ಹಾಗೂ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿ ಕೊಲೆ: ಪ್ರೀತಿ ನಿರಾಕರಿಸಿದ್ದಕ್ಕೆ ಅಂಜಲಿ ಜೀವ ತೆಗೆದ ಪಾಪಿ. ಮೃತದೇಹದ ಆಂಬ್ಯುಲೆನ್ಸ್ ಗೆ ತಡೆ. ಅಂಜಲಿ ಮೃತದೇಹ ಅಂತಿಮ ಆಸ್ಪತ್ರೆ ಪ್ರಕ್ರಿಯೆಗಳು ಮುಗಿಯುತ್ತಿದ್ದಂತೆ…
ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಬಗ್ಗೆ ನಮಗೆ ಮಾಹಿತಿ ಇಲ್ಲ. ನಿಮಗೇನಾದರೂ ಇದ್ದರೆ ನಮಗೆ ತಿಳಿಸಿ. ನಿಮಗೆ ಗೊತ್ತಿದ್ದರೆ ಹೇಳಿ ನಮಗೆ ಸಹಾಯ ಆಗುತ್ತದೆ ಎಂದು ಮಾಧ್ಯಮಗಳ ಮುಂದೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಕೇಳಿಕೊಂಡ ಪ್ರಸಂಗ ನಡೆಯಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿತಿಗಳ ಪತ್ರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ. ಸಾಹಿತಿಗಳು ಅನೇಕ ವಿಷಯಗಳನ್ನು ಗಮನಿಸುತ್ತಾರೆ. ಸಿಎಂಗೆ ಪತ್ರ ಬರೆದಿದ್ದಾರೆ, ತರಿಸಿಕೊಂಡು ನೋಡುತ್ತೇನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು. ಸಿಎಂಗೆ ಬರೆದ ಪತ್ರದಲ್ಲಿ ಅವರು ಉಲ್ಲೇಖ ಮಾಡಿದ್ದನ್ನು ಎಸ್ ಐಟಿ ಪರಿಗಣಿಸುತ್ತೆ ಎಂದ ಅವರು, ಪ್ರಕರಣದ ಹಿಂದೆ ತಿಮಿಂಗಿಲ ಇದೆ ಎಂಬ ಮಾಜಿ ಸಿಎಂ ಎಚ್ ಡಿಕೆ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿ ತಿಮಿಂಗಿಲ ಯಾರು ಅಂತ ಹೇಳಲಿ. ಅವರಿಗೆ ಗೊತ್ತಿದೆ ಅಂದ ಮೇಲೆ ಹೇಳಬೇಕು ಅಲ್ವಾ? ಹೇಳದೆ ಇರುವುದೆ ದೊಡ್ಡ ತಪ್ಪು. ದಾಖಲೆ ಕೊಟ್ಟ…